ಪಕ್ಷದ ಸೂಚನೆ ಕಡೆಗಣಿಸಿ, ವಿಧಾನಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರದಿಂದ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಿ.ಟಿ.ಶ್ರೀನಿವಾಸ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಬೆಂಗಳೂರು, (ಅ.24) : ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರನ್ನ ಪಕ್ಷದಿಂದ ಉಚ್ಚಾಟಿಸಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆದೇಶಿಸಿದ್ದಾರೆ.
ವಿಧಾನ ಪರಿಷತ್ ಆಗ್ನೇಯ ಪದವೀಧರರ ಕ್ಷೇತ್ರದಿಂದ ಈಗಾಗಲೇ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಾಗಿದೆ. ಹೀಗಿದ್ದೂ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಚುನಾವಣೆಗೆ ಮುಜುಗರ ತಂದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
undefined
4 ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನ ಘೋಷಿಸಿದ ಬಿಜೆಪಿ
ಈ ಕುರಿತಂತೆ ಆದೇಶ ಹೊರಡಿಸಿರುವಂತ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಭಾರತೀಯ ಜನತಾ ಪಾರ್ಟಿಯ ಚುನಾವಣೆಗೆ ಮುಜುಗರ ತಂದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್ ಅವರು ಕಣದಿಂದ ಹಿಂದಕ್ಕೆ ಸರಿಯುವಂತೆ ತಿಳಿಸಿದ ಪಕ್ಷದ ಸೂಚನೆಯನ್ನು ಕಡೆಗಣಿಸಿ, ಮುಜುಗರಕ್ಕೆ ಕಾರಣರಾಗಿದ್ದಾರೆ. ಆದ್ದರಿಂದ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿನೆ ಮಾಡಲಾಗಿ ಎಂಬುದಾಗಿ ತಿಳಿಸಿದ್ದಾರೆ.