ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಬೆಲೆ ಏರಿಕೆ: ಮಾಜಿ ಶಾಸಕ ಎಲ್.ನಾಗೇಂದ್ರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಬಿಜೆಪಿ ನಗರಾಧಕ್ಷರಾದ ಮಾಜಿ ಶಾಸಕ ಎಲ್. ನಾಗೇಂದ್ರ ಕಿಡಿಕಾರಿದರು. 
 


ಮೈಸೂರು (ಏ.02): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ ಎಂದು ಬಿಜೆಪಿ ನಗರಾಧಕ್ಷರಾದ ಮಾಜಿ ಶಾಸಕ ಎಲ್. ನಾಗೇಂದ್ರ ಕಿಡಿಕಾರಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.1 ರಂದು ಮತ್ತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡಲಾಗಿದೆ. ಹಾಲಿನ ದರ ಮತ್ತಷ್ಟು ದುಬಾರಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಯೋಜನೆ ಜಾರಿ ಮಾಡಿದ ಸರ್ಕಾರ ಮತ್ತೊಂದೆಡೆ ವಿದ್ಯುತ್, ಬಸ್ ಟಿಕೆಟ್ ದರ, ಹಾಲು, ಮೆಟ್ರೋ, ವೈದ್ಯಕೀಯ ವೆಚ್ಚ, ಮರಣ ಪ್ರಮಾಣ ಪತ್ರ, ಆಪರೇಷನ್ ವೆಚ್ಚ, ರೆವೆನ್ಯೂ, ರಿಜಿಸ್ಟ್ರೇಷನ್, ಮುದ್ರಾಂಕ ಶುಲ್ಕ, ಪಾಲಿಕೆ ಟ್ಯಾಕ್ಸ್ ಸೇರಿದಂತೆ ಎಲ್ಲವನ್ನೂ ಹೆಚ್ಚಿಸಿದೆ. ಈ ಮೂಲಕ ಗ್ಯಾರಂಟಿ ಹೆಸರಲ್ಲಿ ಜನರ ದಾರಿ ತಪ್ಪಿಸಿ ಮಂತ್ರಿಗಳು ಮತ್ತು ಶಾಸಕರು ಲೂಟಿ ಹೊಡೆಯುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Latest Videos

ಇ-ಖಾತೆ ಮಾಡಿಸಲು ಮಧ್ಯವರ್ತಿಗಳ ಹಾವಳಿ: ಎಚ್.ಡಿ.ರೇವಣ್ಣ ಕಿಡಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಾಲು ಮತ್ತು ಮೊಸರಿನ ದರ ಮೂರನೇ ಬಾರಿಗೆ ಏರಿಕೆ ಮಾಡಲಾಗಿದೆ. ಆದರೆ, ಏರಿಕೆ ಮಾಡಲಾದ ಹಣವನ್ನು ರೈತರಿಗೆ ಕೊಡುತ್ತಿಲ್ಲ. ಈವರೆಗೆ 662 ಕೋಟಿ ರೂ. ಹಾಲಿನ ಹಣವನ್ನು ರೈತರಿಗೆ ಕೊಡದೆ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ಅವರು ಕಿಡಿಕಾರಿದರು. ರಾಜ್ಯ ಸರ್ಕಾರದ ಬೆಲೆ ಏರಿಕೆ ಧೋರಣೆ ಮತ್ತು ಮುಸ್ಲಿಮರಿಗೆ ನೀಡಿರುವ ಮೀಸಲಾತಿ ಖಂಡಿಸಿ ಮೈಸೂರಿನಲ್ಲಿ ಏ.7 ರಂದು ಬೃಹತ್ ಪ್ರತಿಭಟನೆ ಮಾಡಲು ಸಿದ್ಧತೆ ನಡೆಸಲಾಗಿದೆ ಎಂದರು.

ಮುಸ್ಲಿಂ ಮೀಸಲಾತಿ ಹಿಂಪಡೆಯಿರಿ: ಮಂತ್ರಿಗಳು ಲೂಟಿಯಲ್ಲಿ ತೊಡಗಿದ್ದಾರೆ. ಮಂತ್ರಿಗಳ ಮೇಲೆ ಮುಖ್ಯಮಂತ್ರಿಗೆ ಹಿಡಿತವಿಲ್ಲದಂತಾಗಿದೆ. ರಾಜ್ಯ ಸರ್ಕಾರ ಮುಸ್ಲಿಮರ ತುಷ್ಠೀಕರಣದಲ್ಲಿ ತೊಡಗಿದೆ. ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರಿಗೆ ಪ್ರತ್ಯೇಕವಾಗಿ ಮೀಸಲಾತಿ ಜಾರಿಗೊಳಿಸುವ ಮೂಲಕ ವಿಭಿನ್ನ ಧೋರಣೆ ತಳೆದಿದೆ. ಮುಸ್ಲಿಮರಿಗೆ ನೀಡಿರುವ ಮೀಸಲಾತಿ ಕೂಡಲೇ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದರು.

ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಒಪಿಡಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಇದೇ ರೀತಿ ಜನನ ಮರಣ ಪ್ರಮಾಣ ಪತ್ರಗಳನ್ನು ನೀಡಲು ಹೆಚ್ಚಿನ ಶುಲ್ಕ ನಿಗದಿ ಮಾಡಲಾಗಿದೆ. ಉಚಿತವಾಗಿ ನೀಡಬೇಕಾದ ವೈದ್ಯಕೀಯ ಸೇವೆಗಳಿಗೆ ದರ ನಿಗದಿ ಮಾಡಿರುವುದು ಸರಿಯಲ್ಲ. ದರ ಏರಿಕೆ ಮೂಲಕ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದೆ ಎಂದು ಅವರು ಆರೋಪಿಸಿದರು. ಶಾಸಕ ಟಿ.ಎಸ್. ಶ್ರೀವತ್ಸ, ಬಿಜೆಪಿ ಜಿಲ್ಲಾಧಕ್ಷ ಎಲ್.ಆರ್. ಮಹದೇವಸ್ವಾಮಿ, ಮುಖಂಡರಾದ ಮೋಹನ್, ಕೇಬಲ್ ಮಹೇಶ್, ಮಹೇಶ್ ರಾಜೇ ಅರಸ್, ರಾಕೇಶ್ ಗೌಡ, ಜೋಗಿ ಮಂಜು ಮೊದಲಾದವರು ಇದ್ದರು.

ಪರ್ಯಾಯ ರಾಜಕೀಯ ವ್ಯವಸ್ಥೆ ರೂಪುಗೊಳ್ಳುವುದು ಅನಿವಾರ್ಯ: ನಟ ಚೇತನ್ ಅಹಿಂಸಾ

ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುತ್ತಿಲ್ಲ. ಬಿಜೆಪಿ- ಜೆಡಿಎಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ಗೆ ಸೋಲಿನ ಭೀತಿ ಕಾಡುತ್ತಿದೆ. ಇದೇ ಕಾರಣರಿಂದ ಮೈಸೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ. ಪಾಲಿಕೆಗೆ ಚುನಾವಣೆ ‌‌ನಡೆಸದ ಕಾರಣ ಕೇಂದ್ರದ ಅನುದಾನ ವಾಪಸ್ ಹೋಗಿದೆ.
- ಎಲ್. ನಾಗೇಂದ್ರ, ಮಾಜಿ ಶಾಸಕ

click me!