
ಬೆಂಗಳೂರು, (ಏ.30): ಕರ್ನಾಟಕದಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದ್ದು, ಸೂಕ್ತ ಸಮಯಕ್ಕೆ ಬೆಡ್, ಆಕ್ಸಿಜನ್, ಅಂಬ್ಯುಲೆನ್ಸ್ ಸಿಗದೇ ಕೊರೋನಾ ಸೊಂಕಿತರು ಪರದಾಡುತ್ತಿದ್ದಾರೆ.
ಅದರಲ್ಲೂ ಬೆಂಗಳೂರಂತೂ ಕೊರೋನಾ ಹಾಟ್ಸ್ಪಾಟ್ ಆಗಿದ್ದು, ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಸಹಾಯಕ್ಕೆ ರಾಜ್ಯ ಕಾಂಗ್ರೆಸ್ ಮುಂದಾಗಿದೆ.
ಕರುನಾಡಿಗೆ ಬಿಗ್ ಶಾಕ್: ಒಂದೇ ದಿನ ಬರೋಬ್ಬರಿ 48 ಸಾವಿರ ಕೊರೋನಾ ಕೇಸ್
ಹೌದು... ಯುವ ಕಾಂಗ್ರೆಸ್ ಘಟಕ ಅಂಬ್ಯುಲೆನ್ಸ್ ಸೇವೆಯನ್ನು ಆರಂಭಿಸಿದೆ. ಕಾಂಗ್ರೆಸ್ ಕೇರ್ಸ್ ಹೆಸರಿನಲ್ಲಿ ಆರಂಭಿಸಿದ್ದು, ಸಹಾಯವಾಣಿ ಮತ್ತಿತರ ನೆರವುಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ವಿವರಿಸಿದ್ದಾರೆ.
ವಿಡಿಯೋ ಕಾಲ್ ಮೂಲಕ ವಿವರಣೆ ನೀಡಲಾಗಿದೆ. ಈ ವೇಳೆ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಹಾಗೂ ರಾಮಲಿಂಗಾರೆಡ್ಡಿ ಅವರು ಶಿವಕುಮಾರ್ ಜತೆಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.