ಲೋಕಸಭಾ ಚುನಾವಣೆಯಲ್ಲಿ ಏಕೆ ಈ ರೀತಿ ಮತದಾನವಾಗಿದೆ ಎಂಬುದರ ಬಗ್ಗೆ ಕಾಂಗ್ರೆಸ್‌ನ ಒಕ್ಕಲಿಗ ನಾಯಕರ ಜತೆಗೆ ಡಿನ್ನರ್ ಮೀಟಿಂಗ್ ನಡೆಸಿ ಚರ್ಚೆ ನಡೆಸಿದ್ದೇವೆ. ಸೋತಿರುವುದನ್ನು ಒಪ್ಪಿಕೊಳ್ಳಬೇಕು. ರಾಜಕಾರಣ ಒಂದೇ ರೀತಿ ಇರುವುದಿಲ್ಲ 6 ತಿಂಗಳಿನಲ್ಲಿ ಜನರ ಭಾವನೆ ಬದಲಾವಣೆ ಆಗುತ್ತದೆ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು(ಜೂ.15): ಲೋಕಸಭಾ ಚುನಾವಣೆ ಫಲಿತಾಂಶದ ಬಗ್ಗೆ ಪಕ್ಷದ ಕಾರ್ಯಕರ್ತರು ಚಿಂತೆ ಮಾಡುವುದು ಬೇಡ. 2028ಕ್ಕೆ ಮತ್ತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಏಕೆ ಈ ರೀತಿ ಮತದಾನವಾಗಿದೆ ಎಂಬುದರ ಬಗ್ಗೆ ಕಾಂಗ್ರೆಸ್‌ನ ಒಕ್ಕಲಿಗ ನಾಯಕರ ಜತೆಗೆ ಡಿನ್ನರ್ ಮೀಟಿಂಗ್ ನಡೆಸಿ ಚರ್ಚೆ ನಡೆಸಿದ್ದೇವೆ. ಸೋತಿರುವುದನ್ನು ಒಪ್ಪಿಕೊಳ್ಳಬೇಕು. ರಾಜಕಾರಣ ಒಂದೇ ರೀತಿ ಇರುವುದಿಲ್ಲ 6 ತಿಂಗಳಿನಲ್ಲಿ ಜನರ ಭಾವನೆ ಬದಲಾವಣೆ ಆಗುತ್ತದೆ ಎಂದರು.
ಕಾಂಗ್ರೆಸ್ ಯಾರ ಮೇಲೂ ದ್ವೇಷ ರಾಜಕಾರಣ ಮಾಡೊಲ್ಲ: ಡಿಕೆ ಶಿವಕುಮಾರ
ಈ ಹಿಂದೆ ಚಲುವರಾಯಸ್ವಾಮಿ, ಬಾಲಕೃಷ್ಣ ಇವರೆಲ್ಲರೂ 50 ಸಾವಿರ ಮತದ ಅಂತರದಲ್ಲಿ ಸೋತಿದ್ದರು. ಇದೀಗ ಪುನಃ ವಾಪಸ್ ಗೆದ್ದು ಬಂದಿದ್ದಾರೆ. ಯಾವುದೂ ಶಾಶ್ವತವಲ್ಲ ಎಂದರು.
2019ರ ಲೋಕಸಭಾ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನ ಗೆದ್ದಿದ್ದೆವು. ಆದರೆ ಈ ಬಾರಿ 9 ಸ್ಥಾನ ಗೆದ್ದಿದ್ದೇವೆ. ನಿರೀಕ್ಷೆಯಂತೆ ನಾಲ್ಕೈದು ಸ್ಥಾನ ಕಡಿಮೆ ಬಂದಿವೆ. ಪಕ್ಷದ ಕಾರ್ಯಕರ್ತರು ಚಿಂತೆ ಮಾಡುವುದು ಬೇಡ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನಾನು ಒಟ್ಟಿಗೆ ದುಡಿದು ಮುಂದಿನ 2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.