ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಮುನಿಯಪ್ಪ

Published : Apr 20, 2023, 03:00 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಮುನಿಯಪ್ಪ

ಸಾರಾಂಶ

ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆಯಲ್ಲಿ ನೀಡಿರುವ ಕುಟುಂಬದ ಮಹಿಳೆಯರಿಗೆ 2000 ರು. ನಗದು, 200 ಯೂನಿಟ್‌ ಉಚಿತ ವಿದ್ಯುತ್‌, ನಿರುದ್ಯೋಗ ಭತ್ಯೆ, ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ವಿತರಣೆ ಇತ್ಯಾದಿ ಭರವಸೆಗಳನ್ನು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಖಂಡಿತ ನೀಡುತ್ತದೆ: ಕೆ.ಎಚ್‌.ಮುನಿಯಪ್ಪ 

ವಿಜಯಪುರ(ಏ.20):  ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ದುರಾಡಳಿತದಿಂದ ರೋಸಿ ಹೋಗಿರುವ ಜನತೆ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ನಿರ್ಧಾರ ಮಾಡಿದ್ದಾರೆ. ಅದೇ ರೀತಿ ಕಾಂಗ್ರೆಸ್‌ ಪಕ್ಷ ಪ್ರಣಾಳಿಕೆಯಲ್ಲಿ ನೀಡಿರುವ ಕುಟುಂಬದ ಮಹಿಳೆಯರಿಗೆ 2000 ರು. ನಗದು, 200 ಯೂನಿಟ್‌ ಉಚಿತ ವಿದ್ಯುತ್‌, ನಿರುದ್ಯೋಗ ಭತ್ಯೆ, ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ವಿತರಣೆ ಇತ್ಯಾದಿ ಭರವಸೆಗಳನ್ನು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಖಂಡಿತ ನೀಡುತ್ತದೆ ಎಂದು ಮಾಜಿ ಸಂಸದ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಚ್‌.ಮುನಿಯಪ್ಪ ತಿಳಿಸಿದರು.

ಸಮೀಪದ ಬಿಜ್ಜವಾರ, ಹಾರೋಹಳ್ಳಿ, ಕೋರಮಂಗಲ ಗ್ರಾಮಗಳಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಸಿದ್ದರಾಮಯ್ಯನವರ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಆಶ್ವಾಸನೆಗಳನ್ನು ಈಡೇರಿಸಿದಂತೆ ಮುಂದೆಯೂ ಕಾಂಗ್ರೆಸ್‌ ಪಕ್ಷ ಎಲ್ಲಾ ಚುನಾವಣಾ ಆಶ್ವಾಸನೆಗಳನ್ನು ಈಡೇರಿಸುತ್ತದೆ ಎಂದು ತಿಳಿಸಿದರು.

ನಾನು ಸಿಎಂ ಆಕಾಂಕ್ಷಿಯಲ್ಲ: ಕೆ.ಎಚ್‌.ಮುನಿಯಪ್ಪ ಸ್ಪಷ್ಟನೆ

ಕೋರಮಂಗಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮುನಿಬೈರಪ್ಪ ಮಾತನಾಡಿ, ಬಿಜೆಪಿ ಆಡಳಿತದಲ್ಲಿ ರೈತರ ಆದಾಯ ದುಪ್ಪಟ್ಟಾಗುವ ಬದಲು, ರೈತರು ಕೃಷಿಗೆ ಬಳಸಲು ಕೊಳ್ಳುವ ಎಲ್ಲಾ ರಸಗೊಬ್ಬರ, ಚಿತ್ತನೆ ಬೀಜಗಳು, ಯಂತ್ರೋಪಕರಣಗಳ ಬೆಲೆ ದುಪ್ಪಟ್ಟಾಗಿ, ರೈತರು ಸಾಲವೆಂಬ ಶೂಲದಲ್ಲಿ ಸಿಲುಕಿ ನರಳುತ್ತಿದ್ದಾರೆ. ರೈತರನ್ನು ಸಾಲ ಮುಕ್ತರನ್ನಾಗಿ ಮಾಡಿ ಕೃಷಿಗೆ ಆದ್ಯತೆ ನೀಡಲು ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯ ಎಂದು ಹೇಳಿದರು.
ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ಸಾವಕನಹಳ್ಳಿ ಮುನಿರಾಜು ಮಾತನಾಡಿ, ಕಾಂಗ್ರೆಸ್‌ ಅಭ್ಯರ್ಥಿ ಮುನಿಯಪ್ಪ ಅವರನ್ನು ಗೆಲ್ಲಿಸಿದರೆ ಕೇವಲ ಕ್ಷೇತ್ರ ಮಾತ್ರ ಬೆಳೆಯುವುದಷ್ಟೇ ಅಲ್ಲ, ಇಡೀ ರಾಜ್ಯವೇ ಅಭಿವೃದ್ಧಿ ಪಥದೆಡೆಗೆ ನಡೆಯುವುದೆಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್‌ಸಿ ಘಟಕದ ಮಾಜಿ ಜಿಲ್ಲಾಧ್ಯಕ್ಷ ಚಿನ್ನಪ್ಪ ಮಾತನಾಡಿ, ಕೆ.ಎಚ್‌.ಮುನಿಯಪ್ಪ ಹೊರಗಿನಿಂದ ಬಂದವರೆಂಬುದು ಶುದ್ಧ ಸುಳ್ಳು. ವಿಜಯಪುರ ಪಕ್ಕದಲ್ಲಿ ಕೇವಲ ಎರಡು ಮೂರು ಕಿಲೋಮೀಟರ್‌ ದೂರದ ಕಂಬದಹಳ್ಳಿಯಲ್ಲಿ ಹುಟ್ಟಿದವರು. ತಾಯಿ ತವರಾದ ಚನ್ನಟ್ಟಿಯಲ್ಲಿ ಬೆಳೆದು ಬಂದವರು. ಕೇಂದ್ರ ಸಚಿವರಾಗಿದ್ದಾಗ ಅಭಿವೃದ್ಧಿ ಪರ ಸಾಕಷ್ಟುಕೆಲಸ ಮಾಡಿದ್ದು ಮುಂದಿನ ದಿನಗಳಲ್ಲಿಯೂ ಅವರಿಂದ ಅದೇ ರೀತಿ ಕೆಲಸವನ್ನು ನಿರೀಕ್ಷಿಸಬಹುದು ಎಂದು ತಿಳಿಸಿದರು.

ಸಿದ್ದರಾಮಯ್ಯ ಗೆದ್ದ ಬಳಿಕ ಕ್ಷೇತ್ರದ ಜವಾಬ್ದಾರಿ ಯಾರು ನೋಡಿಕೊಳ್ತಾರೆ ಗೊತ್ತಿಲ್ಲ: ಕೆ.ಎಚ್ ಮುನಿಯಪ್ಪ

ಇದೇ ಸಂದರ್ಭದಲ್ಲಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಕೋರಮಂಗಲ ಗ್ರಾಪಂ ಸದಸ್ಯರಾದ ಕೃಷ್ಣಪ್ಪ, ಹಾರೋಹಳ್ಳಿ ಗ್ರಾಪಂ ಉಪಾಧ್ಯಕ್ಷ ಸೊಣ್ಣಿಗೌಡ, ಮಾಜಿ ಅಧ್ಯಕ್ಷ ಚಂದ್ರಪ್ಪ, ಸದಸ್ಯರಾದ ಆಂಜನಮ್ಮ, ತಾಪಂ ಮಾಜಿ ಅಧ್ಯಕ್ಷೆ ಚೈತ್ರ ವೀರೇಗೌಡ, ಸುಮಾ ಮಂಜುನಾಥ್‌, ರಘು ಬೆಂಗಳೂರು ಚನ್ನಹಳ್ಳಿ ರಾಜಣ್ಣ, ಉಪಾಧ್ಯಕ್ಷ ರಾಧಾ, ಅನಂತಕುಮಾರಿ ಚಿನ್ನಪ್ಪ, ವಿಜಯಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಾಮಚಂದ್ರಪ್ಪ, ಬುಳ್ಳಹಳ್ಳಿ ರಾಜಪ್ಪ, ಸಂದೇನಹಳ್ಳಿ ಮುನಿಯಪ್ಪ, ವೀರೇಗೌಡ, ಚಿಕ್ಕನಹಳ್ಳಿ ವೆಂಕಟೇಶ್‌, ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್