ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕ ಪ್ರಕಟ: ಡಿ.ಕೆ.ಶಿವಕುಮಾರ್‌

Published : Jan 20, 2024, 06:43 AM IST
ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ನೇಮಕ ಪ್ರಕಟ: ಡಿ.ಕೆ.ಶಿವಕುಮಾರ್‌

ಸಾರಾಂಶ

ರಾಜ್ಯದ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳಿಗೆ 36 ಶಾಸಕರು ಹಾಗೂ 39 ಕಾರ್ಯಕರ್ತರ ಪಟ್ಟಿ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ಹೊರಬೀಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. 

ಬೆಂಗಳೂರು (ಜ.19): ರಾಜ್ಯದ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಗಳಿಗೆ 36 ಶಾಸಕರು ಹಾಗೂ 39 ಕಾರ್ಯಕರ್ತರ ಪಟ್ಟಿ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಾದರೂ ಹೊರಬೀಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಾನು ನಿನ್ನೆಯೂ ಹೇಳಿದ್ದೇನೆ, ಈಗಲೂ ಹೇಳುತ್ತಿದ್ದೇನೆ. ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಅಂತಿಮಗೊಂಡಿದೆ. ಯಾವುದೇ ಕ್ಷಣದಲ್ಲಿ ಬೇಕಾದರೂ ಪ್ರಕಟವಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲು ಕಾರಣಕರ್ತರಾದ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನಗಳನ್ನು ನೀಡಲಾಗಿದೆ. ಪಟ್ಟಿಯಲ್ಲಿ 36 ಶಾಸಕರು ಮತ್ತು 39 ಕಾರ್ಯಕರ್ತರ ಹೆಸರುಗಳನ್ನು ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಂತಿಮಗೊಳಿಸಲಾಗಿದ್ದು ಶೀಘ್ರದಲ್ಲೇ ಪ್ರಕಟಿಸುತ್ತೇವೆ ಎಂದರು.

ಮಾಧ್ಯಮದಲ್ಲಿ ಈಗಾಗಲೇ ಪ್ರಕಟವಾಗಿದೆ: ಮತ್ತೊಂದೆಡೆ ಈ ವಿಚಾರವಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಕೂಡ ನಗರದಲ್ಲಿ ಮಾತನಾಡಿ, ಈಗಾಗಲೇ ಪಟ್ಟಿ ಮಾಧ್ಯಮಗಳಲ್ಲಿ ಪ್ರಕಟ ಆಗಿದೆ. ಮಾಧ್ಯಮಗಳವರೆಗೆ ಬಂದಿದೆ ಅಂದರೆ ನಾವು ಪ್ರಕಟಿಸಲೇಬೇಕಲ್ಲ ಎಂದು ಹೇಳಿದರು. 

ಕೆಲ ಸ್ವಾಮೀಜಿಗಳಿಂದ ರಾಜಕೀಯಕ್ಕಾಗಿ ಶ್ರೀ ರಾಮಮಂದಿರ ಬಗ್ಗೆ ಅಪಸ್ವರ: ಸಂಸದ ಪ್ರತಾಪ್ ಸಿಂಹ

ಕಾರಂತ ಲೇಔಟ್‌ನಲ್ಲಿ ಸೈಟ್‌ಗೆ 25ರಿಂದ ಅರ್ಜಿ: ಬಿಡಿಎ ನಿರ್ಮಾಣದ ಡಾ। ಶಿವರಾಮ ಕಾರಂತ ಬಡಾವಣೆ ನಿವೇಶನಗಳ ಹಂಚಿಕೆಗೆ ಜ.25ರಿಂದಲೇ ಅರ್ಜಿ ಆಹ್ವಾನಿಸಲಾಗುತ್ತದೆ. ಬಡಾವಣೆ ನಿರ್ಮಾಣದ ವೆಚ್ಚದ ಆಧಾರದಲ್ಲಿ ಪ್ರತಿ ಚದರ ಅಡಿಗೆ ₹4,900 ದರ ನಿಗದಿಪಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರಕಟಿಸಿದರು. ಬಿಡಿಎ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಆದ್ಯತೆಯಲ್ಲಿ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡುತ್ತೇವೆ. 

ಆ ನಂತರ ಶಿವರಾಮ ಕಾರಂತ ಬಡಾವಣೆ ನಿವೇಶನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದರು. ಬಿಡಿಎ ಕಚೇರಿಗಳಲ್ಲಿ ಆಫ್‍ಲೈನ್ ಮೂಲಕ ಅರ್ಜಿ ಸ್ವೀಕರಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರು ಒಂದು ತಿಂಗಳಲ್ಲಿ ನಿವೇಶನದ ಒಟ್ಟು ಮೊತ್ತದ ಶೇ.12.5ರಷ್ಟು ಆರಂಭಿಕ ಠೇವಣಿ ಪಾವತಿಸಬೇಕು. ಪರಿಶಿಷ್ಟರು ಶೇ.5ರಷ್ಟು ಠೇವಣಿ ಕಟ್ಟಬೇಕು. ಬಹಳ ಪಾರದರ್ಶಕವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಹೆಸರಲ್ಲೇ ಲಕ್ಷ್ಮಣ ಇರುವಾಗ ರಾಮ ಮಂದಿರಕ್ಕೆ ಹೋಗದಿರಲು ಸಾಧ್ಯವೆ: ಶಾಸಕ ಲಕ್ಷ್ಮಣ ಸವದಿ

ಶಿವರಾಮ ಕಾರಂತ ಬಡಾವಣೆಯಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣಕ್ಕೆ 45 ಅಡಿ ರಸ್ತೆ ಇರುವ ಕಡೆ 25-30 ಎಕರೆ ಜಾಗ ಗುರುತಿಸಲಾಗಿದೆ. ಕಂಠೀರವ ಕ್ರೀಡಾಂಗಣ ಮಾದರಿಯಲ್ಲಿ ಬೆಂಗಳೂರು ಉತ್ತರ ಭಾಗದಲ್ಲಿ ಮತ್ತೊಂದು ಕ್ರೀಡಾಂಗಣ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಸಿಎ ನಿವೇಶನ, ಪಾರ್ಕ್ ಎಲ್ಲವೂ ಇದೆ. ಇಲ್ಲಿ ಶೇ.4.2ರಷ್ಟು ಜಾಗದಲ್ಲಿ ನಿವೇಶನ ಮಾಡಲಾಗಿದ್ದು, ಉಳಿದ ಜಾಗವನ್ನು ಅಗಲವಾದ ರಸ್ತೆ ಹಾಗೂ ಇತರೆ ಸೌಕರ್ಯಕ್ಕೆ ಬಳಸಲಾಗಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ