
ಬೆಂಗಳೂರು, (ಫೆ.20): ಶಾಸಕ ಆನಂದ್ ಸಿಂಗ್ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್ .ಗಣೇಶ್ ಬಂಧನವಾಗಿದೆ.
ರಾಮನಗರ ಪೊಲೀಸರು ಶಾಸಕ ಕಂಪ್ಲಿ ಗಣೇಶ್ರನ್ನು ಹೊರರಾಜ್ಯದಲ್ಲಿ ಅರೆಸ್ಟ್ ಮಾಡಿರುವುದು ಪಕ್ಕಾ. ಆದ್ರೆ, ಯಾವ ಸ್ಥಳದಲ್ಲಿ ಬಂಧಿಸಿದ್ದಾರೆ ಎನ್ನುವುದು ಖಚಿತ ಮಾಹಿತಿ ಇಲ್ಲ.
ಇಂದು (ಬುಧವಾರ) ರಾತ್ರಿ ವೇಳೆಗೆ ಗಣೇಶ್ರನ್ನು ರಾಮನಗರಕ್ಕೆ ಕರೆತರುವ ಸಾಧ್ಯತೆ ಇದೆ. ಬಳಿಕ, ಕೋರ್ಟ್ ಮುಂದೆ ಹಾಜರುಪಡಿಸುತ್ತಾರೆ ಎಂದು ತಿಳಿದುಬಂದಿದೆ.
ಜನವರಿ 20 ರಂದು ಈಗಲ್ಟನ್ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಗಣೇಶ್ ಅವರು ವಿಜಯನಗರ (ಹೊಸಪೇಟೆ) ಶಾಸಕ ಆನಂದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು.
ಘಟನೆಯ ನಂತ್ರ, ಗಣೇಶ್ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆ (ಮಂಗಳವಾರ) ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ತೆಗೆದುಕೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.