ಕಾಂಗ್ರೆಸ್ ಒಂದು ಮುಳುಗುವ ಹಡಗು. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗುವುದರಿಂದ ರಾಜ್ಯದಲ್ಲಷ್ಟೇ ಅಲ್ಲ, ಎಲ್ಲೂ ಪರಿಣಾಮ ಉಂಟಾಗೋದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು
ವರದಿ:- ಮಲ್ಲಿಕಾರ್ಜುನ ಹೊಸಮನಿ, ಏಷಿಯಾನೆಟ್ ಸುವರ್ಣನ್ಯೂಸ್, ಬಾಗಲಕೋಟೆ.
ಬಾಗಲಕೋಟೆ (ಅ.17) : ಕಾಂಗ್ರೆಸ್ ಒಂದು ಮುಳುಗುವ ಹಡಗು. ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗುವುದರಿಂದ ರಾಜ್ಯದಲ್ಲಷ್ಟೇ ಅಲ್ಲ, ಎಲ್ಲೂ ಪರಿಣಾಮ ಉಂಟಾಗೋದಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು ದೇಶದಲ್ಲಿ 10 ವರ್ಷ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇತ್ತು, ಆಗ ಏಕೆ ಅಧ್ಯಕ್ಷ ರನ್ನಾಗಿ ಮಾಡಲಿಲ್ಲ. ಲೋಕಸಭೆ ಸೇರಿದಂತೆ ಒಟ್ಟು 11 ಬಾರಿ ಆಯ್ಕೆಗೊಂಡಿದ್ದಾರೆ. ಅವರನ್ನು ಮುಖ್ಯಮಂತ್ರಿ ಮಾಡಬಹುದಿತ್ತು. ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
undefined
ಅ.23ರಿಂದ 3 ದಿನ ಕಿತ್ತೂರು ಉತ್ಸವ: ಈ ಬಾರಿ ಎಲ್ಲ ಜಿಲ್ಲೆಗಳಿಗೆ ಜ್ಯೋತಿ, ಸಚಿವ ಕಾರಜೋಳ
ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಇಂತಹ ಸಮಯದಲ್ಲಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ಹೊರಟಿದೆ. ದೇಶದಲ್ಲಿ ಕಾಂಗ್ರೆಸ್ ಉಳಿಯುವುದಿಲ್ಲ ಎಂದರು. ದಲಿತರನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಖರ್ಗೆ ಅವರನ್ನು ಅಧ್ಯಕ್ಷರಾಗಿಸಲು ಹೊರಟಿದ್ದಾರೆ ಹೊರತು ದಲಿತರನ್ನು ಉದ್ದಾರ ಮಾಡಲು ಅಲ್ಲ ಎಂದರು.
ಶೀಘ್ರ ಕೃಷ್ಣಾ ನ್ಯಾಯಾಧೀಕರಣ ತೀರ್ಪು; ಕಾರಜೋಳ:
ಕೃಷ್ಣಾ ನ್ಯಾಯಾಧೀಕರಣ ತೀರ್ಪು ಹೊರಬರುವವರೆಗೂ ಹಂಚಿಕೆ ಆಗಿರುವ 130 ಟಿಎಂಸಿ ನೀರನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ನ್ಯಾಯಾಧೀಕರಣ ತೀರ್ಪು ಕೂಡ ಆದಷ್ಟು ಬೇಗ ಬರಲಿದೆ ಎನ್ನುವ ವಿಶ್ವಾಸವಿದೆ. ಈಗಾಗಲೇ ಸರ್ಕಾರ ಈ ನಿಟ್ಟಿನಲ್ಲಿ ಮಾಡಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡಿದೆ ಎಂದರು.
ರಾಜ್ಯ ಸರ್ಕಾರ ಯುಕೆಪಿ ಹಂತ-,3 ರ ಕಾಮಗಾರಿಗೆ ಆದ್ಯತೆ ನೀಡಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಎರಡನೇ ಹಂತದಲ್ಲಿನ 9 ಕಾಮಗಾರಿಗಳು ಸೇರಿದಂತೆ ಮೂರನೇ ಪುನರ್ ವಸತಿ ಮತ್ರು ಪುನರ್ ನಿರ್ಮಾಣ ಕಾಮಗಾರಿ 10 ಸಾವಿರ ಕೋಟಿ ರೂ. ಖರ್ಚು ಮಾಡಿ 2023 ರ ವೇಳೆ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದರು.
ಭಗವತಿ, ಶಿರೂರ ಮತ್ತು ಅನವಾಲ ಏತ ನೀರಾವರಿ ಯೋಜನೆಗಳಿಗೆ ಮಂಜೂರಾತಿ;
ಭಗವತಿ, ಶಿರೂರ ಮತ್ತು ಅನವಾಲ ಏತ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು. ಈ ಸಂಬಂಧ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿವೆ. ಶಾಸಕ ವೀರಣ್ಣ ಚರಂತಿಮಠರ ಸತತ ಪ್ರಯತ್ನದಿಂದಾಗಿ ಭಗವತಿ, ಶಿರೂರ ಏತ ನೀರಾವರಿ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದೆ. ಅನವಾಲ ಏತ ನೀರಾವರಿಗೆ ಸಚಿವ ನಿರಾಣಿ ಅವರೂ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಆದಷ್ಟು ಬೇಗ ಟೆಂಡರ್ ಕಾಮಗಾರಿ ಪೂರ್ಣಗೊಳಿಸಿ ಕಾಮಗಾರಿಗಳಿಗೆ ಆರಂಭಿಸುತ್ತೇವೆ ಎಂದರು.
ವಿಪಕ್ಷಗಳ ನಾಯಕರ ಮಾತಿಗೆ ಕವಡೆಕಾಸಿನ ಕಿಮ್ಮತ್ತಿಲ್ಲ: ಸಚಿವ ಗೋವಿಂದ ಕಾರಜೋಳ
ಸರ್ಕಾರ ಎಲ್ಲ ವರ್ಗದವರಿಗೆ ನ್ಯಾಯ ಕೊಡಿಸುತ್ತೆ:
ಸರ್ಕಾರ ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೆ,ಯಾವುದೇ ಸಮಾಜಕ್ಕೆ ಅನ್ಯಾಯ ಆಗದ ರೀತಿಯಲ್ಲಿ ಮೀಸಲಾತಿ ಜಾರಿಗೆ ತರುತ್ತೇವೆ ಎಂದು ಜಲ ಸಂಪನ್ಮೂಲಗಳ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಸಿದ್ದರಾಮಯ್ಯ ಏನಾದರೂ ಹೇಳಲಿ, ಜವಾಬ್ದಾರಿಯ ನಾಯಕರಿದ್ದಾರೆ ಅವರು ಏನ ಹೇಳಬೇಕಾಗಿದೆ ಹೇಳಲಿ, ಜನರಿಗೆ ಏನು ಸಂದೇಶ ಕೊಡ್ತಾರೆ ಕೊಡಲಿ ಎಂದು ಸಿದ್ದರಾಮಯ್ಯನವರು ಆರೋಪಕ್ಕೆ ಕಾರಜೋಳ ಅವರು ತಿರುಗೇಟು ನೀಡಿದರು.
ಈ ಸಂದರ್ಭದಲ್ಲಿ ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.