ಮೈಸೂರು ಮೇಯರ್ ಸ್ಥಾನ ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ಯಾರು? ಸ್ಫೋಟಕ ಮಾಹಿತಿಕೊಟ್ಟ ಸಿದ್ದು ಪುತ್ರ

By Suvarna News  |  First Published Feb 27, 2021, 4:11 PM IST

ಮೈಸೂರು ಮೇಯರ್ ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಬಗ್ಗೆ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರು ಗಂಭೀರ ಆರೋಪ ಮಾಡಿದ್ದಾರೆ.


ಚಾಮರಾಜನಗರ, (ಫೆ.27): ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ಯಾರು ಎನ್ನುವ ಪ್ರಶ್ನೆಗಳು ರಾಜ್ಯ ಕಾಂಗ್ರೆಸ್‌ ವಲಯದಲ್ಲಿ ಎದ್ದಿವೆ. ಮೇಲ್ನೋಟಕ್ಕೆ ತನ್ವೀರ್ ಸೇಠ್ ಅವರೇ ಜೆಡಿಎಸ್‌ಗೆ ಬೆಂಬಲಿಸಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಕಾಂಗ್ರೆಸ್‌ನ ಕೆಲ ನಾಯಕರು ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಕೊಟ್ಟಿರುವುದು ಸಿದ್ದರಾಮಯ್ಯನವರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ಮೇಯರ್ ಜೆಡಿಎಸ್‌ಗೆ ಹೋಗಿದ್ದೇಗೆ ಎನ್ನುವ ಬಗ್ಗೆ ಸಿದ್ದರಾಮಯ್ಯನವರ ಪುತ್ರ, ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬಹಿರಂಗಪಡಿಸಿದ್ದಾರೆ.

Latest Videos

undefined

ರೆಸಾರ್ಟ್​ನತ್ತ ಮುಖ ಮಾಡಿದ ಸಿದ್ದರಾಮಯ್ಯ: ಸಂಚಲನ ಮೂಡಿಸಿದ ಟಗರು ನಡೆ

 ಈ ಬಗ್ಗೆ ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯದಿಂದ, ನಮ್ಮ ಪಕ್ಷದವರೇ ಹುನ್ನಾರ ಮಾಡಿ ಮೈಸೂರು ಮೇಯರ್ ಸ್ಥಾನ ಪ್ರತಿಪಕ್ಷದವರಿಗೆ ಸಿಗುವಂತೆ ಮಾಡಿದರು ಸ್ಪಷ್ಟಪಡಿಸಿದರು.

ಮೇಯರ್ ಚುನಾವಣೆಯಲ್ಲಿ ನಡೆದ ಘಟನೆ ಬಹಳ ದುರದೃಷ್ಟಕರ. ಒಬ್ಬ ನಾಯಕನಿಗೆ ಹಿನ್ನಡೆ ಮಾಡಲು ನಮ್ಮ ಪಕ್ಷದವರೇ ಕೆಲಸ ಮಾಡಿದ್ದಾರೆ. ಮೇಯರ್ ಸ್ಥಾನವನ್ನು ಪ್ರತಿಪಕ್ಷಕ್ಕೆ ಸಿಗುವ ಹಾಗೆ ಮಾಡಿದ್ದಾರೆ. ಈ ವಿಚಾರ ಬಹಳ ವಿಷಾದದ ಸಂಗತಿ. ಈ ಘಟನೆ ಮತ್ತೆ ಮರುಕಳಿಸಬಾರದು ಎಂದು ಅವರು ಹೇಳಿದರು.

ಇಂಥ ಘಟನೆಯಿಂದ ನಮ್ಮ ಒಗ್ಗಟ್ಟು ಒಡೆದಂತೆ ಆಗುತ್ತದೆ. ನಮ್ಮ ಕಾಂಗ್ರೆಸ್ ಒಡೆದ ಮನೆ ಎಂಬ ಸಂದೇಶ ರವಾನೆಯಾಗುತ್ತದೆ. ಹೀಗಾಗಿ ನಾಯಕರಲ್ಲಿ ಒಗ್ಗಟ್ಟು ಇರಬೇಕು ಎಂದರು.

ಟಗರು ಕೋಟೆಯಲ್ಲಿ ಪೊಗರು ತೋರಿಸಿದ ಕುಮಾರಸ್ವಾಮಿ

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಜನರು ಬೇಸತ್ತಿದ್ದಾರೆ. ರಾಜ್ಯದಲ್ಲಿ‌ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಹಳಷ್ಟು ಒಳ್ಳೆಯ ಅವಕಾಶವಿದೆ.ನಮ್ಮ ನಾಯಕರಗಳು ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಸಲಹೆ ನೀಡಿದರು.

ಮೈಸೂರು ಪಾಲಿಕೆ ಮೇಯರ್‌ ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದಕ್ಕೆ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೇಯರ್ ಚುನಾವಣೆಯ ವಿಚಾರದಲ್ಲಿ ಸಿದ್ದರಾಮಯ್ಯ ಅವರಿಗೆ ಪಾಠ ಕಲಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು.  ಈ ಹಿನ್ನೆಲೆಯಲ್ಲಿ ಮೈಸೂರು ಮೇಯರ್ ಚುನಾವಣೆ ಪ್ರತಿಷ್ಠೆಗೆ ಕಾರಣವಾಗಿತ್ತು. ಆದ್ರೆ, ಕಾಂಗ್ರೆಸ್‌ನ ಕೆಲ ನಾಯಕರು ಮೇಯರ್ ಸ್ಥಾನವನ್ನು ಜೆಡಿಎಸ್‌ಗೆ ಕೊಟ್ಟಿರುವುದು ಸಿದ್ದರಾಮಯ್ಯನವರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಇದು ರಾಜ್ಯ ನಾಯಕರಲ್ಲಿ ದಂಗಲ್ ಶುರುವಾಗಿದೆ.

click me!