ವಿಧಾನಸಭೆ ಚುನಾವಣೆಯಲ್ಲಿ ಷಡ್ಯಂತ್ರ ನಡೆಸಿ ನನ್ನ ಸೋಲಿಸಿದರು: ಸೌಮ್ಯ ರೆಡ್ಡಿ

By Kannadaprabha NewsFirst Published Apr 7, 2024, 1:59 PM IST
Highlights

ವಿಧಾನಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರು ನನ್ನ ಕೈ ಹಿಡಿಯುವ ವಿಶ್ವಾಸವಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದರು.
 

ಬೆಂಗಳೂರು (ಏ.07): ವಿಧಾನಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಷಡ್ಯಂತ್ರ ಮಾಡಿ ಸೋಲಿಸಲಾಯಿತು. ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರು ನನ್ನ ಕೈ ಹಿಡಿಯುವ ವಿಶ್ವಾಸವಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಿಳಿಸಿದರು. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬೂತ್‌ಮಟ್ಟದ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ ಸೌಮ್ಯ ರೆಡ್ಡಿ, ವಿಧಾನ ಸಭಾ ಚುನಾವಣೆಯಲ್ಲಿಗೆದ್ದ ನನ್ನನ್ನು ಷಡ್ಯಂತ್ರದಿಂದ ಸೋಲಿಸಲಾಯಿತು. 

ಅದನ್ನು ಲೋಕಸಭೆಯಲ್ಲಿ ಮತದಾರರು ಗೆಲ್ಲಿಸುವ ಮೂಲಕ ಪರಿಹಾರ ನೀಡುತ್ತಾರೆ ಎಂಬ ವಿಶ್ವಾಸವಿದೆ. ಅದಕ್ಕಾಗಿ ಪಕ್ಷದ ಕಾರಕರ್ತರು ಕ್ಷೇತ್ರ ವ್ಯಾಪ್ತಿಯಲ್ಲಿ ಬೂತ್ ಮಟ್ಟದಲ್ಲಿ ಮತ ದಾರರನ್ನು ಸೆಳೆಯುವ ಕೆಲಸಕ್ಕೆ ಮುಂದಾಗ ಬೇಕು ಎಂದು ಮನವಿ ಮಾಡಿದರು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಜನಸೇವೆಯಿಂದ ಪ್ರೇರಣೆಯೊಂದಿಗೆ ನಾನು ಸಾರ್ವಜನಿಕ ಜೀವನದಲ್ಲಿ ಸಾಗುತ್ತಿ ದ್ದೇನೆ. ಮಹಿಳೆಯರ ಮತ್ತು ಮಕ್ಕಳ ಹಕ್ಕುಗಳಿಗಾಗಿ, ಮಾವನ ಹಕ್ಕುಗಳ ರಕ್ಷಣೆ, ಪರಿಸರ ಸಂರಕ್ಷಣೆಗಾಗಿ ಕಾರಪ್ರವೃತ್ತನಾಗಿರುತ್ತೇನೆ. ಜನರ ಸೇವೆಯೇ ಪರಮ ಗುರಿ ಎನ್ನುವಂತೆ ಕೆಲಸ ಮಾಡುತ್ತಿದ್ದೇನೆ. 

ಅಬ್ಬಬ್ಬಾ! : 10 ಗ್ರಾಂ ಚಿನ್ನಕ್ಕೆ ಈಗ 71 ಸಾವಿರ: ದಾಖಲೆ ಪ್ರಮಾಣದಲ್ಲಿ ಏರಿಕೆ

ಶಾಸಕಿಯಾಗಿ ಸಾಕಷ್ಟು ಕೆಲಸ ಮಾಡಿದ ಅನುಭವ ಪಡೆ ದಿದ್ದು, ಅದನ್ನು ಸಂಸದೆಯಾಗಿಯೂ ಮುಂದುವರಿಸುತ್ತೇನೆ. ಅದಕ್ಕೆ ಕ್ಷೇತ್ರದ ಜನ ಬೆಂಬಲ ನೀಡುವ ವಿಶ್ವಾಸವಿದೆ ಎಂದರು. ಮತದಾರರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಬೆಂಬಲಿಸುವುದರ ಜತೆಗೆ ಮಹಿಳಾ ಅಭ್ಯರ್ಥಿ ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಅದಕ್ಕೆ ತಕ್ಕಂತೆ ಕಾರಕರ್ತರು ನನ್ನೊಂದಿಗೆ ನಿಲ್ಲಬೇಕು ಎಂದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾಜಿ ಶಾಸಕ ಆರ್.ವಿ.ದೇವರಾಜ್, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಸೌಮ್ಯಾರೆಡ್ಡಿ ದಿಟ್ಟ, ಮಾದರಿ ಶಾಸಕಿ: ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಸೋಮವಾರ ಬೃಹತ್‌ ರೋಡ್‌ ಶೋ ನಡೆಸಿ ಕ್ಷೇತ್ರದ ವಿವಿಧೆಡೆ ಮತಯಾಚನೆ ಮಾಡಿದರು. ಬಳಿಕ ಮಾತನಾಡಿದ ಅವರು, ಸೌಮ್ಯರೆಡ್ಡಿ ಎಂಥದ್ದೇ ಸವಾಲುಗಳು ಎದುರಾದರೂ ಲೆಕ್ಕಿಸದೇ ಜಯನಗರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಿ ಮಾದರಿ ಶಾಸಕಿ ಎನಿಸಿಕೊಂಡವರು. ಅವರ ಆಡಳಿತ ವೈಖರಿ ಜನರಿಗೆ ತಿಳಿದಿದೆ. ಅವರ ನಿಸ್ವಾರ್ಥ ಸೇವೆಯನ್ನು ಜನರು ಪರಿಗಣಿಸಿ ಈ ಬಾರಿ ಕ್ಷೇತ್ರದ ಜನತೆ ಸೌಮ್ಯರೆಡ್ಡಿ ಅವರನ್ನು ಮತ್ತೊಮ್ಮೆ ಶಾಸಕಿಯನ್ನಾಗಿ ಆಯ್ಕೆ ಮಾಡಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು.

ಆನೆಗೊಂದಿ ರಾಮಾಯಣದ ಕಿಷ್ಕಿಂಧೆ: ವಿಜಯನಗರ ಕಾಲದ 8 ಸಾಲುಗಳ ಶಾಸನ ಪತ್ತೆ

ಜನರಿಗೆ ಹುಸಿ ಭರವಸೆಗಳನ್ನು ನೀಡುತ್ತಾ, ಭಾರೀ ಭ್ರಷ್ಟಾಚಾರ ನಡೆಸುತ್ತಾ, ಸುಳ್ಳಿನ ಸರಮಾಲೆಯಲ್ಲೇ ನಾಲ್ಕು ವರ್ಷಗಳ ಕಾಲ ಆಡಳಿತ ನಡೆಸಿರುವ ಬಿಜೆಪಿಯಿಂದ ಜನ ರೋಸಿಹೋಗಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಜನರೂ ನೆಮ್ಮದಿಯಿಂದ ಜೀವನ ಸಾಗಿಸುವಂತಹ ಆಡಳಿತ ನೀಡುತ್ತೇವೆ. ಹಾಗಾಗಿ ಮತ್ತೆ ಕಾಂಗ್ರೆಸ್‌ಅನ್ನು ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಂ .ಉದಯ… ಶಂಕರ್‌ ಸೇರಿದಂತೆ ಹಲವು ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.

click me!