ವೀಣಾ ಕಾಶಪ್ಪನವರಿಗೆ ಟಿಕೆಟ್‌ ಕೊಡಿ, ಇಲ್ಲಾಂದ್ರೆ ಮತದಾನ ಬಹಿಷ್ಕಾರ ಮಾಡುತ್ತೇವೆ: ಸಿದ್ದರಾಮಯ್ಯಗೆ ಗುದ್ದು?

By Sathish Kumar KHFirst Published Mar 18, 2024, 1:06 PM IST
Highlights

ಬಾಗಲಕೋಟೆ ಲೋಕಸಭಾ ಟಿಕೆಟ್‌ ಅನ್ನು ವೀಣಾ ಕಾಶಪ್ಪನವರ ಅವರಿಗೆ ನೀಡಬೇಕು. ಇಲ್ಲವಾದರೆ ನಾವು ಮತದಾನ ಬಹಿಷ್ಕಾರ ಮಾಡುವುದಾಗಿ ಕಾಶಪ್ಪನವರ ಬೆಂಬಲಿಗರು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಬೆಂಗಳೂರು (ಮಾ.18): ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್ ಅನ್ನು ವೀಣಾ ಕಾಶಪ್ಪನವರ ಅವರಿಗೆ ಟಿಕೆಟ್‌ ನೀಡಬೇಕು. ಇಲ್ಲವಾದರೆ ನಾವು ಮತದಾನ ಬಹಿಷ್ಕಾರ ಮಾಡುವುದಾಗಿ ನಿರ್ಣಯ ಕೈಗೊಂಡಿದ್ದೇವೆ ಎಂದು ಕಾಶಪ್ಪನವರ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಮುಂದೆ ಬಂದು ಪ್ರತಿಭಟನೆ ಮಾಡಿ ಸವಾಲು ಹಾಕಿದ್ದಾರೆ.

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆಗೂ ಮುನ್ನ ಟಿಕೆಟ್‌ಗಾಗಿ ಒತ್ತಡ ಹೆಚ್ಚಾಗಿದೆ. ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ವೀಣಾ ಕಾಶಪ್ಪನವರ್ ಗೆ ಲೋಕಸಭೆ ಟಿಕೆಟ್ ನೀಡುವಂತೆ ಆಗ್ರಹ ವ್ಯಕ್ತವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದ ಬಳಿ ಸೋಮವಾರ ಬೆಳಗ್ಗೆ ಜಮಾಯಿಸಿದ ಕಾರ್ಯಕರ್ತರು ವೀಣಾ ಅವರಿಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಸದ್ಯ ಬಾಗಲಕೋಟೆ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂಬುದು ಇನ್ನೂ ಘೋಷಣೆ ಆಗಿಲ್ಲ. ಆದರೆ, ಸಚಿವ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಹೆಸರು ಕೇಳಿ ಬರುತ್ತಿದೆ. ಹೀಗಾಗಿ, ಸಂಯುಕ್ತ ಪಾಟೀಲ್‌ಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು. ಲಿಂಗಾಯತ ಪಂಚಮಸಾಲಿ ಸಮುದಾಯದ ವೀಣಾ ಕಾಶಪ್ಪನವರ್‌ಗೆ ಟಿಕೆಟ್ ನೀಡುವಂತೆ ಆಗ್ರಹಿಸಲಾಗುತ್ತಿದೆ.

ಕಾಂಗ್ರೆಸ್‌ನಿಂದ ನನಗೆ ಆಫರ್ ಬಂದಿದೆ, ನಾಳೆಯೇ ನನ್ನ ನಿಲುವನ್ನು ತಿಳಿಸ್ತೇನೆ; ಸಂಸದ ಡಿ.ವಿ. ಸದಾನಂದಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಬಳಿ ವೀಣಾ ಕಾಶಪ್ಪನವರ್ ಹಾಗೂ ಅವರ ಬೆಂಬಲಿಗರಿಂದ ಪ್ರತಿಭಟನೆ ಮಾಡಲಾಗುತ್ತಿದೆ. ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ವೀಣಾ ಕಾಶಪ್ಪನವರ್ ಬೆಂಬಲಿಗರು, ಈ ಬಾರಿ ಬಾಗಲಕೋಟೆ ಕ್ಷೇತ್ರದಿಂದ ವೀಣಾ ಸೂಕ್ತ ಗೆಲುವಿನ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಟಿಕೆಟ್ ಕೊಟ್ಟರೆ ನಾವು ಕಾರ್ಯಕರ್ತರು ಗೆಲ್ಲಿಸಿಕೊಂಡು ಬರ್ತೀವಿ. ಒಂದು ವೇಳೆ ಕಾರ್ಯಕರ್ತರ ಮಾತು ಕೇಳದೆ, ನಾಯಕರ ಮಾತು ಕೇಳಿ ಬೇರೆಯವರಿಗೆ ಟಿಕೆಟ್ ಕೊಟ್ಟರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಸವಾಲು ಹಾಕಿದ್ದಾರೆ.

ಕಳೆದ 10 ವರ್ಷಗಳಿಂದ ಬಾಗಲಕೋಟೆ ಕ್ಷೇತ್ರದಲ್ಲಿ ವೀಣಾ ಕಾಶಪ್ಪನವರ ಸಾಕಷ್ಟು ಜನಪರ ಕೆಲಸ ಮಾಡಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರ ಪ್ರವಾಸ ಮಾಡಿ 5 ಶಾಸಕರನ್ನು ಗೆಲ್ಲಿಸಿಕೊಟ್ಟಿದ್ದಾರೆ. ಅವರು ಕ್ಷೇತ್ರದ ಮಹಿಳೆಯರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇನ್ನು ವೀಣಾ ಅವರನ್ನು ಬಿಟ್ಟು ಹೊರಗಿನವರಿಗೆ ಟಿಕೆಟ್ ಕೊಟ್ಟರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ನಮ್ಮ ಕಾರ್ಯಕರ್ತರು ನಿರ್ಣಯ ಕೈಗೊಂಡಿದ್ದೇವೆ ಎಂದು ತಿಳಿಸಿದರು. 

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಬಾಗಲಕೋಟೆ ಜಿಲ್ಲೆಯಲ್ಲಿ ಸಾಮಾನ್ಯ ಕಾರ್ಯಕರ್ತೆ ತರಹ. ಕೆಲಸ ಮಾಡಿದ್ದೇನೆ‌. ಬಾಗಲಕೋಟೆಯ ಮನೆ ಮಗಳಾಗಿ ಕೆಲಸ ಮಾಡಿದ್ದೇನೆ. ಇದಕ್ಕಾಗಿ ನಾನು ಇಲ್ಲಿಯತನಕ ಬಂದು ನಿಂತಿದ್ದೇನೆ. ಮಹಿಳೆಯರು ಕಣ್ಣೀರ್ ಮತ್ತು ನನ್ನ ಪರವಾಗಿ ಟಿಕೆಟ್ ಕೇಳಲು ಬೆಂಗಲಿಗರಿಗೆ ನಾನು ಅಭಾರಿಯಾಗಿರ್ತಿನಿ. ಅವರಲ್ಲಿ ಒಂದು ಆಂತಕ ಇದೆ ನನಗೆ ಟಿಕೆಟ್ ಕೈ ತಪ್ಪಬಿಡಬಹುದು ಎಂದು ಅದಕ್ಕಾಗಿ ಅವರು ಇಲ್ಲಿಯತನ ಕ ಬಂದಿದ್ದಾರೆ. ಯಾರಿಗೆ ಟಿಕೆಟ್ ಅನ್ನೋದನ್ನು ಹೈಕಮಾಂಡ್ ಇನ್ನೂ ನಿರ್ಧಾರ  ತಗೆದುಕೊಂಡಿಲ್ಲ ಎಂದು ಹೇಳಿದರು.

Lok Sabha Election 2024: ಚಿಕ್ಕಬಳ್ಳಾಪುರ ಟಿಕೆಟ್‌ಗೆ ಕೈ, ಬಿಜೆಪಿಯಲ್ಲಿ ಪೈಪೋಟಿ: ಡಾ.ಸುಧಾಕರ್‌- ಅಲೋಕ್‌ ಲಾಬಿ

ಇನ್ನು ಸಂಯುಕ್ತ ಪಾಟೀಲ್ ಗೆ ಟಿಕೆಟ್ ಕೇಳಿರುವ ವಿಚಾರದ ಕುರಿತು ಮಾತನಾಡಿದ ವೀಣಾ ಕಾಶಪ್ಪನವರ, ಅವರು ಟಕೆಟ್ ಗಾಗಿ ಅರ್ಜಿ ಹಾಕಿರಲಿಲ್ಲ. ಅವರು ಅರ್ಜಿ ಹಾಕಿದ ಬಗ್ಗೆ ಉಸ್ತುವಾರಿ ಸಚಿವ ಪ್ರಿಯಾಂಕಾ ಖರ್ಗೆಯವರು ಸಹ ಹೇಳಿರಲಿಲ್ಲ. ಅವರೂ ಕೂಡ ಟಿಕೆಟ್ ಆಕಾಂಕ್ಷಿಯೆಂದು ಮಾಧ್ಯಮಗಳಲ್ಲಿ ನೋಡಿದಾಗಲೇ ಗೊತ್ತಾಗಿದೆ. ಕಳೆದ ಬಾರಿ ನನಗೆ ಕೊನೆ ಕ್ಷಣದಲ್ಲಿ ಟಿಕೆಟ್ ನೀಡಿದ್ದರು. ಆದ್ರೂ ನಾನು ಐದು ಲಕ್ಷ ಮತಗಳನ್ನ ಪಡೆದಿದ್ದೇನೆ. ಯಾಕೆ ಇನ್ನೂ ಟಿಕೆಟ್ ಘೊಷಿಸಿಲ್ಲ ಅನ್ನೋದನ್ನ ನಮ್ಮ ನಾಯಕರೇ ಉತ್ತರಿಸಬೇಕು. ನನ್ಮ ಪತಿ ವಿಜಯಾನಂದ್ ಕಾಶಪ್ಪನವರ್ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು ನನಗೆ ಬೆಂಬಲ ಸೂಚಿಸಿದ್ದಾರೆ. ನನ್ನ ಪತಿ ಬೆಂಬಲದಿಂದಲ್ಲೇ ನಾನು ಇಲ್ಲಿ ಇದ್ದೇನೆ‌‌. ಟಿಕೆಟ್ ಸಿಗದಿದ್ದರೆ ಏನ್ ಮಾಡ್ತೀರಾ ಎಂಬ ಪ್ರಶ್ನೆಗೆ ಮೊದಲು ಟಿಕೆಟ್ ಪ್ರಕಟಣೆಯಾಗಲಿ ಅಮೇಲೆ ನೋಡೋಣ ಎಂದರು.

click me!