
ಹಗರಿಬೊಮ್ಮನಹಳ್ಳಿ(ಸೆ.26): ಕ್ಷೇತ್ರದ ಜೆಡಿಎಸ್ ಶಾಸಕ ನೇಮರಾಜ ನಾಯ್ಕ ಅವರ ವೈಫಲ್ಯದಿಂದಾಗಿ ಕಾಂಗ್ರೆಸ್‌ನ ಪುರಸಭೆ ಸದಸ್ಯರ ಬಲ ೧೨ರಿಂದ೧೪ಕ್ಕೆ ಏರಿಕೆಯಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಲ್ಲಾಹುಣ್ಸಿ ರಾಮಣ್ಣ ತಿಳಿಸಿದರು.
ಪಟ್ಟಣದ ಪುರಸಭೆ ಅಧ್ಯಕ್ಷರ ಆಯ್ಕೆ ಕುರಿತಂತೆ ಪ್ರತಿಕ್ರಿಯಿಸಿ, ಬಿಜೆಪಿ ಪುರಸಭೆ ಸದಸ್ಯರು ಸ್ಥಳೀಯ ಜೆಡಿಎಸ್ ಶಾಸಕರ ಜತೆ ಗುರುತಿಸಿಕೊಂಡಿದ್ದ ಪರಿಣಾಮ ಪುರಸಭೆ ಅಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಮತಗಳೊಂದಿಗೆ ಗೆಲುವು ಸಾಧಿಸಲು ಸಾಧ್ಯವಾಗಿದೆ. ಮುಂಬರುವ ಜಿಪಂ, ಮತ್ತು ತಾಪಂ ಚುನಾವಣೆಗಳಲ್ಲಿ ಜೆಡಿಎಸ್ ಶಾಸಕರಿಂದ ಗೆಲುವು ತಂದುಕೊಡಲು ಸಾಧ್ಯವಿಲ್ಲ ಎಂಬುದನ್ನು ಕೊಟ್ಟೂರು, ಮರಿಯಮ್ಮನಹಳ್ಳಿ ಮತ್ತು ಹಬೊಹಳ್ಳಿ ಪುರಸಭೆ ಚುನಾವಣೆ ಸಾಬೀತುಪಡಿಸಿವೆ.
ಪಿತೃಪಕ್ಷದಲ್ಲಿ ಮಾಡಿದ ಎಡವಟ್ಟಿನಿಂದ ಸಿಎಂಗೆ ಕಂಟಕ ಎದುರಾಯ್ತೇ?
ಬಿಜೆಪಿಯಿಂದ ಆಯ್ಕೆಯಾದ ೧೧ ಸದಸ್ಯರು ಕೇವಲ ತಾಂತ್ರಿಕವಾಗಿ ಬಿಜೆಪಿಯೊಂದಿಗಿದ್ದರು. ಈ ಪೈಕಿ ಮೂವರು ಸದಸ್ಯರು ಮಾತ್ರ ೨೦೨೩ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯೊಂದಿಗೆ ಗುರುತಿಸಿಕೊಂಡಿದ್ದರು. ಉಳಿದ ಸದಸ್ಯರು ಜೆಡಿಎಸ್ ಶಾಸಕರೊಂದಿಗೆ ಗುರುತಿಸಿಕೊಂಡಿದ್ದರು. ಶಾಸಕರ ತಂತ್ರಕ್ಕೆ ಪ್ರತಿತಂತ್ರವಾಗಿ ಕಾಂಗ್ರೆಸ್‌ನವರು ಜೆಡಿಎಸ್‌ನೊಂದಿಗೆ ಗುರುತಿಸಿಕೊಂಡಿದ್ದ ಇಬ್ಬರು ಸದಸ್ಯರನ್ನು ಸೆಳೆಯುವಲ್ಲಿ ಯಶಸ್ವಿಯಾದ ಪರಿಣಾಮ ಕಾಂಗ್ರೆಸ್ ಸಂಖ್ಯಾಬಲ ೧೪ಕ್ಕೆ ಏರಿಕೆಯಾಯಿತು. ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.