ಖರ್ಗೆ ವಾರ್ನಿಂಗ್ ಬೆನ್ನಲ್ಲೇ ಕಾಂಗ್ರೆಸ್ ಬಣ ಜಗಳ ಸದ್ಯಕ್ಕೆ ಶಾಂತ: ತುಟಿ ಪಿಟಕ್‌ ಎನ್ನದ ನಾಯಕರು!

Published : Jan 19, 2025, 05:00 AM IST
ಖರ್ಗೆ ವಾರ್ನಿಂಗ್ ಬೆನ್ನಲ್ಲೇ ಕಾಂಗ್ರೆಸ್ ಬಣ ಜಗಳ ಸದ್ಯಕ್ಕೆ ಶಾಂತ: ತುಟಿ ಪಿಟಕ್‌ ಎನ್ನದ ನಾಯಕರು!

ಸಾರಾಂಶ

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳಿಂದ ಕೆಂಡಾಮಂಡಲರಾಗಿದ್ದ ಮಲ್ಲಿಕಾರ್ಜುನ ಖರ್ಗೆ, 'ಎಲ್ಲರೂ ಬಾಯಿ ಮುಚ್ಚಿಕೊಂಡಿರಿ. ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ. ಹೈಕಮಾಂಡ್ ಸೂಚನೆ ಮೀರಿ ಮಾತನಾಡಿದರೆ ಹೈಕಮಾಂಡ್ ದುರ್ಬಲ ಅಲ್ಲ ಎಂಬುದನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. 

ಬೆಂಗಳೂರು(ಜ.19):  ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಚಾರವಾಗಿ ಹೇಳಿಕೆ ನೀಡ ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯ ಕಾಂಗ್ರೆಸ್ ನಾಯಕ ರಿಗೆ ಬಹಿರಂಗ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಶಾಸ ಕರು, ಸಚಿವರು ಹಾಗೂ ನಾಯಕರು ಮೌನಕ್ಕೆ ಶರಣಾಗಿದ್ದಾರೆ. 

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳಿಂದ ಕೆಂಡಾಮಂಡಲರಾಗಿದ್ದ ಮಲ್ಲಿಕಾರ್ಜುನ ಖರ್ಗೆ, 'ಎಲ್ಲರೂ ಬಾಯಿ ಮುಚ್ಚಿಕೊಂಡಿರಿ. ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ. ಹೈಕಮಾಂಡ್ ಸೂಚನೆ ಮೀರಿ ಮಾತನಾಡಿದರೆ ಹೈಕಮಾಂಡ್ ದುರ್ಬಲ ಅಲ್ಲ ಎಂಬುದನ್ನು ತೋರಿಸಬೇಕಾಗುತ್ತದೆ' ಎಂದು ಶುಕ್ರವಾರ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಶನಿವಾರ ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಲು ಕೈ ನಾಯಕರು ನಿರಾಕರಿಸಿದ್ದಾರೆ.

ಬಾಯ್ಮುಚ್ಚಿಕೊಂಡು ಇದ್ದರೆ ಸರಿ, ಇಲ್ಲದಿದ್ದರೆ ಹೈಕಮಾಂಡ್‌ ಶಕ್ತಿ ತೋರಿಸ್ಬೇಕಾಗುತ್ತೆ: ಖರ್ಗೆ ಗರಂ!

ಖರ್ಗೆ ಸೂಚನೆ ಸರಿಯಿದೆ: 

ಸಚಿವ ಡಾ. ಎಚ್.ಸಿ.ಮಹದೇವಪ್ಪ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿರುವ ಮಾತು ನೂರಕ್ಕೆ ನೂರರಷ್ಟು ಸರಿ. ಎಲ್ಲರೂ ಅವರ ಮಾತು ಪಾಲನೆ ಮಾಡಬೇಕಿದೆ. ಶಿಸ್ತಿನ ಪಕ್ಷವನ್ನು ಸಂಘಟನೆ ಮಾಡಬೇಕು. ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ಖರ್ಗೆ ಅವರ ಸೂಚನೆಯನ್ನು ನಾವೆಲ್ಲರೂ ಪಾಲನೆ ಮಾಡಬೇಕು ಎಂದಷ್ಟೇ ಹೇಳಿದರು. 

ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯವೋ.. ಪ್ರಿಯಾಂಕ ಖರ್ಗೆ ಸಿಎಂ, ಮಲ್ಲಿಕಾರ್ಜುನ ಖರ್ಗೆ ಪಿಎಂ ಆಗೋದು ಅಷ್ಟೇ ಸತ್ಯ!

ವಿವೇಚನೆ ಬಳಸಿ ಮಾತು-ಪ್ರಿಯಾಂಕ್: 

ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ಬಗ್ಗೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಅನಗತ್ಯ ಹೇಳಿಕೆಗಳನ್ನು ನೀಡದಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯ ಮಂತ್ರಿ ಈಗಾಗಲೇ ಹೇಳಿದ್ದರು. ಅದನ್ನು ಎಐಸಿಸಿ ಅಧ್ಯಕ್ಷರು ಪುನರುಚ್ಚಾರ ಮಾಡಿ ದ್ದಾರೆ ಅಷ್ಟೇ. ಯಾರ ಬಾಯಿಗೂ ಬೀಗ ಹಾಕಲು ಆಗಲ್ಲ. ನಮ್ಮ ನಮ್ಮ ವಿವೇಚನೆ ಬಳಸಿ ನಾವು ಮಾತನಾಡಬೇಕು. ಮಾತಿನಿಂದ ಪಕ್ಷಕ್ಕೆ ಹಾನಿ ಆಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. 

'ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬ ಗಾದೆ ಮಾತಿನ ಸೂಕ್ಷ್ಮತೆಯನ್ನು ನಾವು ಅರ್ಥ ಮಾಡಿಕೊಳ್ಳಬೇಕು. ನಾವು ಯಾವುದೇ ಸ್ಥಾನಕ್ಕೆ ಗೆದ್ದರೂ ಅದು ಪಕ್ಷದ ಬಿ ಫಾರಂನಿಂದಲೇ ಗೆದ್ದಿರುತ್ತೇವೆ. ಅಧಿಕಾರ ಸಿಕ್ಕಮೇಲೆ ಸಿಕ್ಕಮೆ ಯಾವ ಕಾಂಗ್ರೆಸ್ ಪಾರ್ಟಿ, ಎಐಸಿಸಿ ಅಧ್ಯಕ್ಷರ ಯಾರು? ರಾಹುಲ್ ಗಾಂಧಿ ಯಾರು? ಹೈಕಮಾಂಡ್ ಏನು ಮಾಡುತ್ತದೆ ಎನ್ನುವುದು ಸರಿಯಲ್ಲ, ಪಕ್ಷದ ನಾಯಕರ ಸೂಚನೆಯಂತೆ ನಾವು ಕೆಲಸ ಮಾಡಬೇಕು' ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ: ಶಾಸಕ ಯತ್ನಾಳ್ ವ್ಯಂಗ್ಯ!
ನಾನು ಹತ್ತು ಲಕ್ಷದ ವಾಚಾದ್ರೂ ಕಟ್ಟುತ್ತೇನೆ, ಅದು ನನ್ನ ಆಸ್ತಿ: ಬಿಜೆಪಿಗೆ ತಿರುಗೇಟು ಕೊಟ್ಟ ಡಿಕೆಶಿ