ಕರ್ತವ್ಯನಿರತ ಪೋಲಿಸ್ ಪೇದೆಯ ಮೇಲೆ ಮರಳು ಟ್ರ್ಯಾಕ್ಟರ್ ಹತ್ತಿಸಿ ಕೊಂದ ಆರೋಪಿ ಪರವಾಗಿ ಬಿಜೆಪಿ ಶಾಸಕರು, ಮುಖಂಡರು ಮಾತನಾಡುತ್ತಿರುವುದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿ ಜೂ.(25) ಕರ್ತವ್ಯನಿರತ ಪೋಲಿಸ್ ಪೇದೆಯ ಮೇಲೆ ಮರಳು ಟ್ರ್ಯಾಕ್ಟರ್ ಹತ್ತಿಸಿ ಕೊಂದ ಆರೋಪಿ ಪರವಾಗಿ ಬಿಜೆಪಿ ಶಾಸಕರು, ಮುಖಂಡರು ಮಾತನಾಡುತ್ತಿರುವುದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ತಮ್ಮ ಫೇಸ್ ಬುಕ್‌ನಲ್ಲಿ ಬರೆದಿರುವ ಅವರು, ಬಿಜೆಪಿ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿತ್ತು. ಬಿಜೆಪಿ ಸರ್ಕಾರದಲ್ಲಿ ಕಲಬುರಗಿ ಜಿಲ್ಲೆಯನ್ನು ಅಕ್ರಮ ದಂಧೆಕೋರರ ಸುರಕ್ಷಿತ ತಾಣವಾಗಿಸಿ ಜಿಲ್ಲೆಯ ಹೆಸರನ್ನು ಮಣ್ಣು ಪಾಲು ಮಾಡಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಂತ ವ್ಯವಸ್ಥೆ ಬದಲಿಸುವ ಕೆಲಸ ನಡೆಯುತ್ತಿದ್ದು ಜನರಿಗೆ ಕಾನೂನಿನ ಮೇಲೆ ನಂಬಿಕೆ ಮೂಡಿಸಲಾಗುತ್ತಿದೆ ಎಂದಿದ್ದಾರೆ.
undefined
ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್ ಹಾಕುವ ಕಾರ್ಯಾಚರಣೆ ವ್ಯಾಪಕವಾಗಿ ನಡೆಸಲಾಗಿದೆ. ಜಿಲ್ಲೆಯ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡಿ, ಅಕ್ರಮ ದಂಧೆಗಳ ಮೂಲಕ ಹಣ ಸಂಪಾದಿಸಿ ಚುನಾವಣೆ ನಡೆಸುವ ಬಿಜೆಪಿ ನಾಯಕರಿಗೆ ಇದು ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ ಎಂದಿದ್ದಾರೆ.
ರೌಡಿಗಳಿಗೆ ಅಣ್ಣಾ ಅಂತೀರಿ ನಾಚಿಕೆಯಾಗಲ್ವಾ? ಸಚಿವ ಪ್ರಿಯಾಂಕ್‌ರಿಂದ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ!
ತನಿಖೆ ವೇಳೆ ಈ ಕೊಲೆ ಆರೋಪಿ ಅಫಜಲ್ಪುರ ಬಿಜೆಪಿ ಮುಖಂಡನಾಗಿರುವುದು, ಚುನಾವಣೆಯಲ್ಲಿ ಹಲವಾರು ಬಿಜೆಪಿ ಅಭ್ಯರ್ಥಿಗಳು ಹಾಗೂ ನಾಯಕರೊಂದಿಗೆ ಕೆಲಸ ಮಾಡಿದ್ದು ತಿಳಿದುಬಂದಿದೆ ಎಂದು ಸಚಿವರು ಹೇಳಿದ್ದಾರೆ.
ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಒದಗಿಸಲಾಗುತ್ತದೆ. ಈ ನಡುವೆ, ಕಾಂಗ್ರೆಸ್ ನಾಯಕರ ನಿಯೋಗದೊಂದಿಗೆ ತಾವೇ ಖುದ್ದಾಗಿ ಭೇಟಿ ಮಾಡಿ ಪಕ್ಷದ ವತಿಯಿಂದ ಒಂದು ಲಕ್ಷ ಪರಿಹಾರ ನೀಡಲಾಗಿದೆ. ಬಿಜೆಪಿ ನಾಯಕರು ತಮ್ಮ ಪಕ್ಷದ ನಾಯಕನ ಕೈಯಿಂದ ಕೊಲೆಯಾದ ಪೊಲೀಸ್ ಪೇದೆಯ ಕುಟುಂಬಕ್ಕೆ ಕ್ಷಮೆ ಕೇಳುವುದಿರಲಿ, ಅತ್ತ ಕಡೆ ತಿರುಗಿಯೂ ನೋಡಿಲ್ಲ ಎಂದು ಟೀಕಿಸಿದ್ದಾರೆ.
ಕೇಂದ್ರಕ್ಕೆ ಯಡಿಯೂರಪ್ಪ ಪತ್ರ ಬರೆದು ಅಕ್ಕಿ ಕೊಡಿಸಲಿ: ಸಚಿವ ಪ್ರಿಯಾಂಕ್ ಖರ್ಗೆ