ಆ.15ರಿಂದ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ: ಸಚಿವ ಕೃಷ್ಣ ಬೈರೇಗೌಡ

Published : Jul 31, 2023, 11:21 PM IST
ಆ.15ರಿಂದ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ: ಸಚಿವ ಕೃಷ್ಣ ಬೈರೇಗೌಡ

ಸಾರಾಂಶ

ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಬೇಕುಮ ಇನ್ನು ಮುಂದೆ ರಾಜ್ಯ ಎಲ್ಲಾ ಡಿ.ಸಿ. ಕಚೇರಿಯಿಂದ ಆಗಸ್ಟ್ 15 ರಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. 

ಕಲಬುರಗಿ (ಜು.31): ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಬೇಕುಮ ಇನ್ನು ಮುಂದೆ ರಾಜ್ಯ ಎಲ್ಲಾ ಡಿ.ಸಿ. ಕಚೇರಿಯಿಂದ ಆಗಸ್ಟ್ 15 ರಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಸೋಮವಾರ ಡಿ.ಸಿ.ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಒಂದು ಪ್ರಕರಣದಲ್ಲಿ ಗ್ರಾಮ ಪಂಚಾಯತಿಯ ಸ್ವಚ್ಛತಾ ಸಂಕೀರ್ಣಕ್ಕೆ ಜಮೀನು ನೀಡಲು ಎರಡು ವರ್ಷ ಬೇಕೆ. ಮೊನ್ನೆ ಈ ಕಡತ ಇ-ಆಫೀಸ್ ನಲ್ಲಿ ನನ್ನ ಲಾಗಿನ್ ಗೆ ಬಂದಾಗ 2 ದಿನದಲ್ಲಿ ವಿಲೇವಾರಿ ಮಾಡಿದ್ದೇನೆ ಎಂದರು.

ಇ-ಆಫೀಸ್ ಸಹಜವಾಗಿ ಕಾರ್ಯ ದಕ್ಷತೆ ಹೆಚ್ಚಿಸಲಿದೆ. ಯಾವುದೇ  ಸ್ಥಳದಲ್ಲಿಂದಲು ನೀವು ಕಡತ ವಿಲೇವಾರಿ ಮಾಡಬಹುದಾಗಿದೆ. ಸ್ವತ ನಾನು ಇ-ಆಫೀಸ್ ಮೂಲಕ ಕಡತ ವಿಲೇವಾರಿ ಮಾಡುತ್ತಿದ್ದೇನೆ. ಶಾಲೆ, ಗ್ರಾಮ ಪಂಚಾಯತಿಗೆ ಜಮೀನು ನೀಡಲು ಇಷ್ಟೊಂದು‌ ವಿಳಂಬವೇಕೆ, ಇದರಲ್ಲಿ ಕಾಯುವಂತದೇನಿದೆ ಎಂದು ಡಿ.ಸಿ. ಅವರನ್ನು ಪ್ರಶ್ನಿಸಿದರು. ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ ಕಠಾರಿಯಾ ಮಾತನಾಡಿ, ಇ-ಕಚೇರಿ ಅನುಷ್ಟಾನಕ್ಕೆ ಕೂಡಲೆ ಎಲ್ಲಾ ಜಿಲ್ಲಾಧಿಕಾರಿಗಳು, ಕೆಸ್ವಾನ್ ಸಂಪರ್ಕ ಪಡೆದುಕೊಳ್ಳಬೇಕು ಮತ್ತು ತಹಶೀಲ್ದಾರ ಕಚೇರಿ ಹಂತದಲ್ಲಿಯೂ ಇದನ್ನು ಅನುಷ್ಟಾನಕ್ಕೆ ಕಾಲಮಿತಿ ನಿಗದಿಪಡಿಸಬೇಕು ಎಂದು ಡಿ.ಸಿ. ಗಳಿಗೆ ಸೂಚಿಸಿದರು.

ನಗರಸಭೆಯ ಭ್ರಷ್ಟಾಚಾರ ಕ್ಲೀನ್‌ ಮಾಡುವೆ: ಶಾಸಕ ಪ್ರದೀಪ್‌ ಈಶ್ವರ್‌

ಹೊಸದಾಗಿ ಸಬ್ ರಿಜಿಸ್ಟ್ರಾರ್ ಕಚೇರಿ ಸ್ಥಾಪನೆಗೆ ಮಾಹಿತಿ ಸಂಗ್ರಹ: ರಾಜ್ಯದಲ್ಲಿ ಹೊಸದಾಗಿ ಸಬ್ ರಿಜಿಸ್ಟಾರ್ ಕಚೇರಿ ಸ್ಥಾಪನೆ ಸಂಬಂಧ ಪ್ರಸ್ತುತ ಇರುವ ಎಸ್.ಆರ್.ಓ. ಕಚೇರಿಯಲ್ಲಿ ದೈನಂದಿನ ವ್ಯವಹಾರಗಳ ಮಾಹಿತಿ ಕಲೆ ಹಾಕಲಾಗುತ್ತಿದೆ. 2 ತಿಂಗಳಿನಲ್ಲಿ ಮಾಹಿತಿ ಸಿಗಲಿದ್ದು, ತದನಂತರ ಹೆಚ್ಚಿನ ಕಾರ್ಯದೊತ್ತಡ ಇರುವ ತಾಲೂಕಿನಲ್ಲಿ ಹೊಸದಾಗಿ ಎಸ್.ಆರ್.ಓ. ಕಚೇರಿ ಸ್ಥಾಪಿಸಲು ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.

ನೋಂದಣಿ ಸೋರಿಕೆ ತಡೆಗೆ ಕ್ರಮ: ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಆಸ್ತಿಗಳ ಮಾರಾಟ, ಒಪ್ಪಂದ ಪ್ರಕರಣದಲ್ಲಿ ನಿಗದಿತ ಮೌಲ್ಯಕ್ಕಿಂತ ಕಡಿಮೆ ಮೌಲ್ಯ ದಾಖಲಿಸಿ ಸರ್ಕಾರಕ್ಕೆ ಬರಬೇಕಾದ ಕಂದಾಯ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಪರಿಶೀಲನೆಗೆ ರಾಜ್ಯ ಲೆಕ್ಕಪತ್ರ ಇಲಾಖೆಯ ಅಧಿಕಾರಿಗಳ ತಂಡ ಸಬ್ ರಿಜಿಸ್ಟ್ರಾರ್ ಕಚೇರಿಗೆ ಕಳುಹಿಸಿ ತಪಾಸಣೆ ಮಾಡಲಾಗುತ್ತದೆ. ಈ ಮೂಲಕ ಸರ್ಕಾರಕ್ಕೆ ಆಗುತ್ತಿರುವ ನಷ್ಠ ತಪ್ಪಿಸಲಾಗುವುದು ಎಂದರು.

ಮೈದುಂಬಿದ ಗಗನಚುಕ್ಕಿ, ಭರಚುಕ್ಕಿ ಜಲಪಾತ: ಹರಿದು ಬಂದ ಜನಸಾಗರ

ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏಜೆಂಟ್ ಹಾವಳಿ ತಡೆಗೆ ಸರ್ಕಾರ ಮುಂದಾಗಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಮೂರನೇ ವ್ಯಕ್ತಿ ಹಾವಳಿ ತಪ್ಪಿಸಲೆಂದೆ ಕಾವೇರಿ 2.0 ತಂತ್ರಾಂಶ ಜಾರಿಗೆ ತರಲಾಗಿದೆ. ಸಾರ್ವಜನಿಕರು ನೋಂದಣಿ ಮುನ್ನ ತಮ್ಮ ದಾಖಲೆಗಳನ್ನು ಆನ್‍ಲೈನ್ ಮೂಲಕ ಸಬ್ ರಜಿಸ್ಟಾರ್ ಕಚೇರಿಗೆ ಸಲ್ಲಿಸಿದಾಗ ಸದರಿ ದಾಖಲೆಗಳು ಸರಿಯಾಗಿವೆ ಅಥವಾ ಇಲ್ಲ ಎಂಬುದನ್ನು ಆನ್‍ಲೈನ್ ಮೂಲಕವೇ 3 ದಿನದಲ್ಲಿ ನೊಂದಣಿ ಕಚೇರಿಯಿಂದ ಅರ್ಜಿದಾರರಿಗೆ ಮಾಹಿತಿ ನೀಡಲಾಗುತ್ತದೆ. ನಂತರ ಅರ್ಜಿದಾರ ನಿಗದಿತ ಶುಲ್ಕ ಪಾವತಿಸಿ ನೋಂದಣಿಗೆ ದಿನಾಂಕ ಮತ್ತು ಸಮಯ ಅರ್ಜಿದಾರನೇ ನಿಗದಿಗೊಳಿಸಲು ಅವಕಾಶ ನೀಡಲಾಗಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?