ಸಿಟಿ ರವಿ ಸಹ ದೆಹಲಿಯಲ್ಲಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ

By Suvarna News  |  First Published Aug 18, 2020, 3:51 PM IST

ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರು ಇಂದು (ಮಂಗಳವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದಾರೆ.


ನವದೆಹಲಿ, (ಆ.18): ಅದ್ಯಾಕೋ ಏನೋ ಒಂದಲ್ಲ ಒಮದು ನೆಪ ಮಾಡಿಕೊಂಡು ರಾಜ್ಯ ಸಚಿವರುಗಳು ದೆಹಲಿಗೆ ತೆರಳುತ್ತಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನ ಭೇಟಿ ಮಾಡಿದ್ದರು.

ಇದೀಗ ಸಚಿವರಾದ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಸಿಟಿ ರವಿ ಸಹ ದೆಹಲಿಗೆ ಹಾರಿದ್ದು, ಕೇಂದ್ರ ನಾಯಕರನ್ನ ಭೇಟಿ ಮಾಡಿದ್ದಾರೆ.

Tap to resize

Latest Videos

ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ: ಸಚಿವ ಸ್ಥಾನ ಉಳಿಸಿಕೊಳ್ಳಲು ದೆಹಲಿ ದಂಡಯಾತ್ರೆ..!

ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಜಿಲ್ಲೆಯ ಕಾಫಿ ಬೆಳೆಗಾರರು ಮತ್ತು ರೈತರು ಎದುರಿಸುತ್ತಿರುವ ಸಂಕಷ್ಟಗಳನ್ನು ವಿವರಿಸಿದ ಸಚಿವ ರವಿ ಅವರು, ಕೂಡಲೇ ವಿಶೇಷ ಪ್ಯಾಕೇಜ್ ಘೋಷಿಸಿ ಹಿತ ಕಾಪಾಡುವಂತೆ ಮನವಿ ಮಾಡಿದರು.

ಸತತ ಬರಗಾಲ, ಭಾರೀ ಪ್ರವಾಹ ಹಾಗೂ ರೋಗಗಳಿಂದ ತತ್ತರಿಸಿ ಹೋಗಿರುವ ಚಿಕ್ಕಮಗಳೂರು ಜಿಲ್ಲೆಯ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಮತ್ತು ರೈತರು ತೀವ್ರ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ತಕ್ಷಣವೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಸಚಿವ ಸಿ.ಟಿ.ರವಿ ಅವರು ಒತ್ತಾಯಿಸಿದ್ದಾರೆ.

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಸತತ ಎರಡು ವರ್ಷದಿಂದ ಪ್ರವಾಹ ಉಂಟಾಗಿ ಬೆಳೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಇದರಿಂದ ಸಾವಿರಾರು ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು.

ಇದರ ಜತೆಗೆ ಈ ಬಾರಿ ರಾಜ್ಯದಲ್ಲಿ ಕೋವಿಡ್-19 ಸೋಂಕು ಬಂದ ಪರಿಣಾಮ ರೈತರ ಪರಿಸ್ಥಿತಿ ಹೇಳತೀರದಾಗಿದೆ. ಒಂದಾದ ಮೇಲೊಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇರುವುದರಿಂದ ಸರ್ಕಾರ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದರು.

click me!