Karnataka Bypolls: ಕರ್ನಾಟಕ ಜನರು ನಮ್ಮ ಪರ ಇದ್ದಾರೆ, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್‌ ಗೆಲ್ಲುತ್ತೆ: ಸುರ್ಜೇವಾಲಾ ವಿಶ್ವಾಸ

Kannadaprabha News   | Kannada Prabha
Published : Mar 21, 2026, 07:15 AM IST
surjewala 1

ಸಾರಾಂಶ

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಆಂತರಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.

ಬೆಂಗಳೂರು (ಮಾ.21): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು ನಿಶ್ಚಿತ. ನಾವು ರಾಜ್ಯದ ಜನರ ಆಶೋತ್ತರ ಈಡೇರಿಸಿದ್ದೇವೆ. ಹಾಗಾಗಿ ಜನರು ಕಾಂಗ್ರೆಸ್‌ ಪರವಾಗಿ ಇದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕುರಿತ ಪ್ರಶ್ನೆಗೆ, ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಆಸೆ, ಆಸಕ್ತಿ ಇದ್ದೇ ಇರುತ್ತದೆ. ಕಾಂಗ್ರೆಸ್‌ ಪಕ್ಷದ ಯಾವ ಸದಸ್ಯರೂ ಆಸೆ ಪಡುವುದರಲ್ಲಿ ತಪ್ಪಿಲ್ಲ. ಆದರೆ, ಎಲ್ಲರಿಗೂ ಒಂದೇ ಸಲ ಅವಕಾಶ ನೀಡಲು ಸಾಧ್ಯವಿಲ್ಲ. ಈಗ ಅವಕಾಶ ದೊರೆಯದ ಆಕಾಂಕ್ಷಿಗಳಿಗೆ ಮುಂದೆ ನ್ಯಾಯ ಕೊಡಿಸುವ ಕೆಲಸವನ್ನು ಪಕ್ಷ ಮಾಡುತ್ತದೆ ಎಂದು ಹೇಳಿದರು.

ಕರ್ನಾಟಕ ಜನರು ನಮ್ಮ ಪರ ಇದ್ದಾರೆ. ಎರಡೂ ಕ್ಷೇತ್ರಗಳ ಉಪ‌ಚುನಾವಣೆ ಗೆಲ್ಲುತ್ತೇವೆ. ಹಿಂದೆಯೂ ಗೆದ್ದಿದ್ದೇವೆ, ಈಗಲೂ ಗೆಲ್ಲುತ್ತೇವೆ. ಗೆಲುವೇ ಪ್ರಮುಖ ಮಾನದಂಡ. ಈ ಹಿನ್ನೆಲೆಯಲ್ಲಿ ಪಕ್ಷದ ಆಂತರಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಯಾರಿಗೇ ಟಿಕೆಟ್‌ ನೀಡಿದರೂ ಇತರೆ ಎಲ್ಲ ಆಕಾಂಕ್ಷಿಗಳು ಒಟ್ಟಿಗೆ ಸೇರಿ ಪಕ್ಷದ ಗೆಲುವಿಗೆ ಶ್ರಮಿಸುವ ವಿಶ್ವಾಸವಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವರಿಷ್ಠರ ಹೆಗಲಿಗೆ
ಕಾಂಗ್ರೆಸ್‌ನಿಂದ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಿ: ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ