ನಿಗಮ ಮಂಡಳಿಗೆ ನೇಮಕ ಬಗ್ಗೆ 3-4 ದಿನಗಳಲ್ಲಿ ಅಂತಿಮ ಆದೇಶ? ಅಧ್ಯಕ್ಷ, ಉಪಾಧ್ಯಕ್ಷರ ಹೆಸರು ಫೈನಲ್

Kannadaprabha News   | Kannada Prabha
Published : Jul 17, 2025, 07:18 AM IST
Congress flag

ಸಾರಾಂಶ

ರಾಜ್ಯದಲ್ಲಿ ಈಗಾಗಲೇ ನಿಗಮ-ಮಂಡಳಿ ನೇಮಕ ಆಗಿದ್ದರೂ ಇನ್ನೂ 40 ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ 30ಕ್ಕೂ ಹೆಚ್ಚು ಹುದ್ದೆಗಳ ನೇಮಕ ಬಾಕಿ ಇತ್ತು.

ಬೆಂಗಳೂರು (ಜು.17): ರಾಜ್ಯದಲ್ಲಿನ ಖಾಲಿ ಇರುವ ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ನೇಮಕ ಕುರಿತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಮಹತ್ವದ ಸಭೆ ನಡೆಸಿದ್ದು, ಮೂರ್ನಾಲ್ಕು ದಿನಗಳಲ್ಲಿ ಖಾಲಿ ಸ್ಥಾನಗಳಿಗೆ ನೇಮಕಾತಿ ಆದೇಶ ಹೊರಬೀಳುವ ಸಾಧ್ಯತೆಯಿದೆ. ರಾಜ್ಯದಲ್ಲಿ ಈಗಾಗಲೇ ನಿಗಮ-ಮಂಡಳಿ ನೇಮಕ ಆಗಿದ್ದರೂ ಇನ್ನೂ 40 ನಿಗಮ-ಮಂಡಳಿಗಳ ಅಧ್ಯಕ್ಷ, ಉಪಾಧ್ಯಕ್ಷರ 30ಕ್ಕೂ ಹೆಚ್ಚು ಹುದ್ದೆಗಳ ನೇಮಕ ಬಾಕಿ ಇತ್ತು. ಅಲ್ಲದೆ ಸಾವಿರಕ್ಕೂ ಹೆಚ್ಚು ಸದಸ್ಯರ ನೇಮಕವೂ ಆಗಿರಲಿಲ್ಲ.

ಈ ಬಗ್ಗೆ ನಿಗಮ-ಮಂಡಳಿ ಸದಸ್ಯರು ಹಾಗೂ ನಿರ್ದೇಶಕರನ್ನಾಗಿ ಕಾರ್ಯಕರ್ತರನ್ನು ನೇಮಿಸುವ ಕುರಿತು ಪಟ್ಟಿ ಸಿದ್ಧಪಡಿಸುವಂತೆ ಡಾ.ಜಿ.ಪರಮೇಶ್ವರ್‌ ನೇತೃತೃತ್ವದಲ್ಲಿ 2024ರ ಜೂನ್‌ನಲ್ಲೇ ಸಮಿತಿ ರಚಿಸಲಾಗಿತ್ತು. ಸಮಿತಿ ವರದಿ ನೀಡಿದ್ದರೂ ಈವರೆಗೆ ನೇಮಕಾತಿ ನಡೆದಿರಲಿಲ್ಲ. ಇದೀಗ ಪಟ್ಟಿ ಬಹುತೇಕ ಅಂತಿಮವಾಗಿದ್ದು ಬುಧವಾರ ಸಂಜೆ ಸಚಿವರೊಂದಿಗಿನ ಸಭೆ ಬಳಿಕ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ನಿಗಮ-ಮಂಡಳಿ ಬಗ್ಗೆ ಚರ್ಚಿಸಿದ್ದಾರೆ. ಇದಕ್ಕೂ ಮೊದಲು ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರೊಂದಿಗೂ ವಿವರಣೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಪಟ್ಟಿ ಬಹುತೇಕ ಅಂತಿಮಗೊಂಡಿದೆ. ಪಕ್ಷದ ಶಾಸಕರು, ಮೇಲ್ಮನೆ ಸದಸ್ಯರು, ಸಂಸದರು, ಪರಾಜಿತ ಅಭ್ಯರ್ಥಿಗಳು ಹಾಗೂ ಡಿಸಿಸಿ ಅಧ್ಯಕ್ಷರ ಶಿಫಾರಸು ಆಧರಿಸಿ ಅರ್ಹರಾದವರ ಪಟ್ಟಿಯನ್ನು ಪುನಃ ಪರಿಶೀಲನೆಗೆ ಒಳಪಡಿಸಿ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿಗಳು ಸದ್ಯದಲ್ಲೇ ಅನುಮೋದನೆ ನೀಡಲಲಿದ್ದು, 3-4 ದಿನಗಳಲ್ಲಿ ಇಲಾಖಾವಾರು ನೇಮಕ ಆದೇಶಗಳು ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ನಿಗಮ-ಮಂಡಳಿಗೆ ಸದಸ್ಯರ ನೇಮಿಸಲು ಕಾರ್ಯಕರ್ತರ ಪಟ್ಟಿ ಸಿದ್ಧಪಡಿಸಲು ನನಗೆ ಜವಾಬ್ದಾರಿ ನೀಡಿದ್ದರು. ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದೆ. ಇದೀಗ ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು ಹಾಗೂ ಸುರ್ಜೇವಾಲ ಅವರು ವರದಿ ಪರಿಶೀಲಿಸಿ ಕಾರ್ಯಕರ್ತರಿಗೆ ಜವಾಬ್ದಾರಿ ನೀಡಲು ತೀರ್ಮಾನ ಮಾಡಿದ್ದಾರೆ
-ಡಾ.ಜಿ.ಪರಮೇಶ್ವರ, ಗೃಹ ಸಚಿವ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: 'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ' - ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ