ಕೆಮ್ಮಿನ ಸಿರಪ್ ದುರಂತ.. ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ: ಸಚಿವ ದಿನೇಶ್ ಗುಂಡೂರಾವ್

Published : Oct 06, 2025, 01:17 PM IST
Dinesh Gundu Rao

ಸಾರಾಂಶ

ಕಳಪೆ ಕೆಮ್ಮಿನ ಸಿರಪ್ ರಾಜ್ಯದಲ್ಲಿ ಸರಬರಾಜು ಆಗಿಲ್ಲ.ದೇಶದ ಬೇರೆ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್‌ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಹಾಸನ (ಅ.06): ದೇಶದ ಬೇರೆ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್‌ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕೆಮ್ಮಿನ ಸಿರಪ್ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಮುನ್ನೆಚ್ವರಿಕೆ ಕ್ರಮವಾಗಿ ಎಲ್ಲಾ ಕಂಪನಿಗಳ ಕೆಮ್ಮಿನ ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರಾಜ್ಯದಲ್ಲಿಯ ಕೆಮ್ಮಿನ ಸಿರಪ್‌ಗಳ ಟೆಸ್ಟ್‌ಗೆ ಇಲಾಖೆ ಮುಂಜಾಗ್ರತ ಕ್ರಮ ಕೈಗೊಂಡಿದೆ.

ರಾಜ್ಯದಲ್ಲಿ ಈ ಮೊದಲಿನಿಂದಲು ಔಷಧಿ ನಿಯಂತ್ರಣ ಇಲಾಖೆ ಎಚ್ಚರಿಕೆ ವಹಿಸಿದೆ. ಹೆಚ್ಚಿನ ಔಷಧಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದು, ಇದರಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು. ರಾಜ್ಯ ಆರೋಗ್ಯ ಇಲಾಖೆಯಿಂದ ಕೆಮ್ಮಿನ ಸಿರಪ್‌ ಬಳಕೆ ಬಗ್ಗೆ ಮಾರ್ಗಸೂಚಿ ಬಿಡುಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ ಬೇರೆ ಬೇರೆ ಕಂಪನಿಗಳ ಎಲ್ಲಾ ಕೆಮ್ಮಿನ ಸಿರಪ್‌ಗಳ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ: ಬೇರೆ ರಾಜ್ಯಗಳಲ್ಲಿ ಮಕ್ಕಳ ಸಾವಿಗೆ ಕಾರಣವಾಗಿರುವ ಕೆಮ್ಮಿನ ಸಿರಪ್‌ ಕರ್ನಾಟಕದಲ್ಲಿ ಸರಬರಾಜು ಆಗಿಲ್ಲ. ಹಾಗಾಗಿ ಇಲ್ಲಿ ಯಾವುದೇ ಅನಾಹುತ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ ಆರೋಗ್ಯ ಸಚಿವರು, ಔಷಧಿ ತಯಾರಿಕಾ ಘಟಕಗಳ ಬೇಜವಾಬ್ದಾರಿಯಿಂದಾಗಿ ತಮಿಳುನಾಡು, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ಪುದುಚೆರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದರು.

ಪೋಷಕರು ಎಚ್ಚರಿಕೆ ವಹಿಸಬೇಕು: ರಾಜ್ಯದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಯಾವುದೇ ಸಿರಫ್‌ ಕುಡಿಸುವಾಗಲೂ ಪೋಷಕರು ಬಹಳ ಎಚ್ಚರಿಕೆ ವಹಿಸಬೇಕು. ಕೆಮ್ಮಿನ ಸಿರಪ್‌ ಸೇವನೆ ಕಡಿಮೆ ಮಾಡಬೇಕೆಂದು ಸಲಹೆ ನೀಡಿದರು.

ಕೇಂದ್ರಕ್ಕೆ ಪತ್ರ ಬರೆದಿದ್ದೆ

ಕೆಲ ಔಷಧಿಗಳ ಕಲಬೆರಕೆ, ನಕಲಿ ಔಷಧಿ ಮತ್ತು ತಪಾಸಣೆ ಕುರಿತಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೆ. ಯಾವುದೇ ಡ್ರಗ್ಸ್‌ ಕಲಬೆರಕೆ ಎಂದು ಗೊತ್ತಾದಲ್ಲಿ ತ್ವರಿತವಾಗಿ ದೇಶಾದ್ಯಂತ ಮಾಹಿತಿ ರವಾನೆ-ವಿನಿಮಯಕ್ಕೆ ಪ್ರತ್ಯೇಕ 'ವೆಬ್‌ಸೈಟ್‌' ರಚಿಸುವಂತೆ ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದೆ. ಔಷಧಿಗಳ ಕಲಬೆರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಅಲ್ಲದೇ ರಾಜ್ಯ ರಾಜ್ಯಗಳ ನಡುವೆ ಮಾಹಿತಿ ಸಿಗುವಂತಹ ವ್ಯವಸ್ಥೆ ಜಾರಿಗೆ ತರುವತ್ತ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆರೋಗ್ಯ ಸಚಿವ ಗುಂಡೂರಾವ್‌ ಇದೇ ವೇಳೆ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಮಸ್ಯೆಗಳ ನಿವಾರಣೆ, ಸವಾಲುಗಳಿಗೆ ಧಾರ್ಮಿಕ ಗುರುಗಳಿಂದ ಪರಿಹಾರ: ಬಿ.ವೈ.ವಿಜಯೇಂದ್ರ
ಜಾತಿ ವ್ಯವಸ್ಥೆಗೆ ಪರಿಹಾರ ರೂಪದ ವಿದ್ಯೆ ಅಗತ್ಯ: ಸಿಎಂ ಸಿದ್ದರಾಮಯ್ಯ