ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಲು, ಹೆಚ್ಚೆಚ್ಚು ತೆರಿಗೆ ವಿಧಿಸಲು ಮುಂದಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಒಂದು ಕಡೆ ಗ್ಯಾರಂಟಿ ಜಾರಿಗೊಳಿಸುವುದಾಗಿ ಹೇಳಿ, ಮತ್ತೊಂದು ಕಡೆ ಗ್ರಾಹಕರಿಗೆ ಪೆಟ್ಟು ಕೊಡುತ್ತಿದ್ದಾರೆ.
ಮೈಸೂರು (ಜೂ.06): ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಲು, ಹೆಚ್ಚೆಚ್ಚು ತೆರಿಗೆ ವಿಧಿಸಲು ಮುಂದಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಒಂದು ಕಡೆ ಗ್ಯಾರಂಟಿ ಜಾರಿಗೊಳಿಸುವುದಾಗಿ ಹೇಳಿ, ಮತ್ತೊಂದು ಕಡೆ ಗ್ರಾಹಕರಿಗೆ ಪೆಟ್ಟು ಕೊಡುತ್ತಿದ್ದಾರೆ. ಈ ವಿಷಯದಲ್ಲಿ ಬಿಜೆಪಿ ಕಾದು ನೋಡುತ್ತಿದೆ. ನಾವು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಹೋರಾಟ ಮಾಡುತ್ತೇವೆ ಎಂದರು. ಕಾಂಗ್ರೆಸ್ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಚುನಾವಣಾ ಸಂದರ್ಭದಲ್ಲಿ ಸಾಕಷ್ಟುಆಶ್ವಾಸನೆ ಕೊಟ್ಟಿದ್ದರು.
ಜನ ಸಾಕಷ್ಟು ನೀರಿಕ್ಷೆಯಲ್ಲಿದ್ದಾರೆ. ಮುಖ್ಯಮಂತ್ರಿಗಳು ಈಗಾಗಲೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ. ಜೊತೆಗೆ ಅವುಗಳಿಗೆ ಒಂದಷ್ಟುಷರತ್ತನ್ನೂ ವಿಧಿಸಿದ್ದಾರೆ ಎಂದರು. ಈ ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಹಣ ಬೇಕಾಗುತ್ತದೆ? ಅದಕ್ಕೆ ಹಣ ಹೇಗೆ ಹೊಂದಿಸಿಕೊಳ್ಳುತ್ತಾರೆ, ಹೊಸ ತೆರಿಗೆ ಹಾಕುತ್ತಾರಾ? ಅಥವಾ ಸಾಲ ಮಾಡುತ್ತಾರಾ? ಇದೆಲ್ಲವನ್ನೂ ಬಿಜೆಪಿ ಗಮನಿಸುತ್ತಿದೆ. ಕಾಂಗ್ರೆಸ್ ಕೊಟ್ಟಭರವಸೆ ಯಥಾವತ್ ಆಗಿ ಜನರಿಗೆ ತಲುಪಬೇಕು, ಇದಕ್ಕೆ ಯಾವುದೇ ನಿರ್ಬಂಧ ಹಾಕಬಾರದು ಎಂದರು.
ಸಂವಿಧಾನದ ಪ್ರಕಾರ ಕೆಲಸ ಮಾಡದಿದ್ದರೆ ಬಾರುಕೋಲಿನಿಂದ ಬಾರಿಸುತ್ತೇನೆ: ಸಚಿವ ಮಹದೇವಪ್ಪ
ಗ್ಯಾರಂಟಿ ಪೂರೈಸಲು ಜನರ ಮೇಲೆ ಅಧಿಕ ತೆರಿಗೆ: ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ಪಕ್ಷವು ನೀಡಿದ ಐದು ಗ್ಯಾರಂಟಿಗಳನ್ನು ಈಡೇರಿಸಲು ನಾಗರಿಕರಿಂದ ಒತ್ತಡ ಜಾಸ್ತಿಯಾಗುತ್ತಿದೆ. ಆದ್ದರಿಂದ ಈ ಭರವಸೆಗಳನ್ನು ಈಡೇರಿಸಲು ಮಧ್ಯಮ ವರ್ಗದವರ ಮೇಲೆ ಹೊಸ ಸರ್ಕಾರವು ಅಧಿಕ ತೆರಿಗೆಯನ್ನು ಹೇರುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಚಿತ್ರದುರ್ಗ ನಗರದ ಹೂರ ವಲಯದ ಭೋವಿ ಗುರುಪೀಠಕ್ಕೆ ಭೇಟಿ ನೀಡಿ, ಶ್ರೀಗಳಿಂದ ಆರ್ಶೀವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಚುನಾವಣೆಯ ಸಮಯದಲ್ಲಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಈಡೇರಿಸವಲ್ಲಿ ಗೊಂದಲ ಉಂಟಾಗಿದೆ. ರಾಜ್ಯದ ಜನತೆ ಭರವಸೆಗಳ ಈಡೇರಿಕೆಗೆ ಕಾಯುತ್ತಿದ್ದರೆ, ಅಧಿಕಾರಿಗಳು ಇದನ್ನು ಈಡೇರಿಸಲು ಹಣಕಾಸಿನ ಚಿಂತನೆಯಲ್ಲಿ ತೊಡಗಿರುವಂತಿದೆ ಎಂದರು.
ಈ ಕುರಿತು ಸಂಪುಟದ ಸದಸ್ಯರುಗಳಲ್ಲಿಯೇ ಹಲವು ಅನುಮಾನಗಳು ಇವೆ. ಈ ಕುರಿತು ಬಿಜೆಪಿ ಮೌನವಾಗಿಲ್ಲ. ಎಲ್ಲವನ್ನು ಕಾದು ನೋಡುತ್ತಿದ್ದೇವೆ. ಚುನಾವಣೆ ಸಂದರ್ಭದಲ್ಲಿ ಅವರು ನೀಡಿರುವ ಭರವಸೆಗಳಿಂದಲೇ ಕಾಂಗ್ರೆಸ್ ಜಯ ಸಾಧಿಸಿದೆ. ಈಗ ಜನರ ಆಶೋತ್ತರಗಳನ್ನು ಈಡೇರಿಸುವ ಹೊಣೆಗಾರಿಕೆ ಸರ್ಕಾರದ ಮೇಲಿದೆ. ನೀಡಿರುವ ಭರವಸೆ ಹುಸಿಯಾಗದಂತೆ ಈಡೇರಿಸಲಿ. ಗ್ಯಾರಂಟಿಯನ್ನು ಪೂರೈಸುವಲ್ಲಿ ಮಧ್ಯಮ ವರ್ಗದ ಜನತೆಯ ಮೇಲೆ ಸರ್ಕಾರ ಎಕ್ಸೈಸ್ ಡ್ಯೂಟಿ ಜಾಸ್ತಿ ಮಾಡುವುದು, ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚು ತೆರಿಗೆಯನ್ನು ಹಾಕುವಂತಹ ಸಾಧ್ಯತೆಗಳೂ ಇವೆ ಎಂದರು.
ಸದೃಢ ಭಾರತವನ್ನು ನಿರ್ಮಾಣ ಮಾಡಲು ಮಕ್ಕಳನ್ನು ಹುರಿದುಂಬಿಸಬೇಕಾಗಿದೆ. ಅದಕ್ಕಾಗಿ ಎನ್‌ಇಪಿ ಜಾರಿಗೊಳಿಸಲಾಗಿದೆ. ಅದನ್ನು ಸಹ ರದ್ಧುಪಡಿಸಲು ಕಾಂಗ್ರೆಸ್ ಮುಂದಾಗಿದೆ. ಎನ್‌ಇಪಿ ವಿಚಾರವಾಗಿ ರಾಜಕೀಯ ಮಾಡಬೇಕಾದ ಅಗತ್ಯವಿಲ್ಲ. ಇವೆಲ್ಲವನ್ನು ಸಹ ಪಕ್ಷ ಕಾದು ನೋಡುತ್ತಿದೆ. ಗ್ಯಾರಂಟಿಗಳಿಗೆ ಷರತ್ತು ವಿಧಿಸುವ ಬಗ್ಗೆ ಮುಂದಿನ ಸಚಿವ ಸಂಪುಟದಲ್ಲಿ ಯಾವ ರೀತಿಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡುತ್ತೇವೆ. ಸ್ವಾತಂತ್ರ್ಯ ಬಂದು ಹಲವಾರು ವರ್ಷ ದೇಶವನ್ನು ಆಳಿದ್ದು ಕಾಂಗ್ರೆಸ್. ಅಗ ಬಡತನವನ್ನು ನಿರ್ಮೂಲನೆ ಹಾಗೂ ಜನರಿಗೆ ಶಿಕ್ಷಣವನ್ನು ನೀಡಬೇಕಿತ್ತು. ಆದರೆ ಅದನ್ನು ಮಾಡದೆæ ಅವರನ್ನು ಬಡವರಾಗಿಯೇ ಇಟ್ಟು ಅನಕ್ಷರತೆಯನ್ನು ನೀಡಿ, ಮತ ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ ಎಂದರು.
ವಿದ್ಯಾರ್ಥಿಗಳ ಸುಗಮ ಸಂಚಾರಕ್ಕೆ ನರ್ಮ್ ಬಸ್ ಕಲ್ಪಿಸಿ: ಶಾಸಕ ಯಶಪಾಲ್ ಸುವರ್ಣ
ದೇಶದಲ್ಲಿ ಬಡವರು ಬಡವರಾಗಿಯೇ ಇದ್ದಾರೆ ಎಂದರೆ ಅದರ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲುತ್ತದೆ. ಶಿಕ್ಷಣವನ್ನು ನೀಡಿಲ್ಲ. ಸ್ವಾತಂತ್ರ್ಯ ಬಂದು ಇಷ್ಟುವರ್ಷವಾದರೂ ಸಹ ಉಚಿತ ಗ್ಯಾರಂಟಿಯನ್ನು ನೀಡುತ್ತಾರೆ ಎಂಬುದರಲ್ಲಿ ಗೊತ್ತಾಗುತ್ತದೆ ಎಂದ ವಿಜೇಯೇಂದ್ರ, ಮುಂದಿನ ದಿನದಲ್ಲಿ ಬಿಜೆಪಿಯವರು ವಿರೋಧ ಪಕ್ಷವಾಗಿ ಉತ್ತಮವಾದ ಕಾರ್ಯವನ್ನು ಮಾಡುತ್ತೇವೆ. ನಮಗೆ ವಿರೋಧ ಪಕ್ಷವಾಗಿ ಕೆಲಸ ಮಾಡಿದ ಅನುಭವ ಇದೆ. ಇದರಿಂದ ಇದರಿಂದ ಆಡಳಿತ ಪಕ್ಷವನ್ನು ಸರಿದಾರಿಗೆ ತರುವ ಕಾರ್ಯವನ್ನು ಮಾಡಲಾಗುವುದು ಎಂದು ವಿಜಯೇಂದ್ರ ತಿಳಿಸಿದರು. ಈ ಸಂದರ್ಭದಲ್ಲಿ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಶಾಸಕರಾದ ಎಂ.ಚಂದ್ರಪ್ಪ ಸೇರಿದಂತೆ ಸಮಾಜದ ಮುಖಂಡರು ಅಭಿಮಾನಿಗಳು ಭಾಗವಹಿಸಿದ್ದರು. ಇದಾದ ನಂತರ ವಿಜಯೇಂದ್ರರವರು ಮಾದಾರ ಚನ್ನಯ್ಯ ಗುರುಫೀಠಕ್ಕೆ ಭೇಟಿ ಅಲ್ಲಿ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳಿಂದ ಆರ್ಶೀವಾದ ಪಡೆದರು.