ಈ ಬಾರಿ ದೇಶದಲ್ಲಿ ಹಿಂದೆ ಜನಪರ ಆಡಳಿತ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ಜನರು ಒಲವನ್ನು ತೋರುತ್ತಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವ ಎನ್.ಎಸ್ ಬೋಸರಾಜು
ರಾಯಚೂರು(ಡಿ.19): ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಭಾನುವಾರ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಆಯ್ಕೆಯ ಕುರಿತಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಹಾಗೂ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್.ಬೋಸರಾಜು ಅವರ ನೇತೃತ್ವದಲ್ಲಿ ಜಿಲ್ಲಾ ಪ್ರಮುಖ ಮುಖಂಡರ ಮುಕ್ತ ಸಮಾಲೋಚನೆ ನಡೆಯಿತು.
ಸಣ್ಣ ನೀರಾವರಿ ಹಾಗೂ ವಿಜ್ಞಾನ, ತಂತ್ರಜ್ಞಾನ ಖಾತೆ ಸಚಿವ ಎನ್.ಎಸ್ ಬೋಸರಾಜು ಮಾತನಾಡಿ, ಈ ಬಾರಿ ದೇಶದಲ್ಲಿ ಹಿಂದೆ ಜನಪರ ಆಡಳಿತ ನೀಡಿರುವ ಕಾಂಗ್ರೆಸ್ ಪಕ್ಷಕ್ಕೆ ಜನರು ಒಲವನ್ನು ತೋರುತ್ತಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
undefined
ಎಚ್‌ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾದ್ರೆ ರಾಜ್ಯಕ್ಕೂ, ದೇಶಕ್ಕೂ ಒಳ್ಳೆಯದಾಗುತ್ತೆ: ಕೆಎಸ್ ಈಶ್ವರಪ್ಪ
ನಾವೆಲ್ಲರೂ ರಾಯಚೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲುವಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.