'ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ'

By Suvarna News  |  First Published Oct 4, 2021, 7:30 PM IST

* ರಂಗೇರಿದ ಸಿಂದಗಿ ವಿಧಾನಸಭಾ ಉಪಚುನಾವಣೆ
* ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ ಅಖಾಡಕ್ಕೆ
* 25,000 ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರು


ವಿಜಯಪುರ, (ಅ.04): ಜಿಲ್ಲೆಯ ಸಿಂದಗಿ ವಿಧಾಸನಭಾ ಕ್ಷೇತ್ರಕ್ಕೆ ಉಪಚುನಾವಣೆ  (Sindagi Assembly By Election)  ದಿನಾಂಕ ನಿಗದಿಯಾಗಿದ್ದು, ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ.

ಇನ್ನು ಈ ಬಗ್ಗೆ ಸಿಂದಗಿಯಲ್ಲಿ ಇಂದು (ಅ.04) ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ (Eshwar Khandre),  ಅಕ್ಟೋಬರ್ 30ರಂದು ನಡೆಯುವ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿಕಾಂಗ್ರೆಸ್ 25,000 ಮತಗಳ ಅಂತರದಿಂದ ಗೆಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Latest Videos

undefined

ಸಿಂದಗಿ ವಿಧಾನಸಭೆ ಬೈ ಎಲೆಕ್ಷನ್​ಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್​

ಕಾಂಗ್ರೆಸ್ (Congress) ನಾಯಕರು ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ. ನಮ್ಮಲ್ಲಿ ಯಾವುದೇ ಅಸಮಾಧಾನವಿಲ್ಲ. ಸಿಂದಗಿ, ಹಾನಗಲ್ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲುತ್ತೇವೆ. ಒಮ್ಮತದ ಅಭ್ಯರ್ಥಿಯಾಗಿ ಅಶೋಕ್ ಮನಗೂಳಿಯನ್ನು ಆಯ್ಕೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. 

ಅಕ್ಟೋಬರ್ 8ರಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಗುತ್ತೆ. ಬಿಜೆಪಿ ದುರಾಡಳಿತಕ್ಕೆ ಮತದಾರರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ ಅಖಾಡಕ್ಕಿಳಿದಿದ್ರೆ, ಜೆಡಿಎಸ್‌ನಿಂದ ನಾಜಿಯಾ ಶಕೀಲ್ ಅಂಗಡಿ ಅವರು ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿ ಇನ್ನೂ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಿಲ್ಲ. 

ಅ.8 ರಂದು ನಾಮ ಪತ್ರ ಸಲ್ಲಿಕೆ ಕೊನೆಯ ದಿನವಾಗಿದೆ. ಅ.11 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. ಅ.13 ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿರಲಿದೆ. ನ. 2ರಂದು ಮತ ಎಣಿಕೆ ನಡೆಯಲಿದೆ.

click me!