* ತಮ್ಮ ಪರ ಸಹಿ ಸಂಗ್ರಹಕ್ಕೆ ನಿಂತ ಶಾಸಕರಿಗೆ ಬಿಎಸ್ವೈ ಸಂಕಷ್ಟದ ಪಾಠ
* ಬಿಜೆಪಿ ಶಾಸಕರುಗಳಿಗೆ ಕಿವಿ ಹೇಳಿದ ಸಿಎಂ ಬಿಎಸ್ ಯಡಿಯೂರಪ್ಪ
* ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿ ಎಂದ ಸಿಎಂ
ಬೆಂಗಳೂರು, (ಜೂನ್.07): ಕೊರೋನಾ ಸಂಕಷ್ಟದ ಮಧ್ಯೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಇನ್ನು ಈ ಬಗ್ಗೆ ಬಿಜೆಪಿ ನಾಯಕರುಗಳು ನಾನಾ ಅರ್ಥದಲ್ಲಿ ಹೇಳಿಕೆಗಳನ್ನು ಕೊಡುತ್ತಿದ್ದಾರೆ.
ಇದರಿಂದ ಪಕ್ಷದ ನಾಯಕರಲ್ಲೇ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. ಇನ್ನು ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿ, ಬಿಜೆಪಿ ಶಾಸಕರುಗಳಿಗೆ ಕಿವಿ ಮಾತೊಂದನ್ನು ಹೇಳಿದ್ದಾರೆ.
ಯಡಿಯೂರಪ್ಪ ಪರ ಸಹಿ ಸಂಗ್ರಹ: ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ
ಈ ಸಂಬಂಧ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿರುವ ಯಡಿಯೂರಪ್ಪ, ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದಿದ್ದಾರೆ.
ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು.ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ
— B.S. Yediyurappa (@BSYBJP)ರಾಜ್ಯ ಬಿಜೆಪಿಯಲ್ಲಿ ಸಿಎಂ ಬದಲಾವಣೆ, ದೆಹಲಿ ಪ್ರಯಾಣ, ಸಹಿ ಸಂಗ್ರಹ ಸೇರಿದಂತೆ ಹಲವು ವಿದ್ಯಮಾನಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದರಲ್ಲೂ ಹೈಕಮಾಂಡ್ ಕೇಳಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸ್ಫೋಟಕ ಹೇಳಿಕೆ ನೀಡಿದ್ದ ಬೆನ್ನಲ್ಲೇ ಮತ್ತಷ್ಟು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.