ರಾಜ್ಯದ ಆರ್ಥಿಕತೆಯನ್ನು ಮುಳುಗಿಸುವುದೇ ಕಾಂಗ್ರೆಸ್ ಧ್ಯೇಯ: ಪ್ರಲ್ಹಾದ್‌ ಜೋಶಿ ಆಕ್ರೋಶ

Published : Aug 23, 2025, 05:48 AM IST
Pralhad joshi

ಸಾರಾಂಶ

ಸುಭಿಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಮುಳುಗಿಸುವುದೇ ಈ ಕಾಂಗ್ರೆಸ್ ಸರ್ಕಾರದ ಧ್ಯೇಯವಾಗಿದೆ. ಅಧಿಕಾರಕ್ಕೆ ಬಂದ ದಿನದಿಂದಲೂ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ (ಆ.23): ಸುಭಿಕ್ಷವಾಗಿದ್ದ ರಾಜ್ಯದ ಆರ್ಥಿಕತೆಯನ್ನು ಮುಳುಗಿಸುವುದೇ ಈ ಕಾಂಗ್ರೆಸ್ ಸರ್ಕಾರದ ಧ್ಯೇಯವಾಗಿದೆ. ಅಧಿಕಾರಕ್ಕೆ ಬಂದ ದಿನದಿಂದಲೂ ರಾಜ್ಯದ ಆರ್ಥಿಕತೆಯನ್ನು ಮಣ್ಣುಪಾಲು ಮಾಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‎‎ಕಾಂಗ್ರೆಸ್ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ದುಪ್ಪಟ್ಟು ಏರಿಕೆ ಮಾಡಿ ಜನರ ಜೀವನವನ್ನು ದುಸ್ತರಗೊಳಿಸಿದೆ. ವ್ಯಾಪಾರಿಗಳಿಗೆ ಅಧಿಕಾರಿಗಳಿಂದ ಲಂಚದ ಕಿರುಕುಳ, ಶೂನ್ಯ ಅಭಿವೃದ್ಧಿ, ಸುಳ್ಳು ಭರವಸೆ. ಇದೇ ಕಾಂಗ್ರೆಸ್ ಸರ್ಕಾರದ ನಿಜ ಆಡಳಿತ ಎಂದು ಸಚಿವರು ಆರೋಪಿಸಿದ್ದಾರೆ.

ಭ್ರಷ್ಟಾಚಾರದಲ್ಲಿ ರಾಜ್ಯವನ್ನು ನಂ.1 ಮಾಡಿದ ‘ಕೈ’ ಸರ್ಕಾರ: ರಾಜ್ಯದ ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ದೇಶದಲ್ಲೇ ನಂಬರ್ ಒನ್ ಮಾಡಿದೆ ಎಂದು ಕಿಡಿ ಕಾರಿದ್ದಾರೆ. ಸುದ್ದಿಗಾರರ ಜೊತೆ ಅವರು ಮಾತನಾಡಿ, ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ಹಾವಳಿ ಹೆಚ್ಚಿದೆ ಎಂಬ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಕ್ಕೆ ಕೇಂದ್ರ ಸಚಿವರು ಪ್ರತಿಕ್ರಿಯಿಸಿದರು. ಗುತ್ತಿಗೆದಾರರ ಸಂಘ ಸರ್ಕಾರದಲ್ಲಿನ ವಾಸ್ತವ ಸ್ಥಿತಿಯನ್ನು ತೆರೆದಿಟ್ಟಿದೆ. ಈ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಹರಿ ಹಾಯ್ದರು. ಅಬಕಾರಿ ಇಲಾಖೆ ಕರ್ನಾಟಕದ ಆರ್ಥಿಕತೆಯ ಬೆನ್ನೆಲುಬು. ಆದರೆ, ಇದೇ ಇಲಾಖೆಯಲ್ಲೀಗ ಪ್ರತಿಯೊಂದಕ್ಕೂ ಲಂಚದ ರೇಟ್ ಫಿಕ್ಸ್ ಮಾಡಿದಂತಿದೆ. ಅಧಿಕಾರಿಗಳು ಪ್ರತಿ ತಿಂಗಳು ಹಫ್ತಾ ವಸೂಲಿಗೆ ಇಳಿದಿರುವುದು ರಾಜ್ಯದ ದುರಂತ ಎಂದು ಜೋಶಿ ಖಂಡಿದರು.

ಬಂಗಾರದ ಕೋಳಿ ಉಳಿಸಿಕೊಳ್ಳಿ: ಸಹಕಾರ ಕ್ಷೇತ್ರ ಬಂಗಾರದ ಮೊಟ್ಟೆ ಇಡುವ ಕೋಳಿ. ಸಹಕಾರಿಗಳು ಜನರ ನಂಬಿಕೆ. ವಿಶ್ವಾಸ ಉಳಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಸೌಹಾರ್ದ ಸಹಕಾರಿ ಕಾಯ್ದೆ ಹಾಗೂ ಸೌಹಾರ್ದ ಸಹಕಾರಿ ಚಳವಳಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಹಕಾರ ಕ್ಷೇತ್ರಕ್ಕೆ ಶತಮಾನದ ಇತಿಹಾಸವಿದೆ. ಸಹಕಾರ ಕ್ಷೇತ್ರ ಬಂಗಾರದ ಮೊಟ್ಟೆ ಇಡುವ ಕೋಳಿಯಾಗಿದ್ದು, ಸರಿಯಾಗಿ ಉಪಯೋಗಿಸಿಕೊಂಡರೆ ಬಂಗಾರದ ಮೊಟ್ಟೆ ಸಿಗುತ್ತಲೇ ಇರುತ್ತದೆ. ಆದರೆ ಬಂಗಾರದ ಆಸೆಗೆ ಬಿದ್ದರೆ ಕೋಳಿಯೂ ಇರುವುದಿಲ್ಲ. ಮೊಟ್ಟೆಯೂ ಇರುವುದಿಲ್ಲ. ಆದ್ದರಿಂದ ಸಹಕಾರಿಗಳು ಜನರ ನಂಬಿಕೆ ಮತ್ತು ವಿಶ್ವಾಸ ಉಳಿಸಿಕೊಳ್ಳಬೇಕು ಎಂದು ಸೂಚ್ಯವಾಗಿ ಹೇಳಿದರು.

ಬ್ಯಾಂಕಿಂಗ್‌ ವ್ಯವಸ್ಥೆಗಿಂತ ಮೊದಲು ಜನರು ಸಹಕಾರ ಕ್ಷೇತ್ರವನ್ನೇ ಅವಲಂಬಿಸಿದ್ದರು. 1914-15 ರಲ್ಲಿ ರಾಜ್ಯದಲ್ಲಿ 725 ಸಹಕಾರಿ ಸಂಘಗಳಲ್ಲಿ 50 ಸಾವಿರಕ್ಕಿಂತ ಅಧಿಕ ಸದಸ್ಯರಿದ್ದರು. ಆ ಕಾಲದಲ್ಲೇ 30 ಲಕ್ಷ ರು. ಬಂಡವಾಳ ಹೂಡಿಕೆ ಮಾಡಿದ್ದರು. 725 ಸಂಘಗಳಲ್ಲಿ 621 ವ್ಯವಸಾಯ ಸಹಕಾರ ಸಂಘಗಳಾಗಿದ್ದವು. ಇವೆಲ್ಲವೂ ಕೃಷಿ ಮೂಲವಾಗಿದ್ದು ಹಳ್ಳಿಗಳಲ್ಲಿದ್ದವು. ಇದು ಈ ಮಣ್ಣಿಗೆ ಮಾಡಿದ ಸೇವೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಸಕರಾದ ಅರಗ ಜ್ಞಾನೇಂದ್ರ, ಬಿ.ಆರ್‌.ಪಾಟೀಲ್‌, ಸುನೀಲ್‌ ಪಾಟೀಲ್‌, ಜಗದೀಶ್‌ ಗುಡಗುಂಟಿ, ಯಶಪಾಲ್‌ ಸುವರ್ಣ, ಮಹಂತೇಶ ಕವಟಗಿಮಠ, ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನಗೌಡ, ಉಪಾಧ್ಯಕ್ಷ ಎ.ಆರ್‌.ಪ್ರಸನ್ನ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!