
ಚಳ್ಳಕೆರೆ (ಜು.29): ಕರ್ನಾಟಕದಲ್ಲಿ ಯಾರೂ ಊಹಿಸದ ಫಲಿತಾಂಶ ನಮಗೆ ಬಂದಿದೆ. ಕಾಂಗ್ರೆಸ್ ಪಕ್ಷದ ಗೆಲುವಿಗೆ ಮತದಾರರು ಎಲ್ಲಾ ರೀತಿ ಸಹಕಾರ ನೀಡಿದ್ದಾರೆ. ಇದೇ ಉತ್ಸಾಹದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚಿನ ಸ್ಥಾನಗಳನ್ನು ಪಡೆದು ಕೇಂದ್ರದಲ್ಲಿ ಆಡಳಿತ ನಡೆಸುವ ದಿನಗಳು ದೂರವಿಲ್ಲವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ನವದೆಹಲಿಯ ಪಕ್ಷದ ಕಾರ್ಯಾಲಯದಲ್ಲಿ ತಮ್ಮನ್ನು ಭೇಟಿ ಮಾಡಿದ ಚಳ್ಳಕೆರೆ ಕ್ಷೇತ್ರದ ಟಿ.ರಘುಮೂರ್ತಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರೊಡನೆ ಚರ್ಚೆ ಸಂದರ್ಭದಲ್ಲಿ ಮಾತನಾಡಿದರು. ಎನ್‌ಡಿಎ ನೇತೃತ್ವದ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರಮೋದಿ ವೈಪಲ್ಯಗಳ ಹಾದಿಯಲ್ಲಿ ಸಿಲುಕಿದ್ದು, ಇದು ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ದಿಕ್ಸೂಚಿಯಾಗಲಿದೆ ಎಂದರು.
ಅಧಿಕ ಭಾರದ ಕಲ್ಲು ಸಾಗಾಣಿಕೆ ವಿರುದ್ಧ ಕ್ರಮಕ್ಕೆ ಶಾಸಕ ಸುಬ್ಬಾರೆಡ್ಡಿ ಸೂಚನೆ
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ರಾಜ್ಯದ ಮತದಾರರಿಗೆ ನೀಡಿದ ಭರವಸೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಐದು ಭರವಸೆಗಳ ಈಡೇರಿಕೆ ನಿಟ್ಟಿನಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದ್ದಾರೆ. ರಾಜ್ಯದಲ್ಲೂ ಸಹ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆದಿವೆ ಎಂದರು.
ಉತ್ತರ ಕನ್ನಡ: ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಬ್ಯಾನ್
ಶಾಸಕ ಟಿ.ರಘುಮೂರ್ತಿ ಮಾತನಾಡಿ, ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ ಜನರು ಹೆಚ್ಚಾಗಿರುವ ಕ್ಷೇತ್ರವಾಗಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಆರ್ಥಿಕ ನೆರವನ್ನು ನಿರೀಕ್ಷೆ ಮಾಡಲಾಗುತ್ತಿದೆ. ಹ್ಯಾಟ್ರಿಕ್ ಗೆಲುವಿಗೆ ಕಾರಣರಾದ ಮತದಾರರಿಗೆ ಹೆಚ್ಚಿನ ಸೌಲಭ್ಯ ನೀಡಿ ಅವರ ಋುಣವನ್ನು ತೀರಿಸಬೇಕಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ತಾವು ಸಹ ಮುಖ್ಯಮಂತ್ರಿಗಳಿಗೆ ಹೆಚ್ಚಿನ ಅನುದಾನ ನೀಡುವ ಬಗ್ಗೆ ಸೂಚನೆ ನೀಡುವಂತೆ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.