
ಕಲಬುರಗಿ (ಮೇ.23): ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿಗೆ ಹೋಲಿಸಿರುವ ವಿಚಾರದಲ್ಲಿ ವಿವಾದ ಭುಗಿಲೆದ್ದ ಬೆನ್ನಲ್ಲೆ ಸಚಿವ ಪ್ರಿಯಾಂಕ್ ಬೆಂಬಲಿಗರ ಆಕ್ರೋಶದ ಹಿನ್ನೆಲೆಯಲ್ಲಿ ಕೊನೆಗೂ ತಮ್ಮ ಹೇಳಿಕೆಗೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಿಷಾದ ವ್ಯಕ್ತಪಡಿಸಿ ವಿವಾದಕ್ಕೆ ತೆರೆ ಎಳೆಯುವ ಸನ್ನಾಹದಲ್ಲಿದ್ದಾಗಲೇ, ಈ ಹಲ್ಲೆ ಪ್ರಕರಣ ಬಿಜೆಪಿ- ಕಾಂಗ್ರೆಸ್ ನಡುವೆ ಸಂಘರ್ಷದ ಕಿಡಿ ಹೊತ್ತಿಸಿದೆ. ಪರಿಣಾಮ ಬಿಜೆಪಿ ಮೇ 24ರ ಶನಿವಾರ ಕಲಬುರಗಿ ಚಲೋ ಹೋರಾಟ ರೂಪಿಸಿದೆ. ವಿವಾದದ ಬಗ್ಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಪ್ರಿಯಾಂಕ್ ಖರ್ಗೆ ಹೆಸರು ತೆಗೆದುಕೊಂಡು ಹಾಗೆ ಹೇಳಬಾರದಿತ್ತು.
ಆ ಹೆಸರು ವಾಪಾಸ್ ತಗೋ ಎಂದು ನಮ್ಮ ನಾಯಕರಾದ ಯಡಿಯೂರಪ್ಪ ಹೇಳಿದ್ದಾರೆ, ಹಾಗಾಗಿ ನಾನು ಪ್ರಿಯಾಂಕ್ ಖರ್ಗೆ ಹೆಸರು ವಾಪಾಸ್ ತೆಗೆದುಕೊಳ್ಳುತ್ತೇನೆ, ಇದರಿಂದ ಅವರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆಂದು ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಆದರೆ, ಚಿತ್ತಾಪುರ ಪಟ್ಟಣದಲ್ಲಿ ಬುಧವಾರ ರಾತ್ರಿ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಗೆಸ್ಟ್‌ಹೌಸ್‌ನಲ್ಲೇ ಕೂಡಿಹಾಕಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಿದ್ದ ಹೊತ್ತಲ್ಲೆ ನಡೆದ ನೂಕಾಟ,
ತಳ್ಳಾಟದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ ಸೇರಿದಂತೆ ನಾಲ್ವರು ಬಿಜೆಪಿ ಮುಖಂಡರುಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಪೊಲೀಸರೂ ಕೂಡ ಛಲವಾದಿಯವರಿಗೆ ಸೂಕ್ತ ರಕ್ಷಣೆ ಕೊಡದೆ ಹೋರಾಟಗಾರನ್ನೇ ಎತ್ತಿ ಕಟ್ಟಿ ಕರ್ತವ್ಯ ಲೋಪ ಎಸಗಿದ್ದಾರೆಂದು ಕಟುವಾಗಿ ಖಂಡಿಸಿರುವ ಭಾರತೀಯ ಜನತಾ ಪಕ್ಷ ಈ ಪ್ರಸಂಗಕ್ಕೆ ಉತ್ತರವಾಗಿ ಮೇ 24ರ ಶನಿವಾರ ಕಲಬುರಗಿ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದಿದೆ.
ಪ್ರಯಾಣ ದರ ಏರಿಕೆ ಬೆನ್ನಲ್ಲೇ ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ: ಜನಾಕ್ರೋಶ
ಬಿಜೆಪಿಯಿಂದ ನಾಳೆ ಕಲಬುರಗಿ ಚಲೋ: ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಗೆ ಜಿಲ್ಲೆಯ ಚಿತ್ತಾಪುರ ಪಟ್ಟಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಸೇರಿಕೊಂಡು 5 ಗಂಟೆಗೂ ಅಧಿಕ ಕಾಲ ಘೇರಾವ್ ಹಾಕಿ ಸರ್ಕಾರಿ ಗೆಸ್ಟ್‌ಹೌಸ್‌ನಲ್ಲೇ ಕೂಡಿ ಹಾಕಿದ್ದ ಘಟನೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸಂಘರ್ಷದ ಕಿಡಿ ಹೊತ್ತಿಸಿದೆ. ಖರ್ಗೆಯವರನ್ನು ನಾಯಿಗೆ ಹೋಲಿಸಿ ಹೇಳಿಕೆ ನೀಡಿದ್ದಾರೆಂದು ಪ್ರಿಯಾಂಕ್ ಖರ್ಗೆ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಸೇರಿಕೊಂಡು ತಿರಂಗಾ ಯಾತ್ರೆಯಲ್ಲಿ ಭಾಗವಹಿಸಲು ಚಿತ್ತಾಪುರಕ್ಕೆ ಆಗಮಿಸಿದ್ದ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರಿಗೆ ಹೊರಗೆ ಬರಲು ಬಿಡದಂತೆ ಗೆಸ್ಟ್‌ಹೌಸ್‌ನಲ್ಲಿಯೇ 5 ಗಂಟೆಕಾಲ ಕೂಡಿ ಹಾಕಿ ಪ್ರತಿಭಟಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.