ಧಾರವಾಡ ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ವಿಶೇಷ ಕೋರ್ಟ್ ಶಾಕ್ ಕೊಟ್ಟಿದೆ.
ಬೆಂಗಳೂರು (ಜೂ.19): ಧಾರವಾಡ ಬಿಜೆಪಿ ನಾಯಕ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಾಕ್ ಕೊಟ್ಟಿದೆ. ಧಾರವಾಡ ಭೇಟಿಗೆ ಶಾಸಕ ವಿನಯ್ ಕುಲಕರ್ಣಿಗೆ ನಿರಾಕರಿಸಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ಹಿನ್ನೆಲೆ ಜೂ.20 ರ ಚುನಾವಣೆಗೆ ಮತದಾನಕ್ಕೆ ಅನುಮತಿ ಕೋರಿ ವಿನಯ್ ಕುಲಕರ್ಣಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಅವರ ಮನವಿಯನ್ನು ತಿರಸ್ಕರಿಸಿದೆ.
ಕರಾವಳಿ ಜಿಲ್ಲೆಯ ಶಾಲಾ- ಕಾಲೇಜು ವಿದ್ಯಾರ್ಥಿಗಳ ಮೇಲೆ ನಿಗಾ: ಡ್ರಗ್ಸ್ ವಿರೋಧಿ ಸಮಿತಿ
ಈ ಹಿಂದೆಯೇ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿತ್ತು. ಕೊಲೆ ಪ್ರಕರಣದ ಸಾಕ್ಷಿಯ ತಾಯಿ ಪಾಲಿಕೆ ಸದಸ್ಯರು ಶಾಸಕರಾದ ಮೇಲೆ ವಿನಯ್ ಕುಲಕರ್ಣಿ ಮತ್ತಷ್ಟು ಪ್ರಭಾವಿ ಹೀಗಾಗಿ ಅನುಮತಿ ನೀಡದಂತೆ ಸಿಬಿಐ ಎಸ್ ಪಿಪಿ ಗಂಗಾಧರ ಶೆಟ್ಟಿ ವಾದ ಮಂಡಿಸಿದರು. ಹೀಗಾಗಿ ಅನುಮತಿ ನಿರಾಕರಿಸಿ ನ್ಯಾಯಾಧೀಶ ಬಿ. ಜಯಂತಕುಮಾರ್ ಆದೇಶ ಹೊರಡಿಸಿದ್ದಾರೆ.
MANGALURU: ಒಂದೇ ಕಾಲೇಜಿನ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಆತ್ಮಹತ್ಯೆ
ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿಯಾಗಿದ್ದು, ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇರುವ ಕಾರಣ ಧಾರವಾಡ ಪ್ರವೇಶಕ್ಕೆ ನ್ಯಾಯಾಲಯವು ನಿರ್ಬಂಧ ವಿಧಿಸಿದೆ. ಧಾರವಾಡ ಜಿಲ್ಲೆಯಿಂದ ದೂರ ಉಳಿದುಕೊಂಡೇ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇದೀಗ ಶಾಸಕರಾಗಿರುವ ಕಾರಣ ಕ್ಷೇತ್ರಕ್ಕೆ ತೆರಳಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು.