ಸಿಎಂ ಸಿದ್ದುರನ್ನು ರಾಜಕೀಯವಾಗಿ ಮುಗಿಸಲು ವಿರೋಧ ಪಕ್ಷಗಳಿಂದ ಸತತ ಕುತಂತ್ರ: ಯತೀಂದ್ರ ಸಿದ್ದರಾಮಯ್ಯ

By Govindaraj S  |  First Published Jul 12, 2024, 11:14 PM IST

ರಾಜ್ಯದಲ್ಲಿ ಡಿ.ದೇವರಾಜ ಅರಸ್ ಅವರನ್ನು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ 2ನೇ ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಹೆಜ್ಜೆ ಹೆಜ್ಜೆಗೂ ತಪ್ಪು ಹುಡುಕಿ ಅವರನ್ನು ಹಣಿಯಲು ಕುತಂತ್ರ ಮಾಡಲಾಗುತ್ತಿದೆ ಎಂದು ಸಿಎಂ ಅವರ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. 


ವರದಿ: ಕೆ.ಎಂ.ಹರೀಶ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾಸನ

ಹಾಸನ (ಜು.12): ರಾಜ್ಯದಲ್ಲಿ ಡಿ.ದೇವರಾಜ ಅರಸ್ ಅವರನ್ನು ಹೊರತುಪಡಿಸಿದರೆ, ಹಿಂದುಳಿದ ವರ್ಗದ ನಾಯಕರಲ್ಲಿ ಸಿದ್ದರಾಮಯ್ಯ ಮಾತ್ರ 2ನೇ ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಹೆಜ್ಜೆ ಹೆಜ್ಜೆಗೂ ತಪ್ಪು ಹುಡುಕಿ ಅವರನ್ನು ಹಣಿಯಲು ಕುತಂತ್ರ ಮಾಡಲಾಗುತ್ತಿದೆ ಎಂದು ಸಿಎಂ ಅವರ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ಪಟ್ಟಣದ ಕನಕ ಭವನ ಆವರಣದಲ್ಲಿ ಕುರುಬರ ಸಂಘ ಹಾಗೂ ಅಹಿಂದ ಸಂಘಟನೆಗಳು ಆಯೋಜಿಸಿದ್ದ ಸಂಸದ ಶ್ರೇಯಸ್ ಪಟೇಲ್‌ಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿಪಕ್ಷಗಳು ಹಾಗೂ ಪ್ರಬಲ ವರ್ಗ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿವೆ ಎಂದು ದೂರಿದರು.

Latest Videos

undefined

ನಿಮ್ಮಲ್ಲರ ಬೆಂಬಲದಿಂದ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಹಿಂದುಳಿದ ವರ್ಗದ ರಾಜಕಾರಣಿಗಳು ಇಂತಹ ರಾಜಕೀಯ ಬೆಳವಣಿಗೆ ಹೊಂದುವುದು ಅಷ್ಟು ಸುಲಭದ ಮಾತಲ್ಲ. ಮತ್ತೊಮ್ಮೆ ಸಿದ್ದರಾಮಯ್ಯ ಸಿಎಂ ಆಗಲು ನೀವು ಕಾರಣ, ನೀವು ಒಗ್ಗಟ್ಟಾಗಿ ಅವರ ಹಿಂದೆ ಶಕ್ತಿಯಾಗಿ ನಿಂತಿದ್ದರಿಂದ ಅವರು ಇಷ್ಟೆಲ್ಲಾ ಸವಾಲುಗಳನ್ನು ಎದುರಿಸಿದ್ದಾರೆ ಎಂದರು. ನೀವು ಎಲ್ಲಿಯವರೆಗೆ ರಾಜಕೀಯವಾಗಿ ಅವರ ಹಿಂದೆ ನಿಂತಿರುತ್ತೀರೋ ಅಲ್ಲಿಯವರೆಗೆ ಅವರನ್ನು ಯಾರೂ ಏನು ಮಾಡಲು ಆಗಲ್ಲ ಎಂದರು.

ಯಾರು ಎಷ್ಟೇ ಅಪಪ್ರಚಾರ ಮಾಡಿದರೂ ಅದಕ್ಕೆ ಕಿವಿ ಕೊಡಬೇಡಿ, ಅದನ್ನು ನಂಬಬೇಡಿ. ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ, ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ತಂದೆಯ ಪರ ಬ್ಯಾಟಿಂಗ್ ಮಾಡಿದರು. ಗ್ಯಾರಂಟಿ ಯೋಜನೆಗಳಿಗೆ ಹಣ,ಅಭಿವೃದ್ಧಿ ಕಾರ್ಯಕ್ಕೆ ಅನುದಾನ ನೀಡಿ, ಆರ್ಥಿಕ ಪರಿಸ್ಥಿತಿ ಕುಸಿಯದಂತೆ ನೋಡಿಕೊಳ್ಳುತ್ತಿರುವುದು ಮುಖ್ಯಮಂತ್ರಿಗಳ ಸಾಧನೆಯಾಗಿದೆ. ಎಲ್ಲರಿಗೂ ಸರಿಯಾದ ನ್ಯಾಯ ಸಿಗುತ್ತಿದೆ ಎಂದರೆ ಅದಕ್ಕೆ ಸಿದ್ದರಾಮಯ್ಯ ಕಾರಣ ಎಂದರು. 

ವಾಲ್ಮೀಕಿ ನಿಗಮದಲ್ಲಿ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್

ವಿಧಾನಸಭೆ ಚುನಾವಣೆ ಸೋಲಿನಿಂದ ಹತಾಶರಾಗದೆ ಶ್ರೇಯಸ್ ಪಟೇಲ್ ಅವರು ಜನರ ನಿರಂತರ ಒಲವು ಗಳಿಸಿ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ. ಅವರು ಎಲ್ಲ ವರ್ಗದವರನ್ನು ಸಮಾನವಾಗಿ ಕಾಣುವ ಮನೋಭಾವ ಹೊಂದಿದ್ದಾರೆ ಎಂದರು. ಹೊಳೆನರಸೀಪುರ ತಾಲೂಕಿನಲ್ಲಿ ಜಾತಿ ವೈಷಮ್ಯ, ಅಭಿವೃದ್ಧಿ ತಾರತಮ್ಯ ಇದೆ ಎಂದು ನಾನು ಬಲ್ಲೆ. ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ೨೦ ವರ್ಷದಿಂದ ತುಳಿತಕ್ಕೊಳಗಾಗಿ, ತಾರತಮ್ಯದ ನೋವು ಅನುಭವಿಸಿದ್ದಾರೆ. ಮುಂದೆ ಹಲವು ಕೆಲಸ ಆಗಬೇಕೆಂದು ಗಮನಕ್ಕೆ ತಂದಿದ್ದಾರೆ. ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಮಾತನಾಡುತ್ತೇನೆ. ಅದರಲ್ಲೂ ಹಾಸನದ ಹಳ್ಳಿ ಮೈಸೂರು ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದರು.

click me!