ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾದ ಸಿ.ಟಿ.ರವಿ ಆಪ್ತ ಹೆಚ್.ಡಿ.ತಮ್ಮಯ್ಯ

Published : Feb 18, 2023, 01:30 AM IST
ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾದ ಸಿ.ಟಿ.ರವಿ ಆಪ್ತ ಹೆಚ್.ಡಿ.ತಮ್ಮಯ್ಯ

ಸಾರಾಂಶ

ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಚಿಕ್ಕಮಗಳೂರು‌ ಬಿಜೆಪಿಯಲ್ಲಿ ಗೊಂದಲ‌ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದೆ. ನಿನ್ನೆಯಷ್ಟೇ ಸಿ.ಟಿ.ರವಿ ಅಪ್ತ ತಮ್ಮಯ್ಯ ಬಿಜೆಪಿಗೆ ಗುಡ್ ಬೈ ಹೇಳಿದ್ದರು. 

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು (ಫೆ.18): ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಪರ್ವ ಜೋರಾಗಿದೆ. ಚಿಕ್ಕಮಗಳೂರು‌ ಬಿಜೆಪಿಯಲ್ಲಿ ಗೊಂದಲ‌ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದೆ. ನಿನ್ನೆಯಷ್ಟೇ ಸಿ.ಟಿ.ರವಿ ಅಪ್ತ ತಮ್ಮಯ್ಯ ಬಿಜೆಪಿಗೆ ಗುಡ್ ಬೈ ಹೇಳಿದ್ದರು. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟು ತಮ್ಮ ಬೆಂಬಲಿಗರು, ಬಿಜೆಪಿಯಲ್ಲಿರುವ ಅತೃಪ್ತ ಆಪ್ತರೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದರು.

ಬೆಂಬಲಿಗರ ಜೊತೆ ಗೌಪ್ಯ ಸಭೆ ನಡೆಸಿದ ತಮ್ಮಯ್ಯ: ನಾನು 17 ವರ್ಷದಿಂದ ಬಿಜೆಪಿ ಬಾವುಟ ಹಿಡಿದು, ಕಟ್ಟಿ, ಬ್ಯಾನರ್ ಕಟ್ಟಿ ವಿವಿಧ ಹುದ್ಧೆಗಳನ್ನ ನಿರ್ವಹಿಸಿದ್ದೇನೆ. ನನಗೂ ಚಿಕ್ಕಮಗಳೂರು ತಾಲೂಕಿನ ಬಿಜೆಪಿ ಟಿಕೆಟ್ ಬೇಕೆಂದು ಹಾಲಿ ಶಾಸಕ ಸಿ.ಟಿ.ರವಿ ವಿರುದ್ಧ ತೊಡೆ ತಟ್ಟಿ ಟಿಕೆಟ್ ಕೇಳಿದ್ದ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಡಿ.ತಮ್ಮಯ್ಯ ಬಿಜೆಪಿಗೆ ಗುಡ್‍ಬೈ ಹೇಳಿ ಬೆಂಬಲಿಗರ ಜೊತೆ ಗೌಪ್ಯ ಸಭೆ ನಡೆಸಿದ್ದಾರೆ. ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಅತೃಪ್ತ ಆಪ್ತರೊಂದಿಗೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ. ಹೆಚ್.ಡಿ.ತಮ್ಮಯ್ಯ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಲಿಂಗಾಯುತ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ತಮ್ಮಯ್ಯ ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದಂತೆ ಬಿಜೆಪಿಯಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ. 

ಬಿಜೆಪಿಗೆ ಗುಡ್ ಬೈ ಹೇಳಿದ ಶಾಸಕ ಸಿ.ಟಿ ರವಿ ಅಪ್ತಬಣದಲ್ಲಿ ಗುರುತಿಸಿಕೊಂಡಿದ್ದ ಹೆಚ್.ಡಿ. ತಮ್ಮಯ್ಯ

ಬದಲಾವಣೆಯ ಸಂಕಲ್ಪ ಯಾತ್ರೆ ಆರಂಭಿಸಿರೋ ಹೆಚ್.ಡಿ.ತಮ್ಮಯ್ಯ: ಸಿ.ಟಿ.ರವಿ ವಿರುದ್ಧ ಬದಲಾವಣೆಯ ಸಂಕಲ್ಪ ಯಾತ್ರೆ ಆರಂಭಿಸಿರೋ ಹೆಚ್.ಡಿ.ತಮ್ಮಯ್ಯ ಇದೇ 19ರಂದು ಬೆಂಗಳೂರಿನ ಕೆ.ಪಿ.ಸಿ.ಸಿ.ಕಚೇರಿಯಲ್ಲಿ ನೂರಾರು ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಲಿದ್ದಾರೆ. ನಿನ್ನೆ ತಾನೇ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಿ.ಟಿ.ರವಿ ಆಪ್ತ ಹೆಚ್.ಡಿ ತಮ್ಮಯ್ಯ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಆದರೆ, ಕಾಂಗ್ರೆಸ್‍ಗೆ ನಾನು ಯಾವುದೇ ಬೇಡಿಕೆ ಇಲ್ಲದೆ ಸೇರುತ್ತೇನೆ. ಈಗಾಗಲೇ 6 ಜನ ಟಿಕೆಟ್‍ಗಾಗಿ ಅರ್ಜಿ ಹಾಕಿದ್ದಾರೆ. ಗಾಯತ್ರಿ ಶಾಂತೇಗೌಡ ಹಾಕಿಲ್ಲ. ಅವರು ಹಾಗೂ ನನ್ನನ್ನ ಸೇರಿಸಿ ಸರ್ವೇ ಮಾಡಿಸಲಿ. ಯಾರಿಗೆ ಟಿಕೆಟ್ ಕೊಟ್ಟರೂ ನಾನು ಬೆಂಬಲ ನೀಡಲು ಸಿದ್ಧ. ನನಗೆ ಸಿಕ್ಕರೆ ಎಲ್ಲರೂ ಬೆಂಬಲ ನೀಡಲಿ ಎಂದು ಕೇಳಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್