
ನವದೆಹಲಿ(ಆ.29): ಕೊರೋನಾ ಹಿನ್ನೆಲೆಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಶುಕ್ರವಾರ ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾ
ಅಶೋಕ್ ಭೂಷಣ್ ನೇತೃತ್ವದ ಪೀಠ, ‘ಚುನಾವಣೆಗೆ ಇನ್ನೂ ದಿನಾಂಕವೇ ನಿಗದಿಯಾಗಿಲ್ಲ. ಅಲ್ಲದೆ ಚುನಾವಣೆಯನ್ನು ಮುಂದೂಡುವಂತೆ ಅಥವಾ ತಡೆಹಿಡಿಯುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚಿಸಲು ಸಾಧ್ಯವಿಲ್ಲ. ಆಯೋಗವೇ ಇದೆಲ್ಲವನ್ನೂ ನಿರ್ಧರಿಸಲಿದೆ. ಅದೂ ಅಲ್ಲದೆ ಚುನಾವಣೆ ಮುಂದೂಡಿಕೆಗೆ ಕೊರೋನಾ ಎಂಬುದು ಸೂಕ್ತ ಕಾರಣವಾಗದು’ ಎಂದು ಹೇಳಿದೆ.
ಕೋವಿಡ್-19 ವ್ಯಾಪಿಸಿರುವ ಹಿನ್ನಲೆಯಲ್ಲಿ ಬಿಹಾರ ವಿಧಾನಸಭಾ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅವಿನಾಶ್ ಠಾಕೂರ್ ಎಂಬವರು ಪಿಐಎಲ್ ಸಲ್ಲಿಸಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.