Suicide Case: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ: ಈಶ್ವರ ಖಂಡ್ರೆ ಕಿಡಿ

By Govindaraj S  |  First Published Apr 17, 2022, 6:18 PM IST

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿಯಲ್ಲಿ ಇಂದು ಪ್ರತಿಭಟನೆ ನಡೆಸಿದರು.


ವರದಿ: ಶರಣಯ್ಯ ಹಿರೇಮಠ, ಏಷ್ಯಾನೆಟ್ ಸುವರ್ಣ ನ್ಯೂಸ್ ಕಲಬುರಗಿ

ಕಲಬುರಗಿ (ಏ.17): ಗುತ್ತಿಗೆದಾರ ಸಂತೋಷ್ ಪಾಟೀಲ್ (Santosh Patil) ಆತ್ಮಹತ್ಯೆ ಪ್ರಕರಣಕ್ಕೆ (Suicide Case) ಸಂಬಂಧಿಸಿದಂತೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ (KS Eshwarappa) ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ (Congress) ಕಾರ್ಯಕರ್ತರು ಕಲಬುರಗಿಯಲ್ಲಿ (Kalaburagi) ಇಂದು ಪ್ರತಿಭಟನೆ (Protest) ನಡೆಸಿದರು. ಕಲಬುರಗಿ ನಗರದ ಕಾಂಗ್ರೆಸ್ ಕಚೇರಿಯಿಂದ ಜಗತ್ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಗತ್ ಸರ್ಕಲ್‌ನಲ್ಲಿ ಕಾಂಗ್ರೆಸ್ ಮುಖಂಡರು (Congress Leaders) ಮತ್ತು ಕಾರ್ಯಕರ್ತರು ಧರಣಿ ಸತ್ಯಾಗ್ರಹ ನಡೆಸಿದರು.  

Tap to resize

Latest Videos

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನೇರ ಕೈವಾಡ ಇರುವುದು ಕಂಡುಬರುತ್ತಿದೆ. ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಸಾಲದು, ಕೂಡಲೇ ಪೊಲೀಸರು ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ (Eshwara Khandre), ರಾಜ್ಯ ಬಿಜೆಪಿ ಸರ್ಕಾರ (BJP Govt) 40 ಪರ್ಸೆಂಟ್ ಸರ್ಕಾರ ಎಂದೇ ಖ್ಯಾತವಾಗಿದೆ. ಭ್ರಷ್ಟಾಚಾರ ರಾಜ್ಯದಲ್ಲಿ (Karnataka) ತಾಂಡವವಾಡುತ್ತಿದೆ. ಬಿಜೆಪಿಯ ಸಚಿವರು ಶಾಸಕರು ಕಾಂಟ್ರಾಕ್ಟರಗಳಿಂದ ಸುಲಿಗೆ ಮಾಡುತ್ತಿದ್ದಾರೆ. 

Suicide Case: ಸಂತೋಷ್ ಪಾಟೀಲ್ ಸಾವಿಗೆ ಕಾರಣವಾದ ವಿಷ ಯಾವುದು ಗೊತ್ತಾ ?

ವರ್ಗಾವಣೆ ದಂದೆ ಜೋರಾಗಿ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ (PM Narendra Modi), ತಾನು ತಿನ್ನುವುದಿಲ್ಲ, ಇತರರಿಗೆ ತಿನ್ನಲು ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ ರಾಜ್ಯದಲ್ಲಿರುವ ಬಿಜೆಪಿಯ ನಾಯಕರು (BJP Leaders), ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದ್ದಾರೆ. ಹಣ ಕೊಡದಿದ್ದರೆ ಯಾವ ಕೆಲಸವೂ ಆಗದು ಎನ್ನುವ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಆಡಳಿತದ ಎಲ್ಲಾ ರಂಗದಲ್ಲಿಯೂ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. 

ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮಾಜಿ ಸಚಿವ ಶರಣಪ್ರಕಾಶ ಪಾಟೀಲ್,  ವಿಧಾನಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರು ಸೇರಿದಂತೆ ಪಕ್ಷದ ಮುಖಂಡರು, ನೂರಾರು ಕಾರ್ಯಕರ್ತರು ಪ್ರತಿಭಟನೆ ಹಾಗೂ ಧರಣಿಯಲ್ಲಿ ಪಾಲ್ಗೊಂಡಿದ್ದರು.

ಬಿಜೆಪಿಯೇ ಇಂಥಹ ಗಲಭೆಗಳಿಗೆ ಪ್ರಚೋದನೆ ನೀಡುತ್ತಿದೆ: ಬಿಜೆಪಿ ಸರ್ಕಾರವೇ ಇಂಥಹ ಗಲಭೆಗಳಿಗೆ ಪ್ರಚೋದನೆ ನೀಡುತ್ತಿದೆ, ಭಾವನಾತ್ಮಕ ವಿಚಾರ ಕೇಳಿಸುತ್ತಿದೆ. ಜಾತಿ-ಜಾತಿಗಳ ನಡುವೆ ವಿಷಬೀಜ ಬಿತ್ತಿ ಭಾವನಾತ್ಮಕ ವಿಷಯಗಳನ್ನು ಕೆರಳಿಸಿ ಜಗಳ ಹಚ್ಚುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದರು. ಹುಬ್ಬಳ್ಳಿ ಗಲಭೆ ಬಗ್ಗೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು ಗಲಭೆಯಲ್ಲಿ ಯಾರದ್ದೇ ಕೈವಾಡ ಇರಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದರು.

Chikkamagaluru: ಸಂತೋಷ್ ಪಾಟೀಲ್ ಸಾಯುವ ಮುನ್ನ ಕಾಫಿನಾಡಿನಲ್ಲಿ ವಾಸ್ತವ್ಯ

ಯಾರೇ ಕಾನೂನು ಕೈಗೆತ್ತಿಕೊಂಡಿದ್ದರೂ, ಯಾರೇ ದಾಳಿ ಮಾಡಿದ್ದರೂ ಅದು ತಪ್ಪೇ ಆಗಿದೆ ಎಂದ ಖಂಡ್ರೆ, ಎಲ್ಲಾ ಜಾತಿ- ಜನಾಂಗದ ಜನರು ಪ್ರಚೋದನೆಗೆ ಒಳಗಾಗದೇ ಶಾಂತಿ- ಸಾಮರಸ್ಯ ಕಾಪಾಡಬೇಕು ಎಂದು ಆಗ್ರಹಿಸಿದರು. ಯಾರೇ ತಪ್ಪು ಮಾಡಿರಲಿ ಅಂಥವರ ವಿರುದ್ಧ ಶಿಕ್ಷೆ ಆಗಬೇಕು, ಸರ್ಕಾರವೇ ಇಂಥದ್ದಕ್ಕೆ ಕುಮ್ಮಕ್ಕು ಕೊಡುತ್ತಿದೆ. ಹುಬ್ಬಳ್ಳಿ ಗಲಭೆಯಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತದೆ. ಇದರ ಬಗ್ಗೆ ಸರ್ಕಾರವೇ ಆತ್ಮಾವಲೋಕನ ಮಾಡಿಕೊಳ್ಳಬೇಕು. ಜನ ಯಾರೂ ಉದ್ರಿಕ್ತಗೊಳ್ಳಬಾರದು.  ಏನೇ ವಿಷಯಗಳಿದ್ದರೂ ಶಾಂತಿಯುತವಾಗಿ ಹೋರಾಟ ಮಾಡಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.

click me!