ಬಿಜೆಪಿ ಮುಖಂಡನಿಗೂ ರಾಜ್ಯ ಸಚಿವ ಸ್ಥಾನ : ಕೈ ಕಾರ್‍ಯಕರ್ತರ ಕಿಡಿ

Kannadaprabha News   | Kannada Prabha
Published : Feb 11, 2026, 05:13 AM IST
BJP

ಸಾರಾಂಶ

ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು : ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯ ಸಚಿವ ಸ್ಥಾನಮಾನ

ಕಳೆದ ಶನಿವಾರ 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಲ್ಲಿ 53 ನಿಗಮ-ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕವಾಗಿರುವವರು ಕಾಂಗ್ರೆಸ್‌ ಮುಖಂಡರು ಮತ್ತು ಕಾರ್ಯಕರ್ತರಾಗಿದ್ದಾರೆ. ಇನ್ನು, ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿರುವ ಡಾ. ಬಿ.ಡಿ.ಭೂಕಾಂತ್‌ ಅವರು ಬಿಜೆಪಿ ಮುಖಂಡರಾಗಿದ್ದು, ಶಿವಮೊಗ್ಗ ಹಾಪ್‌ಕಾಮ್ಸ್‌ನ ಅಧ್ಯಕ್ಷರಾಗಿ ನಂತರ ಮಹಾಮಂಡಳದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅದನ್ನು ಗಮನಿಸದ ರಾಜ್ಯ ಸರ್ಕಾರ ರಾಜ್ಯ ಸಹಕಾರಿ ತೋಟಗಾರಿಕೆ ಮಾರಾಟ ಮಹಾಮಂಡಳದ ಅಧ್ಯಕ್ಷರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿ ಆದೇಶಿಸಿದೆ.

ಕಾಂಗ್ರೆಸ್‌ ಕಾರ್ಯಕರ್ತರ ಅಸಮಧಾನ

ಆದರೆ, ಈ ಆದೇಶ ಕಾಂಗ್ರೆಸ್‌ ಕಾರ್ಯಕರ್ತರ ಅಸಮಧಾನಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರದಿಂದ ನೇಮಕವಾಗದ ರಾಜ್ಯದ 19 ಹಾಪ್‌ಕಾಮ್ಸ್‌ ಅಧ್ಯಕ್ಷರಿಂದ ಆಯ್ಕೆಯಾಗಿ ಮಹಾಮಂಡಳದ ಅಧ್ಯಕ್ಷರಾಗಿರುವ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಡಾ.ಬಿ.ಡಿ.ಭೂಕಾಂತ್‌ ಅವರಿಗೂ ರಾಜ್ಯ ಸಚಿವ ಸ್ಥಾನಮಾನ ನೀಡಿರುವುದು ಸರಿಯಲ್ಲ. ಇದರಿಂದ ಕಾಂಗ್ರೆಸ್‌ ಕಾರ್ಯಕರ್ತರ ಮನೋಸ್ಥೈರ್ಯ ಕುಗ್ಗಲಿದೆ. ಈ ಕೂಡಲೇ ಡಾ.ಬಿ.ಡಿ.ಭೂಕಾಂತ್‌ ಅವರಿಗೆ ನೀಡಿರುವ ಸ್ಥಾನಮಾನ ಹಿಂಪಡೆಯುವಂತೆ ಆಗ್ರಹಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸ್ಪೀಕರ್‌ ವಿರುದ್ಧವೇ ಅವಿಶ್ವಾಸ ಮಂಡನೆಗೆ ವಿಪಕ್ಷ ನೋಟಿಸ್‌-ಸ್ಪೀಕರ್ ಪೀಠದಲ್ಲಿ ಕೂರಲ್ಲ: ಬಿರ್ಲಾ
ಬಜೆಟ್‌ ಅಧಿವೇಶನಕ್ಕೆ ಮೋದಿ ಗೈರಾಗಿದ್ದು ಏಕೆ ? : ರಿಜಿಜುರಿಂದ ವಿಡಿಯೋ ಬಿಡುಗಡೆ