ಕೆಜಿಎಫ್‌ ಗಣಿಗಳನ್ನು ಮುಚ್ಚಿದ ಕೀರ್ತಿ ಬಿಜೆಪಿಗೆ: ಡಿ.ಕೆ.ಶಿವಕುಮಾರ ವಾಗ್ದಾಳಿ

By Kannadaprabha NewsFirst Published Feb 4, 2023, 8:03 AM IST
Highlights

ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಕಜಿಎಫ್‌ ನಗರದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಬೃಹತ್‌ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕೆಜಿಎಫ್‌ (ಫೆ.4) :  ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಕಜಿಎಫ್‌ ನಗರದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಬೃಹತ್‌ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ನಗರಸಭೆ ಮೈದಾನದಲ್ಲಿ ಪ್ರಜಾಧ್ವನಿ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಜಿಎಫ್‌ ನಗರ ಇತಿಹಾಸವುಳ್ಳ ನಗರವಾಗಿದ್ದು, ಸ್ವತಂತ್ರತ್ರ್ಯ ಪೂರ್ವದ ಬಿಜಿಎಂಎಲ್‌ ಚಿನ್ನದ ಗಣಿಗಳನ್ನು ಮುಚ್ಚಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ, ಅದರಂತೆ ಬೆಮೆಲ್‌ ಕಾರ್ಖಾನೆ ಖಾಸಗಿಕರಣ ಮಾಡಲು ಹೊರಟಿದ್ದಾರೆ, ಈ ನಿಟ್ಟಿನಲ್ಲಿ ಬೆಮೆಲ್‌ ಕಾರ್ಖಾನೆ ಖಾಸಗೀಕರಣ ಮಾಡದಂತೆ ಹೋರಾಟ ಮಾಡಲಾಗುವುದು. ಇದರ ಜೊತೆಗೆ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಬೃಹತ್‌ ಕಾರ್ಖಾನೆ ಸ್ಥಾಪನೆ ಮಾಡಿ ಕಾಂಗ್ರೆಸ್‌ ಪಕ್ಷ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಮಾಡಲಿದೆ ಎಂದರು.

ಪ್ರಜಾಧ್ವನಿಯಾತ್ರೆಯಲ್ಲಿ ಮುನಿಯಪ್ಪ ಮುನಿಸು; ಡಿಕೆಶಿ ವಿರುದ್ಧ ಬೆಂಬಲಿಗರ ಆಕ್ರೋಶ

ರೂಪ ಶಶಿಧರ್‌ರನ್ನು ಅತ್ಯಾಧಿಕ ಮತಗಳಿಂದ ಗೆಲ್ಲಿಸಿ:

40 ವರ್ಷ ನಂತರ ಕೆಜಿಎಫ್‌ ನಗರದಲ್ಲಿ ರೂಪಾಶಶಿಧರ್‌ ಗೆಲ್ಲಿಸುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಶಕ್ತಿ ನೀಡಿದ್ದೀರಿ. ಸದನದಲ್ಲಿ, ಸದನದ ಹೊರಗೆ ಎಲ್ಲಾ ರೀತಿಯ ಹೋರಾಟ ಮಾಡಿ ಕೆಜಿಎಫ್‌ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನು ಮಾಡಲು 500 ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸಿದ್ದಾರೆ. ರೂಪಶಶಿಧರ್‌ಗೆ ಹೆಚ್ಚಿನ ಶಕ್ತಿ ತುಂಬಲು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಗೋವಿಂದಗೌಡರಿಗೆ ಕೃತಜ್ಞತೆ

ಕೆಜಿಎಫ್‌ ತಾಲೂಕಿನಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ಬಲವನ್ನು ತಂಬಿರುವ ಗೋವಿಂದಗೌಡರಿಗೆ ಡಿ.ಕೆ.ಶಿ ಕೃತಜ್ಞತೆಗಳನ್ನು ಸಲ್ಲಿಸಿದರು, ತಾಲೂಕಿನಲ್ಲಿ 40 ಸಾವಿರ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿರುವ ಅವರು ಮಹಿಳೆಯರಿಗೆ ತನ್ನದೆ ಆದ ಕೊಡುಗೆ ನೀಡಿದ್ದಾರೆ. ಅಲ್ಲದೆ ಕಾರ‍್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಿರುವುದಕ್ಕೂ ಧನ್ಯವಾದಗಳನ್ನು ತಿಳಿಸಿ ಸ್ಮರಿಸಿದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಡಾ.ಪರಮೇಶ್ವರ್‌

ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಡಾ. ಪರಮೇಶ್ವರ್‌, ನಾವು ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದರು.

Prajadhwani yatre: ಬಿಜೆಪಿ ಸರ್ಕಾರ ರಾಷ್ಟ್ರದಲ್ಲಿ ಸಂಪೂರ್ಣ ವಿಫಲ: ಡಿ.ಕೆ.ಶಿವಕುಮಾರ

ಕೇಂದ್ರ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಮಾಜಿ ಸಂಸದ ಉಗ್ರಪ್ಪ, ಮಾಜಿ ಸಚಿವ ಎಚ್‌.ಸಿ ಮಹೇವಪ್ಪ, ಎಂಎಲ್‌ಸಿ ನಸೀರ್‌ ಅಹ್ಮದ್‌, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಕೃಷ್ಣಪ್ಪ, ಸೀತಾರಾಮ್‌, ಮಾಜಿ ಶಾಸಕ ಎನ್‌.ಸಂಪಂಗಿ, ನಗರಸಭೆ ಅಧ್ಯಕ್ಷ ವಳ್ಳಲ್‌ ಮುನಿಸ್ವಾಮಿ, ಯುವ ಕಾಂಗ್ರೆಸ್‌ನ ನಲಪಾಡ್‌, ಸಲೀಂ ಅಹಮದ್‌, ಶ್ರೀನಿವಾಸ್‌ ಇದ್ದರು.

ಶಾಸಕಿ ರೂಪಕಲಾಶಶಿಧರ್‌ ಪ್ರಸ್ತಾವಿಕ ನುಡಿಗಳನ್ನು ಆಡಿ ಕ್ಷೇತ್ರದ ಸಮಸ್ಯೆಗಳ ಕುರಿತು ಮುಖಂಡರ ಗಮನಕ್ಕೆ ತಂದರು.

click me!