
ಬೆಂಗಳೂರು (ಜೂ.09): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪಕ್ಷದ ಕಾರ್ಯಕರ್ತ ಅವಿರತವಾಗಿ ಶ್ರಮಿಸುತ್ತಿದ್ದು, ಕಾಂಗ್ರೆಸ್ ವಿಜಯೋತ್ಸವ ಆಚರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಕೋವಿಡ್ ಸಂಕಷ್ಟದ ಸಮಯದಲ್ಲಿ ಯಾರೂ ಒಬ್ಬಂಟಿ ಎಂದು ಭಾವಿಸಬಾರದು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ನನ್ನ ಬೆಂಬಲವಿದೆ. ಸಂಕಷ್ಟದ ಸಂದರ್ಭದಲ್ಲಿ ಪಕ್ಷ ಅಗತ್ಯ ನೆರವು ನೀಡಲು ಬದ್ಧವಿದೆ ಎಂದಿದ್ದಾರೆ.
'ಯಡಿಯೂರಪ್ಪ ರಾಜೀನಾಮೆ ಹೇಳಿಕೆ ಮೇಲ್ನೋಟಕ್ಕೆ ನಾಟಕ'
ರಾಜ್ಯದ 224 ವಿಧಾನಸಭಾ ಕ್ಷೇತ್ರದಲ್ಲಿ ಲಸಿಕಾ ಶಿಬಿರಗಳನ್ನು ನಡೆಸಲು ಮತ್ತು ಕೋವಿಡ್‌ನಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಸಹಾಯ ಮಾಡಲು 31 ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧವಾಗಿದ್ದಾರೆ. ಜನರು ಯಾವುದೇ ಬೇಧ, ಭಾವವಿಲ್ಲದೆ ಸಂಕಷ್ಟದ ಸಮಯದಲ್ಲಿ ಅವರ ನೆರವು ಪಡೆಯಬಹುದು ಎಂದರು.
ಕಾಂಗ್ರೆಸ್ ಸಂಸರು, ಶಾಸಕರ ನಿಧಿಯಿಂದ ವ್ಯಾಕ್ಸಿನ್ ಖರೀದಿ : ಡಿಕೆಶಿ
ಸಿದ್ದರಾಮಯ್ಯ ಅವರ ಭೇಟಿ: ಮಂಗಳವಾರ ಬೆಳಗ್ಗೆ ಆಸ್ಪತ್ರೆಯಿಂದ ಗುಣಮುಖರಾಗಿ ಬಂದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿ ಮಾಡಿದರು. ಈ ಕುರಿತು ಟ್ವೀಟ್ ಮಾಡಿರುವ ಅವರು, ಆಸ್ಪತ್ರೆಯಿಂದ ಗುಣಮುಖರಾಗಿ ಆಗಮಿಸಿದ ನನ್ನ ಆತ್ಮೀಯರಾದ ಸಿದ್ದರಾಮಯ್ಯ ಅವರು ರಾಜ್ಯದ ಜನರ ಸೇವೆಗೆ ಸಿದ್ಧರಾಗಿದ್ದಾರೆ. ಆರ್ಥಿಕ ಹಿಂಜರಿತದ ನಡುವೆಯೂ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಆಶಾದಾಯಕ ಮಾತುಕತೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.