
ಬೆಂಗಳೂರು(ಡಿ.31): ನಿಗಮ-ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದ್ದು, ಸಂಕ್ರಾಂತಿ ವೇಳೆಗೆ ನೇಮಕ ಆದೇಶ ಆಗಬಹುದು' ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಮೂಲಕ ಯಾವುದೇ ಕ್ಷಣದಲ್ಲಿ ನೇಮಕ ಘೋಷಣೆ ಆಗಬಹುದು ಎಂಬ ನಿರೀಕ್ಷೆ ಹುಸಿಯಾಗಿದೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲ ನಾಯಕರೂ ಕುಳಿತು ಚರ್ಚೆ ಮಾಡುತ್ತೇವೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ಕೊಟ್ಟಿರುತ್ತಾರೆ. ಅದಕ್ಕಾಗಿ ಎಲ್ಲರ ಜತೆ ಚರ್ಚೆ ಮಾಡಬೇಕು. ಎಲ್ಲವೂ ಮುಗಿದು ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕ ಆಗಬಹುದು ಎಂಬ ನಿರೀಕ್ಷೆಯಿದೆ' ಎಂದರು.
ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಯಾವುದೇ ಕ್ಷಣದಲ್ಲಿ ಪ್ರಕಟ
ಜನರ ಬಳಿಗೆ ಸರ್ಕಾರ ಕೊಂಡೊಯ್ಯಲು ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ ಎಂದು ಹೇಳಿದರು.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ವಿಚಾರವಾಗಿ ಮಾತನಾಡಿ, 'ನಾನು ಆಂಧ್ರಕ್ಕೆ ಹೋಗಿ ಅವರನ್ನು ಭೇಟಿ ಆಗಲಿಲ್ಲ. ಅವರು ಬೆಂಗಳೂರಿಗೆ ಬಂದು ಹೋಗುವಾಗ ವಿಮಾನ ನಿಲ್ದಾಣದಲ್ಲಿ ಸಿಕ್ಕಿದ್ದರು. ಅವರ ಆರೋಗ್ಯ ವಿಚಾರಿಸಿದೆ. ಇದೊಂದು ಸೌಜನ್ಯದ ಭೇಟಿಯಷ್ಟೇ' ಎಂದು ಸಷ್ಟಪಡಿಸಿದರು.
ನಿಗಮ-ಮಂಡಳಿ ನೇಮಕ ಮುಂದಕ್ಕೆ: ಶಾಸಕರಿಗಷ್ಟೇ ಪಟ್ಟ ಕಟ್ಟೋದು ಬೇಡವೆಂದ ಕಾಂಗ್ರೆಸ್ ಹೈಕಮಾಂಡ್!
ಲೋಕಸಭೆ ಚುನಾವಣೆ ಸಿದ್ಧತೆಗೆ ಜ.4 ರಂದು ಸಭೆ:
ಬೆಂಗಳೂರು: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ವಿಚಾರವಾಗಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆ ಸಮೀಕ್ಷೆ ನಡೆಸಬೇಕಿದೆ. ಈ ವಿಚಾರವಾಗಿ ಚರ್ಚಿಸಲು ಜ.4 ರಂದು ದೆಹಲಿಗೆ ದೆಹಲಿಗೆ ಹೋಗುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಜತೆಗೆ ಲೋಕಸಭೆ ಚುನಾವಣೆ ಸಿದ್ಧತೆ ವಿಚಾರವಾಗಿ ಜ. 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆ ಸಭೆ ಮಾಡುತ್ತೇವೆ ಎಂದು ಹೇಳಿದರು.
ಚರ್ಚೆ ಆಗಬೇಕು
ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಅದಕ್ಕಾಗಿ ಎಲ್ಲ ನಾಯಕರೂ ಕುಳಿತು ಚರ್ಚೆ ಮಾಡುತ್ತೇವೆ. ಕೇಂದ್ರ ನಾಯಕರೂ ಕೆಲವರಿಗೆ ಅಧಿಕಾರ ನೀಡುವ ಮಾತು ಕೊಟ್ಟಿರುತ್ತಾರೆ. ಎಲ್ಲ ಮುಗಿದು ಸಂಕ್ರಾಂತಿ ವೇಳೆಗೆ ನೇಮಕ ಆಗಬಹುದು ಎಂಬ ನಿರೀಕ್ಷೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.