* ಜೆಡಿಎಸ್‌ನ ಮತ್ತೊಂದು ವಿಕೆಟ್ ಪತನ
* ಅವಧಿಗೂ ಮುನ್ನವೇ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ
* ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್‌ಬೈ
ಬೆಂಗಳೂರು, (ನ.29): ಜೆಡಿಎಸ್‌ನ (JDS) ಮತ್ತೊಂದು ವಿಕೆಟ್ ಪತನವಾಗಿದೆ. ಅವಧಿ ಮುಗಿಯುವ ಮೊದಲೇ ಜೆಡಿಎಸ್ ನಾಯಕ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಲ್ಲದೇ ವಿಧಾನ ಪರಿಷತ್ ಚುನಾವಣೆ (MLC Election) ಮಧ್ಯೆಯೇ ಸಿ.ಆರ್. ಮನೋಹರ್ (CR Manohar) ಜೆಡಿಎಸ್ (JDS) ಪ್ರಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ(resign) ನೀಡಿದ್ದು, ದಳಪತಿಗಳಿಗೆ ಆಘಾತವಾಗಿದೆ.
undefined
Assembly Election Karnataka: 2023ಕ್ಕೆ ಜೆಡಿಎಸ್ ಅಧಿಕಾರಕ್ಕೆ ತರಲು ತಯಾರಿ
ವಿಧಾನ ಪರಿಷತ್ ಸದಸ್ಯತ್ವಕ್ಕೆ ಸಿ.ಆರ್. ಮನೋಹರ್ ರಾಜೀನಾಮೆ ನೀಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಇಂದು (ನ.29 ರಾಜೀನಾಮೆ ಪತ್ರ ನೀಡಿದ್ದಾರೆ.
ಸಿ.ಆರ್. ಮನೋಹರ್ ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಾರೆಂದು ಸುದ್ದಿಯಾಗಿತ್ತು. ಆದರೆ, ಇದೀಗ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಅವರು ಕಾಂಗ್ರೆಸ್ ಸೇರಲು ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಸೇರಲು ಚಿಂತನೆ ನಡೆಸಿರುವ ಸಿ.ಆರ್. ಮನೋಹರ್, ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ರಿಜಿಸ್ಟರ್ ಪೋಸ್ಟ್ ಮೂಲಕ ಮನೋಹರ್ ರಾಜೀನಾಮೆ ಸಲ್ಲಿಸಿದ್ದಾರೆ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾಗಿರುವ ಸಿ.ಆರ್ ಮನೋಹರ್ ಅವರ ಸದಸ್ಯತ್ವದ ಅವಧಿ 2022ರ ಜ.5ಕ್ಕೆ ಕೊನೆಗೊಳ್ಳಲಿದೆ. ಅವಧಿ ಪೂರ್ಣಕ್ಕೆ ಮೂರು ತಿಂಗಳಷ್ಟೇ ಬಾಕಿ ಇದೆ. ಈ ನಡುವೆ ಜೆಡಿಎಸ್‌ನಿಂದ ಹೆಜ್ಜೆ ಹೊರಗೆ ಇಟ್ಟಿದ್ದಾರೆ.
ಇದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕೀಯ ವಲಯದಲ್ಲಿ ಆಂತರಿಕ ಚರ್ಚೆಗೆ ಕಾರಣವಾಗಿದೆ. ಎರಡೂ ಜಿಲ್ಲೆಗಳಲ್ಲಿ ಗಣನೀಯವಾಗಿರುವ ಬಲಿಜ ಸಮುದಾಯದ ಮೇಲೆ ಮನೋಹರ್ ಅವರಿಗೆ ಉತ್ತಮವಾದ ಹಿಡಿತವಿದೆ. ಆ ಸಮುದಾಯದ ಪ್ರಮುಖ ನಾಯಕರಾಗಿಯೂ ಅವರು ಗುರುತಿಸಿಕೊಂಡಿದ್ದಾರೆ.
2009ರಿಂದಲೂ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರಾಜಕಾರಣದಲ್ಲಿ ಮನೋಹರ್ ಅವರ ಹೆಜ್ಜೆ ಗುರುತು ಪ್ರಬಲವಾಗಿದೆ. 2009ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿ.ಆರ್ ಮನೋಹರ್ 1.86 ಲಕ್ಷ ಮತಗಳನ್ನು ಪಡೆದಿದ್ದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 38 ಸಾವಿರ ಮತಗಳನ್ನು ಪಡೆದಿದ್ದರು.
ಕಾಂಗ್ರೆಸ್ ಸೇರ್ಪಡೆಗೆ ವೇದಿಕೆ ಸಜ್ಜು?
ಹೌದು...ಸಿ.ಆರ್. ಮನೋಹರ್ ಈ ಮೊದಲ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದರು. ಆದ್ರೆ, ಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಈಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಆದ್ರೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಕೊಟ್ಟಿಲ್ಲ.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆ ತಮ್ಮದೇ ಹಿಡಿತ ಇಟ್ಟುಕೊಂಡಿರುವ ಮನೋಹರ್ ಅವರನ್ನ ಸೆಳೆಯಲು ಕಾಂಗ್ರೆಸ್ ನಾಯಕರ ಕಸರತ್ತು ನಡೆಸಿದ್ದು, ಅದು ಫಲ ನೀಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲು ವೇದಿಕೆ ಸಿದ್ಧ ಮಾಡಲಾಗಿದೆ ಎಂದು ತಿಳಿದುಬಂದಿದೆ.