
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಪಷ್ಟ ಮುನ್ನಡೆ ಕಾಯ್ದು 22,867 ಮತಗಳ ಅಂತರ ಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಬಿಜೆಪಿಯ ವೀರಣ್ಣ ಚರಂತಿಮಠ ಅವರಿಗೆ ಸೋಲಾಗಿದೆ. ಪ್ರತಿ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿರುವ ಮೇಟಿ ಅವರ ಗೆಲುವು ಬಹುತೇಕ ಖಚಿತವಾಗಿರುವ ಸೂಚನೆಗಳು ದೊರೆಯುತ್ತಿದ್ದಂತೆಯೇ ಕಾರ್ಯಕರ್ತರು ಸಂಭ್ರಮಿಸಲು ಆರಂಭಿಸಿದ್ದವು. ಈಗ ಅವರ ಸಂಭ್ರಮ ಮುಗಿಲು ಮುಟ್ಟಿದೆ.
ಉಮೇಶ್ ಮೇಟಿ ಪಡೆದ ಮತಗಳು-97,941
ವೀರಣ್ಣ ಚರಂತಿಮಠ ಪಡೆದ ಮತಗಳು- 76,075
ಮತಗಳ ಅಂತರ- 22,867
ಮತ ಎಣಿಕೆಯ ಆರಂಭದಿಂದಲೇ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಸ್ಥಿರ ಮುನ್ನಡೆ ಸಾಧಿಸಿ ಪ್ರತಿಯೊಂದು ಸುತ್ತಿನಲ್ಲೂ ತಮ್ಮ ಮುನ್ನಡೆಯನ್ನು ವಿಸ್ತರಿಸಿಕೊಂಡರು. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದು, ಉಮೇಶ್ ಮೇಟಿ ಗೆಲುವಿಗೆ ಘೋಷಣೆಗಳನ್ನು ಕೂಗಿ ಸಂಭ್ರಮಿಸುತ್ತಿದ್ದಾರೆ. ಕೈಯಲ್ಲಿ ಪಕ್ಷದ ಬಾವುಟಗಳು ಹಾಗೂ ನಾಯಕರ ಫೋಟೋಗಳನ್ನು ಹಿಡಿದು ಉತ್ಸಾಹಭರಿತವಾಗಿ ಜಯಘೋಷ ಮಾಡುವ ದೃಶ್ಯಗಳು ಗಮನ ಸೆಳೆಯುತ್ತಿವೆ.
ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಎಚ್.ವೈ. ಮೇಟಿ ಅವರ ನಿಧನದಿಂದ ಸ್ಥಾನ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 9ರಂದು ಉಪಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.
ಚುನಾವಣೆಗೆ ಮುನ್ನ ಮೇಟಿ ಕುಟುಂಬದೊಳಗೆ ಟಿಕೆಟ್ ಹಂಚಿಕೆ ವಿಚಾರವಾಗಿ ಮಲ್ಲಿಕಾರ್ಜುನ ಮೇಟಿ ಮತ್ತು ಉಮೇಶ್ ಮೇಟಿ ನಡುವೆ ತೀವ್ರ ಪೈಪೋಟಿ ಉಂಟಾಗಿ ಭಿನ್ನಮತವೂ ವ್ಯಕ್ತವಾಗಿತ್ತು. ಅಂತಿಮವಾಗಿ ಪಕ್ಷದ ಹೈಕಮಾಂಡ್ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಿತ್ತು. ಒಟ್ಟು 14 ಟೇಬಲ್‌ಗಳ ಮೂಲಕ 23 ಸುತ್ತುಗಳಲ್ಲಿ ಮತ ಎಣಿಕೆ ನಡೆಯಿತು, ಕಾಂಗ್ರೆಸ್‌ಗೆ ಈ ಕ್ಷೇತ್ರದಲ್ಲಿ ಸ್ಪಷ್ಟ ಜಯ ಸಿಕ್ಕಿದೆ. ಅಂತಿಮ ಫಲಿತಾಂಶ ಅಧಿಕೃತವಾಗಿ ಚುನಾವಣಾ ಆಯೋಗ ಘೋಷನೆ ಮಾಡುವುದು ಮಾತ್ರ ಬಾಕಿ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.