ಸಿ.ಪಿ.ಯೋಗೇಶ್ವರ್ ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್‌ಮೆನ್: ದೇವೇಗೌಡ ವಾಗ್ದಾಳಿ

By Kannadaprabha News  |  First Published Nov 6, 2024, 12:42 PM IST

ಆ ದೇವೇಗೌಡರ ಕೈ ನಡುಗುತ್ತವೆ. ಅವರು ಪ್ರಚಾರಕ್ಕೆ ಬರುತ್ತಾರಾ ಎಂದು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಕೇಳುತ್ತಾರೆ. ನಾನು ಪ್ರಚಾರಕ್ಕೆ ಬರುತ್ತೇನೆ. ಹನ್ನೊಂದನೇ ತಾರೀಖಿನವರೆಗೂ ಪ್ರಚಾರಕ್ಕೆ ಬರುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
 


ಚನ್ನಪಟ್ಟಣ (ನ.06): ಆ ದೇವೇಗೌಡರ ಕೈ ನಡುಗುತ್ತವೆ. ಅವರು ಪ್ರಚಾರಕ್ಕೆ ಬರುತ್ತಾರಾ ಎಂದು ಕನ್ವರ್ಟಡ್ ಕಾಂಗ್ರೆಸ್ ಜೆಂಟಲ್ ಮೆನ್ ಕೇಳುತ್ತಾರೆ. ನಾನು ಪ್ರಚಾರಕ್ಕೆ ಬರುತ್ತೇನೆ. ಹನ್ನೊಂದನೇ ತಾರೀಖಿನವರೆಗೂ ಪ್ರಚಾರಕ್ಕೆ ಬರುತ್ತೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ವಿರುದ್ಧ ಮಾಜಿ ಪ್ರಧಾನಿ ದೇವೇಗೌಡ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಚನ್ನಪಟ್ಟಣ ಕ್ಷೇತ್ರದ ಬ್ಯಾಡರಹಳ್ಳಿಗೆ ಆಗಮಿಸಿದ ದೇವೇಗೌಡ, ಇದೇ ಮೊದಲ ಬಾರಿಗೆ ಎನ್ ಡಿಎ ಅಭ್ಯರ್ಥಿ ನಿಖಿಲ್ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮೊಮ್ಮಗನ ಪರ ಮತಯಾಚಿಸಿದರು. ಮೋದಿ ಹಾಗೂ ನನ್ನ ಸಂಬಂಧ ಚೆನ್ನಾಗಿದೆ. ಮುಂದೆಯೂ ಚೆನ್ನಾಗಿರುತ್ತದೆ. ರಾಜಕಾರಣಕ್ಕೆ ಮೀರಿದ ಸಂಬಂಧ ನಮ್ಮದು. ಆದರೆ, ಕಾಂಗ್ರೆಸ್‌ನವರು ಹೇಯ ಕೆಲಸ ಮಾಡುತ್ತಿದ್ದಾರೆ. 

ಅವರಿಗೆ ನನ್ನ ಕುಟುಂಬ ಬಿಟ್ಟರೆ ಮಾತನಾಡಲು ಬೇರೆ ವಿಷಯ ಇಲ್ಲ ಎಂದು ಆರೋಪಿಸಿದರು. ದೇವೇಗೌಡರೇ ಏಕೆ ನೀವು ನಿಮ್ಮ ಮೊಮ್ಮಗನನ್ನು ನಿಲ್ಲಿಸಿದ್ದೀರಿ ಎಂದು ಯಾರಾದರೂ ಕೇಳಬಹುದು. ಯಾವ ಕನ್ನರ್ಟಡ್ ಕಾಂಗ್ರೆಸ್ ನಾಯಕ ಇದ್ದಾರೋ, ಅವರನ್ನು ಬಿಜೆಪಿಯಿಂದಲಾದರೂ ನಿಲ್ಲಿ ಜೆಡಿಎಸ್ ನಿಂದಲಾದರೂ ನಿಲ್ಲಿ ಎಂದು ಹೇಳಿ ದೇವು. ನಮಗೆ, ಬಿಜೆಪಿಯವರಿಗೆ ಮೋಸ ಮಾಡಿ ಹೋದರು. ಈಗ ಕಾಂಗ್ರೆಸ್ ಅಭ್ಯರ್ಥಿ ಆಗಿದ್ದಾರೆ. ಹೀಗಾಗಿ ಈ ಕುತಂತ್ರಕ್ಕೆ ಸಡ್ಡು ಹೊಡೆಯಲು ಸ್ಥಳೀಯ ಮುಖಂಡರು ಎಲ್ಲರೂ ಸೇರಿ ನಿಖಿಲ್ ನಿಲ್ಲಿಸಬೇಕು ಎಂದು ಒತ್ತಾಯ ಮಾಡಿದರು ಎಂದು ಹೇಳಿದರು.

Tap to resize

Latest Videos

undefined

ನಾನು ತಪ್ಪು ಮಾಡಿದೆ ಅಂತ ಹೇಳುವ ಯೋಗ್ಯತೆ ಯಾರಿಗೂ ಇಲ್ಲ: ಮಾಜಿ ಪ್ರಧಾನಿ ದೇವೇಗೌಡ

ಡಿಕೆ ಬ್ರದರ್ಸ್ ಅಪೂರ್ವ ಸಹೋದರು: ಡಿಕೆ ಸಹೋದರರನ್ನು ಅಪೂರ್ವ ಸಹೋದರು ಎಂದು ಟಾಂಗ್ ಕೊಟ್ಟ ದೇವೇಗೌಡರು, ಆರು ತಿಂಗಳಿಂದ ಅಣಕದ ಮಾತು. ಯಾರು ಅಭ್ಯರ್ಥಿ ಅಂದರೆ ನಾನೇ.. ನಾನೇ...ನಾನೇ.. ನಾನೇ.. ಆ ನಾನೇ ಎನ್ನುತ್ತಿದ್ದವರು ಎಲ್ಲಿ ಹೋದರು ಈಗ? ಚನ್ನಪಟ್ಟಣಕ್ಕೆ ನಿಲ್ಲುವ ನಾನೇ.. ಇವಾಗ ಎಲ್ಲಿ ಹೋದಿರಿ? ಈಗ ಅಪೂರ್ವ ಸಹೋದರರು ತೀರ್ಮಾನ ಮಾಡಿದ್ದಾರೆ. ನಾನು ಅವರ ಹೆಸರೇಳಲ್ಲ. ಅವರ ಹೆಸರು ಹೇಳಿದರೆ ದೇವೇಗೌಡರು ವೆಂಟಿಲೇಟರ್‌ನಲ್ಲಿ ಭಾಷಣ ಮಾಡೋಕೆ ಬರ್ತಾರೆ ಎಂದು ಬಹಳ ಲಘುವಾಗಿ ಮಾತಾಡಿದರು. ಆದರೆ ನಾನು ನಿಮ್ಮ ಮುಂದೆ ಕೂತಿದ್ದೇನೆ. ಯಾವ ವೆಂಟಿಲೇಟರ್‌ಇಲ್ಲ, ನನ್ನ ಕೈ ಕೂಡನಡುಗುತ್ತಿಲ್ಲ ಎಂದು ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿಗೆ ನಾನು ಆ್ಯಂಬುಲೆನ್ಸ್‌ನಲ್ಲಿ ಬಂದಿಲ್ಲ, ವೀಲ್ ಚೇರ್‌ಮೇಲೂ ಬಂದಿಲ್ಲ. ನಿಮ್ಮೆಲ್ಲರ ಆಶೀರ್ವಾದ ದಿಂದ ಆರೋಗ್ಯವಾಗಿ ಚೆನ್ನಾಗಿದ್ದೇನೆ. ಅದನ್ನು ತೋರಿಸಲು ಇಲ್ಲಿಗೆ ಬಂದಿದ್ದೇನೆ. ನೀವೇ ನನ್ನನ್ನು ನೋಡುತ್ತಿ ದ್ದೀರಿ, ಹೇಗೆ ಇದ್ದೇನೆ ಎಂದು ಗಮನಿಸುತ್ತಿದ್ದೀರಿ ಅಲ್ಲವೇ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಎತ್ತಿನಹೊಳೆ ನೀರು ಬರುವುದಿಲ್ಲ; ಕಾಂಗ್ರೆಸ್ ನಾಯಕರು ಜನರಿಗೆ ಬರೀ ಸುಳ್ಳು ಹೇಳುತ್ತಿದ್ದಾರೆ. ನೀರಾವರಿ ಯೋಜನೆಗಳು ನೆನೆಗುದಿಗೆ ಬಿದಿವೆ. ಎತ್ತಿನಹೊಳೆ ನೀರು ಕೋಲಾರಕ್ಕೆ ಬಂದರೆ ನಾನು ಇವರಿಗೆ ದೀರ್ಘದಂಡವಾಗಿ ನಮಸ್ಕಾರ ಮಾಡುತ್ತೇನೆ ಎಂದು ಲೇವಡಿ ಮಾಡಿದರು. ಈ ಮಹಾನುಭಾವರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ತರುತ್ತಾರಂತೆ? ಹೇಗೆ ತರುತ್ತಾರೆ? ಬರೀ ಸುಳ್ಳು ಹೇಳಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇವಲ 14 ಸೈಟ್‌ಗಳಿಗಾಗಿ ನಾನು ತಪ್ಪು ಮಾಡ್ತೀನಾ?: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿಯ ಗರ್ವದ ಸೊಕ್ಕನ್ನು ಮುರಿಯಬೇಕು: ನಾನು ಪ್ರಚಾರಕ್ಕೆ ಬರೋದನ್ನು ಟೀಕೆ ಮಾಡು ತ್ತಾರೆ. ನಾನು 60 ವರ್ಷಗಳ ಕಾಲ ಸಾರ್ವಜನಿಕ ಕೆಲಸಮಾಡಿದ್ದೇನೆ. ಅದು ನಿಮ್ಮ ಬೆಂಬಲದಿಂದ ಸಾಧ್ಯವಾಗಿದೆ. ಬಡವರ ಮಕ್ಕಳಿಗೆ ಒಂದು ಕಾರ್ಖಾನೆ ತರಬೇಕು ಅಂದರೆ ಮುಖ್ಯಮಂತ್ರಿ ಜಾಗ ಕೊಡುವುದಿಲ್ಲ. ಈ ಸರ್ಕಾರದ ಅಹಂಕಾರ ನಿಲ್ಲಿಸಬೇಕು. ಸಿಎಂಗೆ ಇರುವ ಗರ್ವದ ಸೊಕ್ಕನ್ನು ಮುರಿಯಬೇಕು ಎಂದು ಸಿದ್ದರಾಮಯ್ಯ ವಿರುದ್ಧವೂ ಗುಡುಗಿದರು.

click me!