
ನವದೆಹಲಿ(ಸೆ.20) ಕೇಂದ್ರ ಸರ್ಕಾರ ನೂತನ ಸಂಸತ್ ಭವನದ ಮೊದಲ ಅಧಿವೇಶನದಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಬಿಲ್ ಮಂಡಿಸಿದೆ. ಇಂದು ಮಸೂದೆ ಮೇಲೆ ಚರ್ಚೆ ಆರಂಭಗೊಂಡಿದೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಚರ್ಚೆ ಆರಂಭಿಸಿದ್ದಾರೆ. ಕೇಂದ್ರ ಮಹಿಳಾ ಮೀಸಲಾತಿ ಬಿಲ್‌ಗೆ ಕಾಂಗ್ರೆಲ್ ಬೆಂಬಲೂ ಸೂಚಿಸುವುದಾಗಿ ಸೋನಿಯಾ ಗಾಂಧಿ ಹೇಳಿದ್ದಾರೆ. ಆದರೆ ಒಂದು ಷರತ್ತು ವಿಧಿಸಿದ್ದಾರೆ. ಹಿಂದುಳಿ ವರ್ಗಗಳ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದು ಪಟ್ಟು ಹಿಡಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳೆಯರಿಗೆ ಶೇಕಡಾ 33 ರಷ್ಟು ಮಹಿಳಾ ಮೀಸಲಾತಿ ನೀಡಬೇಕು ಎಂದು ಬಿಲ್ ಮಂಡಿಸಲಾಗಿದೆ. ಈ ಶೇಕಡಾ 33 ರಷ್ಟು ಮೀಸಲಾತಿಯಲ್ಲಿ ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾತಿ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಮಹಿಳಾ ಮೀಸಲಾತಿ ನನಗೆ ಭಾವನಾತ್ಮಕ ಬಿಲ್. ಕಾರಣ ಸ್ಥಳೀಯ ಚುನಾವಣೆಯಲ್ಲಿ ರಾಜೀವ್ ಗಾಂಧಿ ಮಹಿಳಾ ಮೀಸಲಾತಿ ಜಾರಿಮಾಡಿದ್ದರು. ಇದೀಗ ಕೇಂದ್ರ ಸರ್ಕಾರ ಮಂಡಿಸಿದ ನಾರಿ ಶಕ್ತಿ ವಂದನ್ ಅಧಿನಿಯಮಕ್ಕೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಜಕೀಯ ಪಕ್ಷಗಳು ದುರ್ಬಲ ಮಹಿಳೆಯರ ಆಯ್ಕೆ ಮಾಡೋ ಅಭ್ಯಾಸ ಹೊಂದಿವೆ: ಖರ್ಗೆ ಹೇಳಿಕೆಗೆ ಸಂಸತ್ತಲ್ಲಿ ಕೋಲಾಹಲ
ಮಹಿಳಾ ಮೀಸಲಾತಿ ಬಿಲ್ ವಿಚಾರ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಟಾಪಟಿ ನಡೆದಿದೆ. ಇದು ಯುಪಿಎ ತಂದಿರುವ ಬಿಲ್, ಇದರ ಕ್ರೆಡಿಟ್ ಕಾಂಗ್ರೆಸ್‌ಗೆ ಸಲ್ಲಲಿದೆ ಎಂದು ವಾದಿಸಿದೆ. ಇನ್ನು ಸದನದ ಹೊರಗೆ ಬಿಜೆಪಿ ಮೇಲೆ ಮುಗಿಬಿದ್ದಿರುವ ಕಾಂಗ್ರೆಸ್ ಗಂಬೀರ ಆರೋಪ ಮಾಡಿದೆ. ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಚುನಾವಣೆಗಾಗಿ ಬಿಜೆಪಿ ಮಾಡುತ್ತಿರುವ ಬೂಟಾಟಿಕೆ ಎಂದು ಕಾಂಗ್ರೆಸ್ ಮಂಗಳವಾರ ಟೀಕಿಸಿದೆ. ಇದನ್ನು 2029ಕ್ಕೂ ಮೊದಲು ಜಾರಿ ಮಾಡಲು ಸಾಧ್ಯವಿಲ್ಲ. ಆದರೂ ಇದನ್ನು ಮಂಡನೆ ಮಾಡಲಾಗುತ್ತಿದೆ ಎಂದು ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಮಸೂದೆಯನ್ನು ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಡನೆ ಮಾಡಲಾಗಿದೆ. ಇದು ಮಹಿಳೆಯರ ನಿರೀಕ್ಷೆಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಹೇಳಿದೆ. ‘2010ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಈ ಮಸೂದೆಗೆ ರಾಜ್ಯಸಭೆಯಲ್ಲಿ ಒಪ್ಪಿಗೆ ಸಿಕ್ಕಿತು. ಎಸ್‌ಸಿ, ಎಸ್‌ಟಿಗೆ ಮಾತ್ರ ದೊರಕಿರುವ ಮೀಸಲಾತಿಯನ್ನು ಎಲ್ಲರಿಗೂ ಒದಗಿಸಲು ಈ ಮಸೂದೆ ಮಂಡಿಸಲಾಗಿತ್ತು. ಈಗ ಮೋದಿ ಅವರು ಈ ಮಸೂದೆಯನ್ನು ಮಂಡಿಸಿದ್ದಾರೆ ಆದರೆ ಇದು ಜಾರಿಯಾಗಲು 1 ದಶಕವೇ ಆಗಲಿದೆ. ಇದನ್ನು ಬಿಜೆಪಿ ಜನರಿಗೆ ತಿಳಿಸಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್ ಸೇರಿದಂತೆ ಹಲವು ನಾಯಕರು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಂಡನೆಯಾಯ್ತು ಮಹಿಳಾ ಮೀಸಲಾತಿ ಮಸೂದೆ: ದೇವರು ನನಗೆ ಅವಕಾಶ ಕೊಟ್ಟಿದ್ದಾರೆ ಎಂದ ಪ್ರಧಾನಿ ಮೋದಿ
ಕಾಂಗ್ರೆಸ್ ಮಹಿಳೆಯರ ಅಭಿವೃದ್ಧಿ ಮತ್ತು ಅವರಿಗೆ ಮೀಸಲಾತಿ ನೀಡುವ ಬಗ್ಗೆ ಗಂಭೀರವಾಗಿ ಯೋಚಿಸಿಲ್ಲ. ಮಹಿಳಾ ಮೀಸಲಾತಿ ಮಸೂದೆಯನ್ನು ಅರಗಿಸಿಕೊಳ್ಳಲು ವಿಪಕ್ಷಗಳಿಗೆ ಸಾಧ್ಯವಾಗುತ್ತಿಲ್ಲ. ಸಾಂಕೇತಿಕವಾಗಿ ಇದರ ಬಗ್ಗೆ ಮಾತನಾಡುತ್ತಾರೆಯೇ ಹೊರತು, ಅವರು ಗಂಭೀರವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.