ರಾಜ್ಯದಲ್ಲಿ ಸ್ವಂತ ಸಾಮರ್ಥ್ಯದಲ್ಲಿ ಕಾಂಗ್ರೆಸ್‌ ಆಡಳಿತ: ಸಚಿವ ಡಾ.ಎಂ.ಸಿ.ಸುಧಾಕರ್

Published : May 18, 2025, 08:38 PM IST
ರಾಜ್ಯದಲ್ಲಿ ಸ್ವಂತ ಸಾಮರ್ಥ್ಯದಲ್ಲಿ ಕಾಂಗ್ರೆಸ್‌ ಆಡಳಿತ: ಸಚಿವ ಡಾ.ಎಂ.ಸಿ.ಸುಧಾಕರ್

ಸಾರಾಂಶ

ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿ ಎರಡು ವರ್ಷ ಕಳೆದಿದ್ದು ರಾಜ್ಯದಲ್ಲಿ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಪಕ್ಷದ ಎಲ್ಲಾ ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಿದ್ದರ ಪರಿಣಾಮ ಇಂದು ಸುಭದ್ರ ಸರ್ಕಾರ ರಚನೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು.   

ಚನ್ನಗಿರಿ (ಮೇ.18): ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿ ಎರಡು ವರ್ಷ ಕಳೆದಿದ್ದು ರಾಜ್ಯದಲ್ಲಿ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಪಕ್ಷದ ಎಲ್ಲಾ ಕಾರ್ಯಕರ್ತರು ಹಗಲಿರುಳು ಕೆಲಸ ಮಾಡಿದ್ದರ ಪರಿಣಾಮ ಇಂದು ಸುಭದ್ರ ಸರ್ಕಾರ ರಚನೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ಪಟ್ಟಣದ ಹೊರ ವಲಯದಲ್ಲಿರುವ ಶ್ರೀ ಮೌದ್ಗಲ್ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಸರ್ಕಾರದ 2ನೇ ವರ್ಷದ ಸಂಭ್ರಮಾಚರಣೆಗಾಗಿ ಹೊಸಪೇಟೆಯಲ್ಲಿ ನಡೆಯಲಿರುವ ಹಕ್ಕುಪತ್ರಗಳ ವಿತರಣೆ ಮತ್ತು ಬೃಹತ್ ಸಮಾವೇಶದ ಅಂಗವಾಗಿ ಚನ್ನಗಿರಿ-ಸಂತೆಬೆನ್ನೂರು ಬ್ಲಾಕ್ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಪೂರ್ವಭಾವಿ ಸಭೆಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಚುನಾವಣೆಯ ಸಂದರ್ಭದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದು ಇದರಿಂದ ರಾಜ್ಯದ ಜನತೆಯ ಮೆಚ್ಚುಗೆಗೆ ಪಾತ್ರವಾದ ಸರ್ಕಾರವಾಗಿದೆ. ಇದನ್ನು ಸಹಿಸದ ನಮ್ಮ ವಿರೋಧಪಕ್ಷದ ನಾಯಕರು ಸರ್ಕಾರ ದಿವಾಳಿಯಾಗಿದೆ ಎಂದು ಹೇಳುತ್ತಿದ್ದರು. ಗ್ಯಾರಂಟಿಗಳ ಅನುಷ್ಠಾನದ ಜತೆಗೆ ರಾಜ್ಯದ ಅಭಿವೃದ್ದಿಗೂ ಸಾಕಷ್ಟು ಕಾಮಗಾರಿಗಳನ್ನು ಜಾರಿಗೆ ತಂದಿದೆ ಎಂದರು.

ಬಿಜೆಪಿಯವರು ಜಾತಿ-ಧರ್ಮಗಳ ಮಧ್ಯೆ ವಿಷ ಬೀಜವನ್ನು ಬಿತ್ತುವ ಕೆಲಸ ಮಾಡುತ್ತಿದ್ದು ಧರ್ಮದ ಹೆಸರಿನಲ್ಲಿ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ಅವರ ಉದ್ದೇಶ ಮತಗಳಿಸಬೇಕು ಅಧಿಕಾರಕ್ಕೆ ಬರಬೇಕು ಎನ್ನುವುದೇ ಆಗಿದ್ದು ಧರ್ಮದ ಹೆಸರಿನಲ್ಲಿ ಜನರನ್ನು ದೂರಮಾಡುವ ಕೆಲಸ ಮಾಡುತ್ತಿದ್ದಾರೆ ಬಿಜೆಪಿಗರು ಎಂದರು. ಅಪರೇಷನ್ ಸಿಂದೂರ ಬಗ್ಗೆ ನಮಗೂ ಹೆಮ್ಮೆಇದೆ. ಸೈನಿಕರಿಗೆ ಆತ್ಮಸ್ತೈರ್ಯ ತುಂಬಲು ಮೊನ್ನೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಿರಂಗಾ ಯಾತ್ರೆಯನ್ನು ನಡೆಸಲಾಗಿದೆ ಎಂದರು.

ಪೋಡಿ ಮುಕ್ತ ಜಿಲ್ಲೆಗೆ ತ್ವರಿತಗತಿಯಲ್ಲಿ ಕೆಲಸ ಮಾಡಿ: ಸಚಿವ ಮುನಿಯಪ್ಪ

ಈ ದೇಶದ ಪ್ರಧಾನ ಮಂತ್ರಿಗಳಾದ ಜವಹರಲಾಲ್ ನೆಹರು, ಸರ್ದಾರ್ ವಲ್ಲಭಬಾಯಿ ಪಟೇಲ್, ಮಹತ್ಮಗಾಂಧಿ ಸೇರಿದಂತೆ ಇನ್ನು ಅನೇಕರ ಮಾರ್ಗದರ್ಶನದಲ್ಲಿ ಕೃಷಿ ಕ್ಷೇತ್ರ, ಕೈಗಾರಿಕಾ ಕ್ಷೇತ್ರ, ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಿಗೂ ಭದ್ರ ಬುನಾದಿಯನ್ನು ಹಾಕಿದ್ದೇವೆ. ಈಗಿನ ಬಿಜೆಪಿಯವರು 60-70 ವರ್ಷಗಳಿಂದ ಈ ದೇಶ ಯಾವುದೇ ಅಭಿವೃದ್ದಿ ಹೊಂದಿಲ್ಲ ಎಂದು ಹೇಳುತ್ತಿರುವುದು ಸರಿಯಲ್ಲ ಎಂದು ಲೇವಡಿ ಮಾಡಿದರು. ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್, ಶಾಸಕ ಬಸವರಾಜ ವಿ.ಶಿವಗಂಗಾ, ಕೆಪಿಸಿಸಿ ಕಾರ್ಯದರ್ಶಿ ವಡ್ನಾಳ್ ಜಗದೀಶ್, ಹೊದಿಗೆರೆ ರಮೇಶ್, ಸಿ.ನಾಗರಾಜ್, ವಿರೇಶ್ ನಾಯ್ಕ್, ಜಬೀಉಲ್ಲಾ, ಲೋಕಣ್ಣ, ಅಸ್ಲಾಂ, ಜಿ.ನಿಂಗಪ್ಪ, ಕಾಪೀಪುಡಿ ಶಿವಾಜಿರಾಜ್, ಜಿತೇಂದ್ರ, ಬೈರನಹಳ್ಳಿ ಮಂಜಪ್ಪ, ಜಯಣ್ಣ, ಹನುಮಂತಪ್ಪ, ಜಗದೀಶ್, ಇಮ್ತಿಯಾಜ್, ಗುರುವಾಬೋವಿ, ಶೇಖರಪ್ಪ, ಜ್ಯೋತಿಕೊಟ್ರೇಶ್ ಕೋರಿ, ನಟರಾಜ್, ಗೌಸ್ ಪೀರ್, ಮಾವಿನಕಟ್ಟೆ ಶ್ರೀಕಾಂತ್, ಸಂಜು ಪಾಟೀಲ್, ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ