BSY ಕಲಬುರಗಿಯಲ್ಲಿ, ಸಂಪುಟ ವಿಸ್ತರಣೆ ಕಸರತ್ತು ವಿಜಯೇಂದ್ರ ಮನೆಯಲ್ಲಿ

Published : Feb 05, 2020, 03:42 PM ISTUpdated : Feb 05, 2020, 03:49 PM IST
BSY ಕಲಬುರಗಿಯಲ್ಲಿ, ಸಂಪುಟ ವಿಸ್ತರಣೆ ಕಸರತ್ತು ವಿಜಯೇಂದ್ರ ಮನೆಯಲ್ಲಿ

ಸಾರಾಂಶ

ಮಂತ್ರಿ ಸ್ಥಾನಕ್ಕಾಗಿ ಇಷ್ಟು ದಿನ ಬಿಎಸ್ ಯಡಿಯೂರಪ್ಪನವರ ಮನೆಗೆ ಅಲೆಯುತ್ತಿದ್ದವರು, ಇದೀಗ ಅವರ ಪುತ್ರ ವಿಜಯೇಂದ್ರ ಮನೆ ಬಾಗಿಲು ಬಡಿಯುತ್ತಿದ್ದಾರೆ. ಸಂಪುಟ ವಿಸ್ತರಣೆ ಕೊನೆಗಳಿಗೆಯಲ್ಲಿ ವಿಜಯೇಂದ್ರ ಹೈಕಮಾಂಡ್ ಆಗ್ಬಿಟ್ರಾ ಎನ್ನುವ ಮಾತುಗಳು ಬಿಜೆಪಿಯಲ್ಲೇ ಕೇಳಿಬರುತ್ತಿವೆ.

ಬೆಂಗಳೂರು (ಫೆ.5): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ನಾಳೆ (ಗುರುವಾರ) ಮುಹೂರ್ತ ನಿಗದಿಯಾಗಿದೆ. ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಕ್ಷಣಗಳಣನೇ ಆರಂಭವಾಗಿದೆ.

"

ಆದರೂ ಸಂಪುಟ ವಿಸ್ತರಣೆ ಕಸರತ್ತು ಪೂರ್ಣಗೊಂಡಿಲ್ಲ. ಪಕ್ಷಾಂತರ ಮಾಡಿದವರೆಲ್ಲರೂ ಸಚಿವ ಸ್ಥಾನಕ್ಕಾಗಿ ಭಾರೀ ಲಾಭಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಮೂಲ ಬಿಜೆಪಿಗರೂ ಕೂಡ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದ್ದಾರೆ.

ಸಂಪುಟ ವಿಸ್ತರಣೆಯ ಬ್ರೇಕಿಂಗ್: ಭಾವೀ ಸಚಿವರಿಗೆ ರೆಡಿಯಾಗಿ ನಿಂತಿವೆ ಕಾರುಗಳು

 ಮಂತ್ರಿಗಿರಿಗಾಗಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಮನೆಗೆ ನಿತ್ಯ ಹಲವು ಬಿಜೆಪಿ ಶಾಸಕರು ಭೇಟಿ ನೀಡುತ್ತಿದ್ದಾರೆ. ಈ ಮಧ್ಯೆ ಬಿಎಸ್​ವೈ ಮಗ ಬಿ.ವೈ. ವಿಜಯೇಂದ್ರ ಮನೆಗೆ ಸಚಿವ ಸ್ಥಾನ ಆಕಾಂಕ್ಷಿಗಳು ಭೇಟಿ ನೀಡಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ.

ವಿಜಯೇಂದ್ರ ಮನೆಯಲ್ಲಿ ರಾಜಕೀಯ ಚರ್ಚೆ ಗರಿಗೆದರಿದೆ. ಸಿಎಂ ಮನೆಯಿಂದ ಒಂದೇ ಕಾರಿನಲ್ಲಿ ಸಿಪಿ ಯೋಗೆಶ್ವರ್ ಹಾಗೂ ವಿಜಯೆಂದ್ರ ಆಗಮಿಸಿದರು. ಇದರ ಜೊತೆ ಬಿಜೆಪಿ ಶಾಸಕ ಶಂಕರಗೌಡ ಪಾಟೀಲ್, ರಾಮನಗರ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಶ್, ಶಾಸಕ ಶಿವರಾಜ್ ಪಾಟೀಲ್, ಎಂಟಿಬಿ ನಾಗರಾಜ್ ಸೇರಿದಂತೆ ಹಲವರು ವಿಜಯೇಂದ್ರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಬಪ್ಪರೇ..! ಅಪ್ಪನ ಸರ್ಕಾರ ಉಳಿವಿಗೆ ಹೆಗಲು ಕೊಟ್ಟ ಮಕ್ಕಳು, ತಂದೆಗೆ ಗೆಲುವಿನ ಉಡುಗೊರೆ

ಅಷ್ಟೇ ಅಲ್ಲದೇ ರೇಣುಕಾಚಾರ್ಯ, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ಬಿಜೆಪಿ ನಾಯಕರು ವಿಜಯೇಂದ್ರ ಮನೆ ಭೇಟಿ ನೀಡಿ ಸಚಿವ ಸ್ಥಾನದ ಬಗ್ಗೆ ಚರ್ಚೆ ನಡೆಸಿದರು.

ಈ ಮೊದಲು ಸಂಪುಟ ವಿಸ್ತರಣೆ ಪಟ್ಟಿಗೆ  ಗ್ರೀನ್ ಸಿಗ್ನಲ್ ಪಡೆಯಲು ಸ್ವತಃ ಯಡಿಯೂರಪ್ಪ ಅವರೇ ಹೈಕಮಾಂಡ್‌ ಭೇಟಿಗೆ ದೆಹಲಿಗೆ ತೆರಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಬಿಎಸ್​ವೈ ಮಗ ವಿಜಯೇಂದ್ರ ಅವರಿಗೂ ರಾಜ್ಯ ಸರ್ಕಾರಕ್ಕೂ ಯಾವುದೇ ನೇರ ಸಂಬಂಧವಿಲ್ಲ. ಆದಾಗ್ಯೂ, ರಾಜ್ಯ ಸರ್ಕಾರ ನಡೆಸಿದ ಸಾಕಷ್ಟು ಸಭೆಗಳಲ್ಲಿ ಅವರು ಪಾಲ್ಗೊಂಡ ಉದಹಾರಣೆಗಳು ಇವೆ.  

ರಾಜ್ಯದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ  ಮಾಡುತ್ತಿದ್ದಾರೆ ಎಂದು ಕೆಲ ಬಿಜೆಪಿ ನಾಯಕರು ಹೈಕಮಾಂಡ್​ಗೆ ಈ ಮೊದಲು ದೂರು ನೀಡಿದ್ದರು. ಸಂಪುಟ ವಿಸ್ತರಣೆಯಲ್ಲೂ ವಿಜಯೇಂದ್ರ ಪ್ರಾತ್ರವೇನು ಎನ್ನುವುದು ಮಾತ್ರ ಪ್ರಶ್ನೆಯಾಗಿ ಉಳಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 'ನಾಯಕತ್ವ ಬದಲಾವಣೆ ಇಲ್ಲ'- ಯತೀಂದ್ರ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಕೆಂಡಾಮಂಡಲ!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ