ಶಿಕ್ಷಕರು, ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಸಚಿವ ಕೆ.ಜೆ.ಜಾರ್ಜ್

By Kannadaprabha News  |  First Published May 19, 2024, 5:01 PM IST

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟದಿಂದ ಪ್ರಚಾರ ಕೈಗೊಂಡು ಗೆಲುವಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು. 


ಚಿಕ್ಕಮಗಳೂರು (ಮೇ.19): ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟದಿಂದ ಪ್ರಚಾರ ಕೈಗೊಂಡು ಗೆಲುವಿಗೆ ಸಹಕರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ನಗರದ ರೋಟರಿ ಸಭಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕಾರಿ ಸಮಿತಿ ಹಾಗೂ ವಿಧಾನ ಪರಿಷತ್ ಚುನಾವಣಾ ತಯಾರಿ ಸಭೆಯಲ್ಲಿ ಮಾತನಾಡಿದ ಅವರು ಶಿಕ್ಷಕರು- ಪಧವೀಧರರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವು ನಿಶ್ಚಿತವೆಂದು ಹೇಳಿದರು.

ಶಿಕ್ಷಕರ ಹಾಗೂ ಪದವಿಧರರ ಕ್ಷೇತ್ರದ ಅಭ್ಯರ್ಥಿಗಳ ಚುನಾವಣೆ ತಮ್ಮ ಚುನಾವಣೆಯೆಂದು ಪರಿಗಣಿಸಬೇಕು. ಮುಖ್ಯವಾಗಿ ಶಿಕ್ಷಕ-ಪದವೀಧರ ಕ್ಷೇತ್ರದಲ್ಲಿ ಜಯ ಸಾಧಿಸಿದರೆ ಮುಂದಿನ ಎಂತಹದ್ದೆ ಚುನಾವಣಾ ಬರಲೀ ಸುಲಭವಾಗಿ ಎದುರಿಸುವ ಧೈರ್ಯ ಕಾಂಗ್ರೆಸ್ ಪಕ್ಷಕ್ಕೆ ಬರಲಿದೆ ಎಂದು ತಿಳಿಸಿದರು. ರಾಜ್ಯದ ಪ್ರತಿಯೊಂದು ಚುನಾವಣೆಯಲ್ಲಿ ಶಿಕ್ಷಕರು ಹಾಗೂ ಪದವಿಧರರು ನಿರಂತರ ಕಾರ್ಯಪ್ರವೃತ್ತರಾಗಿ ಶ್ರಮವಹಿಸುವುದು ಸುಲಭದ ಮಾತಲ್ಲ. ಚುನಾವಣಾ ಫೌಂಡೆಷನ್ ಆಗಿ ಕರ್ತವ್ಯ ನಿರ್ವಹಿಸುವವರ ಸಮಸ್ಯೆ ಆಲಿಸುವ ಹಾಗೂ ಸವಲತ್ತು ಸಮರ್ಪಕವಾಗಿ ಒದಗಿಸಲು ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಬೇಕು ಎಂದರು.

Tap to resize

Latest Videos

undefined

ಡಿ.ಕೆ.ಶಿವಕುಮಾರ್ ಸಿಎಂ ಆಗುವುದು ನಿಶ್ಚಿತ: ಕಲ್ಮನೆ ಸುರೇಶ್

ಜಿಲ್ಲೆಯ ಐದು ಶಾಸಕರು ಈ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪಂಚಾಯಿತಿ ಮಟ್ಟದಿಂದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಹಾಗೂ ಆಯನೂರು ಮಂಜುನಾಥ್ ಪರವಾಗಿ ಚುನಾವಣಾ ಅಖಾಡಕ್ಕೆ ಇಳಿದು ಗೆಲುವಿಗೆ ಮುಂದಾಗಬೇಕು ಎಂದು ಕಿವಿಮಾತು ಹೇಳಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಜಿಲ್ಲಾ ಸಮಿತಿಯಲ್ಲಿ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ಸೇರಿ ಅನೇಕ ಸೆಲ್‌ಗಳನ್ನು ಸ್ಥಾಪಿಸಿ ಪದಾಧಿಕಾರಿ ಆಯ್ಕೆ ಮಾಡಲಾಗಿದ್ದು ಆಯಾ ಕ್ಷೇತ್ರಗಳಲ್ಲಿ ಮುಖಂಡರುಗಳು ಅಭ್ಯರ್ಥಿಗಳ ಕರಪತ್ರ ಹಂಚುವ ಮೂಲಕ ಪ್ರಚಾರ ಕೈಗೊಂಡು ಗೆಲುವಿಗೆ ಸಕ್ರಿಯವಾಗಿ ಸಹಕರಿಸಬೇಕು ಎಂದರು.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ಪಕ್ಷದ ಅಭ್ಯರ್ಥಿಗಳನ್ನು ಆರಾಮವಾಗಿ ದಡ ಸೇರಿಸುವ ಜವಾಬ್ದಾರಿ ಮತದಾರರು ಹಾಗೂ ಕಾರ್ಯಕರ್ತರ ಮೇಲಿದೆ. ಆ ನಿಟ್ಟಿನಲ್ಲಿ ವಾರ್ ರೂಂ ರಚನೆಗೊಳಿಸಿದ್ದು ಮುಖಂಡರುಗಳು ಕಾಂಗ್ರೆಸ್ ಪಕ್ಷದ ನಿಲುವುಗಳನ್ನು ಶಿಕ್ಷಕರು-ಪದವೀಧರ ಕ್ಷೇತ್ರದ ಮತದಾರರಿಗೆ ಮನವರಿಕೆಗೊಳಿಸಲು ಮುಂದಾಗಬೇಕು ಎಂದು ಹೇಳಿದರು. ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿ, ಚುನಾವಣಾ ಪ್ರಚಾರ ಕೈಗೊಳ್ಳುವ ಸಲುವಾಗಿ ಕೆಲವೇ ದಿನಗಳ ಕಾಲಾವಕಾಶದ ನಡುವೆಯು ಪ್ರತಿಯೊಂದು ಜಿಲ್ಲೆಗಳಿಗೂ ಭೇಟಿ ನೀಡಿ ಸಭೆ ನಡೆಸುವ ಮೂಲಕ ಪ್ರಚಾರ ಕೈಗೊಳ್ಳಲಾಗಿದೆ. ಉಳಿದಂತೆ ಸ್ಥಳೀಯ ಕಾರ್ಯಕರ್ತರು ತಾಲೂಕು ಮಟ್ಟದಲ್ಲಿ ಗೆಲುವಿಗೆ ಶ್ರಮವಹಿಸಬೇಕು ಎಂದು ತಿಳಿಸಿದರು.

ಅಂತರ್ಜಲ ಕುಸಿತ: ನೀರಿಲ್ಲದೇ ನದಿಗಳ ಒಡಲು ಖಾಲಿ ಖಾಲಿ!

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿ, ವಿರೋಧ ಪಕ್ಷದ ಮುಖಂಡರುಗಳು ಧೈರ್ಯವಾಗಿ ಚುನಾವಣೆ ಎದುರಿಸಲಾಗದೇ ತಮ್ಮದೇ ಹೆಸರಿನಲ್ಲಿ ಇನ್ನೋರ್ವ ಅಭ್ಯರ್ಥಿ ಕಣಕ್ಕಿಳಿಸಿ ಮತ ವಿಭಜಿಸಲು ಯತ್ನಿಸುತ್ತಿರುವುದು ಸರಿಯಲ್ಲ. ಹಾಗಾಗಿ ಮತದಾರರು ಗೊಂದಲಕ್ಕೆ ಒಳಗಾಗದೇ ಸಮರ್ಪಕವಾಗಿ ಮತಯಾಚಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್, ಶಾಸಕರುಗಳಾದ ಎಚ್.ಡಿ.ತಮ್ಮಯ್ಯ, ನಯನ ಮೋಟಮ್ಮ, ಕೆ.ಆರ್‌. ಆನಂದ್, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಮುಖಂಡರುಗಳಾದ ಡಾ.ಡಿ.ಎಲ್.ವಿಜಯ್‌ಕುಮಾರ್, ಡಾ. ಬಿ.ಎಲ್‌. ಶಂಕರ್‌, ಎಚ್.ಪಿ.ಮಂಜೇಗೌಡ, ಗಾಯತ್ರಿ ಶಾಂತೇಗೌಡ, ಎಚ್.ಹೆಚ್.ದೇವರಾಜ್, ಬಿ.ಬಿ.ನಿಂಗಯ್ಯ, ಎಂ.ಪಿ.ಕುಮಾರಸ್ವಾಮಿ, ನಯಾಜ್, ಎಂ.ಡಿ.ರಮೇಶ್ ಹಾಜರಿದ್ದರು.

click me!