ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿಕೊಂಡು ಯಾವುದೇ ಮಠಾಧೀಶರು ನನ್ನನ್ನು ಸಂಪರ್ಕ ಮಾಡಿಲ್ಲ. ಆದರೆ, ಮಠಾಧೀಶರು ಚುನಾವಣೆಗೆ ಬರುವ ಬಗ್ಗೆ ಏನೂ ಹೇಳಲಾಗಲ್ಲ.
ಹುಬ್ಬಳ್ಳಿ (ಫೆ.26): ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿಕೊಂಡು ಈವರೆಗೆ ಯಾವುದೇ ಮಠಾಧೀಶರು ನನ್ನನ್ನು ಸಂಪರ್ಕ ಮಾಡಿಲ್ಲ. ಆದರೆ, ಮಠಾಧೀಶರು ಚುನಾವಣೆಗೆ ಬರುತ್ತಾರೆ ಎನ್ನುವ ಬಗ್ಗೆ ಏನೂ ಹೇಳಲು ಆಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಮಠಾಧೀಶರು ಚುನಾವಣಾ ಅಖಾಡಕ್ಕಿಳಿಯೋ ವಿಚಾರವಾಗಿ ಇದುವರೆಗೂ ಯಾವುದೇ ಮಠಾಧೀಶರು ನನ್ನನ್ನು ಸಂಪರ್ಕಿಸಿಲ್ಲ, ಚರ್ಚಿಸಿಲ್ಲ. ಮಠಾಧೀಶರು ಚುನಾವಣೆಗೆ ಇಳೀತಾರೆ ಅನ್ನೋ ಬಗ್ಗೆ ಏನೂ ಹೇಳಲು ಆಗಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ಉಂಟಾಗುವ ಬೆಳವಣಿಗೆ ಬಗ್ಗೆ ನೋಡಿಕೊಂಡು ನಂತರ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ನೇಕಾರರ ಅಭಿವೃದ್ಧಿಗೆ ವಿಶೇಷ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿ ಭರವಸೆ
ಅರ್ಕಾವತಿ ವರದಿ ಮೇಲೆ ಕಾನೂನಾತ್ಮಕ ಕ್ರಮ: ಸಿದ್ಧರಾಮಯ್ಯ ಅರ್ಕಾವತಿ ಹಗರಣ ಸಿಬಿಐ ತನಿಖೆಗೆ ವಹಿಸುವಂತೆ ಹೇಳಿದ್ದಾರೆ. ಅರ್ಕಾವತಿ ಹಗರಣದ ಬಗ್ಗೆ ಕಮೀಷನ್ ವರದಿ ಕೊಟ್ಟಿದೆ. ಮುಂದೆ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ. ನಾವು ಸಂಪುಟದಲ್ಲಿ ಚರ್ಚಿಸಿ ಮುಂದಿನ ನಿರ್ಧಾನ ಕೈಗೊಳ್ತೇವೆ. ಈ ಬಗ್ಗೆ ಅನಗತ್ಯವಾಗಿ ಚರ್ಚೆ ಮಾಡುವುದಿಲ್ಲ. ಇನ್ನು ಸೋನಿಯಾಗಾಂಧಿ ರಾಜಕೀಯ ನಿವೃತ್ತಿ ಹೊಂದುವುದು ಅವರ ವೈಯಕ್ತಿಕ ವಿಚಾರವಾಗಿದೆ. ಈ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಹೇಳಿದರು.
ಸಿದ್ಧರಾಮಯ್ಯ ಹೇಳಿರೋ ಸುಳ್ಳು ಹೊರಬರ್ತಿವೆ: ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸಿದ್ಧರಾಮಯ್ಯ ಆರೋಪ ಮಾಡುತ್ತಾರೆ. ಆದರೆ, ಈ ವೇಳೆ ಸಿದ್ಧರಾಮಯ್ಯ ತಾವೇ ಸುಳ್ಳಿನ ಸುಳಿಯಲ್ಲಿ ಸಿಲುಕುತ್ತಿದ್ದಾರೆ. ಸಿದ್ಧರಾಮಯ್ಯ ಹೇಳಿರೋ ಸುಳ್ಳು ಒಂದೊಂದಾಗಿ ಹೊರಬರ್ತಿದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವ ಭರವಸೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲಿಯೇ ಹೇಳಿದ್ದೇನೆ. ಇನ್ನೊಬ್ಬರ ಬಗ್ಗೆ ಸಾವಿರ ಬಾರಿ ಸುಳ್ಳು ಹೇಳಿದರೆ ಅದು ಸತ್ಯವಾಗುತ್ತೆ ಅನ್ನೋ ಭ್ರಮೆಯಲ್ಲಿದ್ದಾರೆ. ಸತ್ಯ ಸತ್ಯವೇ. ಸುಳ್ಳು ಸುಳ್ಳೆ. ಅವರು ಹೇಳಿದ ತಕ್ಷಣ ಸುಳ್ಳು ಸತ್ಯವಾಗಲ್ಲ, ಸತ್ಯ ಸುಳ್ಳಾಗಲ್ಲ. ಆದರೆ, ಅತಿಯಾದ ಸುಳ್ಳು ಹೇಳಿದ ಮೇಲೆ ಸುಳ್ಳೇ ಸತ್ಯ ಅಂತ ಅವರಿಗೆ ನಂಬಿಕೆ ಬರಲಾರಂಭಿಸಿದೆ. ಸುಳ್ಳಿನ ಸುಳಿಯಲ್ಲಿ ಕಾಂಗ್ರೆಸ್ ಸಿಕ್ಕಿಹಾಕಿಕೊಳ್ಳುತ್ತದೆ ಎಂದು ಹೇಳಿದರು.
Bagalkote: ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬರೋ ಪ್ರಶ್ನೆಯೇ ಇಲ್ಲ: ಸಿಎಂ ಬೊಮ್ಮಾಯಿ
ಯಡಿಯೂರಪ್ಪ ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ: ರಾಜ್ಯದಲ್ಲಿ 7 ವೇತನ ಆಯೋಗ ಜಾರಿಗಾಗಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಮಾಡುತ್ತಿದ್ದಾರೆ. ಈ ಬಗ್ಗೆ ನಾನು ಈಗಾಗಲೇ ಅವರ ಜೊತೆ ಚರ್ಚಿಸಿದ್ದೇನೆ. ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವುದಿಲ್ಲ. ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಅವರು ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿಯನ್ನು ಅವರು ಮತ್ತಷ್ಟು ಬಲಪಡಿಸುತ್ತಾರೆ ಎಂದು ಮಾಹಿತಿ ನೀಡಿದರು.