ಶ್ರೀರಂಗಪಟ್ಟಣ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕುಮಾರಸ್ವಾಮಿ ಮತ್ತು ಚಲುವರಾಯಸ್ವಾಮಿ ಪ್ರತ್ಯೇಕವಾಗಿ ಗುದ್ದಲಿಪೂಜೆ ನೆರವೇರಿಸಿದ್ದಾರೆ. ಶ್ರೀರಂಗಪಟ್ಟಣದ ಕಿರಂಗೂರಿನಿಂದ ಪಾಂಡವಪುರ ತಾಲೂಕಿನ ಬನಘಟ್ಟದವರೆಗೆ 12 ಕಿಮೀ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು 42 ಕೋಟಿ ರು. ವೆಚ್ಚದಲ್ಲಿ ನಾಲ್ಕು ಪಥದ ಹೆದ್ದಾರಿ ಕಾಮಗಾರಿಗೆ ಪರಿವರ್ತಿಸಲಾಗಿದೆ.
ಮಂಡ್ಯ(ಜ.09): ಮಾಜಿ ದೋಸ್ತಿಗಳ ನಡುವೆ ಇದುವರೆಗೆ ಟಾಕ್ ಫೈಟ್ ಮಾತ್ರ ಸೀಮಿತವಾಗಿತ್ತು. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕ್ರೆಡಿಟ್ ಪಾಲಿಟಿಕ್ಸ್ ನಡೆಸಲು ಮುಂದಾಗಿದ್ದಾರೆ. ಹೆದ್ದಾರಿ ಕಾಮಗಾರಿಯ ಕ್ರೆಡಿಟ್ ಪಡೆಯಲು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಸಚಿವ ಎನ್.ಚಲುವರಾಯಸ್ವಾಮಿ ಕಾದಾಟಕ್ಕಿಳಿದಿದ್ದಾರೆ. ಅದರಂತೆ ಒಂದೇ ಕಾಮಗಾರಿ ಎರಡೆರಡು ಬಾರಿ ಗುದ್ದಲಿ ಪೂಜೆ ನೆರವೇರಿಸಿರುವುದು ಪ್ರತ್ಯಕ್ಷ ಸಾಕ್ಷಿಯಾಗಿದೆ.
ಶ್ರೀರಂಗಪಟ್ಟಣ-ಜೇವರ್ಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕುಮಾರಸ್ವಾಮಿ ಮತ್ತು ಚಲುವರಾಯಸ್ವಾಮಿ ಪ್ರತ್ಯೇಕವಾಗಿ ಗುದ್ದಲಿಪೂಜೆ ನೆರವೇರಿಸಿದ್ದಾರೆ. ಶ್ರೀರಂಗಪಟ್ಟಣದ ಕಿರಂಗೂರಿನಿಂದ ಪಾಂಡವಪುರ ತಾಲೂಕಿನ ಬನಘಟ್ಟದವರೆಗೆ 12 ಕಿಮೀ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು 42 ಕೋಟಿ ರು. ವೆಚ್ಚದಲ್ಲಿ ನಾಲ್ಕು ಪಥದ ಹೆದ್ದಾರಿ ಕಾಮಗಾರಿಗೆ ಪರಿವರ್ತಿಸಲಾಗಿದೆ. ಈ ಹೆದ್ದಾರಿ ಕಾಮಗಾರಿಗೆ 2024ರ ಅಕ್ಟೋಬರ್ 20 ರಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪೂಜೆ ಸಲ್ಲಿಸಿದ್ದರು. ಶ್ರೀರಂಗಪಟ್ಟಣದ ಕಿರಂಗೂರು ಹಾಗೂ ಪಾಂಡವಪುರ ತಾಲೂಕು ಕಚೇರಿ ಎದುರು ಪೂಜೆ ಸಲ್ಲಿಸಿದ್ದರು. ಈಗ ಅದೇ ಕಾಮಗಾರಿಗೆ ಜ.7ರಂದು ಸಚಿವ ಚಲುವರಾಯಸ್ವಾಮಿ ಅವರು ಬನಘಟ್ಟ-ಕಿರಂಗೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾಣೆ ಮುಂಭಾಗ ಮತ್ತೊಮ್ಮೆ ಪ್ರತ್ಯೇಕವಾಗಿ ಪೂಜೆ ಸಲ್ಲಿಸುವ ಮೂಲಕ ಕ್ರೆಡಿಟ್ ಪಡೆಯಲು ಕಸರತ್ತು ನಡೆಸಿದರು. ತನ್ನಿಂದಲೇ ಹೆದ್ದಾರಿ ಅಭಿವೃದ್ಧಿಯಾಗುತ್ತಿದೆ ಎಂದು ಬಿಂಬಿಸಿಕೊಳ್ಳುವ ಪ್ರಯತ್ನ ನಡೆಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಎಚ್‌ಡಿಕೆ ಸರ್ಟಿಫಿಕೇಟ್ ಅಗತ್ಯವಿಲ್ಲ: ಸಚಿವ ಚಲುವರಾಯಸ್ವಾಮಿ
ಅ.20ರಂದು ನಡೆದ ಗುದ್ದಲಿಪೂಜೆ ಕಾರ್ಯಕ್ರಮಕ್ಕೆ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಆಹ್ವಾನವಿತ್ತಾದರೂ ಬೇರೆ ತುರ್ತು ಕೆಲಸದ ಮೇಲೆ ತೆರಳಿದ್ದರಿಂದ ಅಂದಿನ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಈಗ ಪ್ರತ್ಯೇಕ ಪೂಜೆ ನೆರವೇರಿಸಿ ಅಭಿವೃದ್ಧಿಯತಮ್ಮ ಅಧಿಕೃತ ಮುದ್ರೆಯನ್ನು ಒತ್ತಿದ್ದಾರೆ.
ಮಂಡ್ಯ ಹೊರ ವರ್ತುಲ ರಸ್ತೆಗೆ ಎಚ್‌ಡಿಕೆ ಮನವಿ
ಮಂಡ್ಯ: ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕ ರಣ, ಅದರ ವೈಟ್ ಟ್ಯಾಪಿಂಗ್ ಹಾಗೂ ಎನ್ ಎಚ್-275ರಲ್ಲಿರುವ ಮಂಡ್ಯ ನಗರದ ಎಲ್ಲಾ ಜಂಕ್ಷನ್‌ಗಳು, ಪಾ ದಚಾರಿ ಮಾರ್ಗಗಳನ್ನೂ ಅಭಿವೃದ್ಧಿ ಮಾಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದರು.
ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾ ದ ಕುಮಾರಸ್ವಾಮಿ ಅವರು ಹಲವಾರು ಮನವಿ ಗಳನ್ನು ಸಲ್ಲಿಸಿ ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದರು. ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.
ಚಲುವರಾಯಸ್ವಾಮಿಗೆ ಅಧಿಕಾರ, ಹಣದ ಮದ ಬಡವರ ಕಷ್ಟ, ವಾಸ್ತವಾಂಶ ಅರ್ಥವಾಗಲ್ಲ: ಎಚ್‌ಡಿಕೆ
ಜೇವರ್ಗಿ- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ ಮಾಡುವ ಬಗ್ಗೆಯೂ ಸಚಿವರು ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು. ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು ಸಲ್ಲಿಸಿದರು. ಈ ಪೈಕಿ ಕೆಲ ಯೋಜನೆಗಳ ಬಗ್ಗೆ ತಕ್ಷಣವೇ ಖುದ್ದಾಗಿ ಗಮನ ಹರಿಸುವುದಾಗಿ ಗಡ್ಕರಿ ಅವರು ಭರವಸೆ ನೀಡಿದರು.
ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮ ರಾಜನಗರ, ಮೈಸೂರು ಮುಂತಾದ ಜಿಲ್ಲೆಗಳ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಸಾರಿಗೆ ಸಚಿವರ ಜತೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು. ಕುಮಾರಸ್ವಾಮಿ ಅವರ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಾರಿಗೆ ಸಚಿವರು ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಗಡ್ಕರಿ ಅವರು ಭರವಸೆ ನೀಡಿದರು ಎಂಬುದಾಗಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.