ರಾಜ್ಯದಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ನೌಕರರ ಆತ್ಮ*ಹತ್ಯೆ, ಸರ್ಕಾರದ ವಿರುದ್ಧ ಸಿ ಟಿ ರವಿ ವಾಗ್ದಾಳಿ

Published : Oct 18, 2025, 04:03 PM IST
CT Ravi

ಸಾರಾಂಶ

ರಾಜ್ಯದಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ನೌಕರರ ಆತ್ಮ8ಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು  ಸರ್ಕಾರದ ಪ್ರಾಯೋಜಿತ ಕೊಲೆ ಎಂದು ಆರೋಪಿಸಿದ್ದಾರೆ.

ಚಿಕ್ಕಮಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಳೆದ ಎರಡು ವರ್ಷಕ್ಕಿಂತ ಹೆಚ್ಚು ಅವಧಿಯಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ, ಬಿಜೆಪಿ ಹಿರಿಯ ನಾಯಕ ಮತ್ತು ಪರಿಷತ್ ಸದಸ್ಯ ಸಿ.ಟಿ. ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿ.ಟಿ. ರವಿ, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಮಾನವೀಯತೆಯ ಕೊರತೆಯಿಂದ ಸರ್ಕಾರಿ ನೌಕರರು ಆತ್ಮಹತ್ಯೆ ಮಾಡುವ ಪರಿಸ್ಥಿತಿ ಉಂಟಾಗಿದೆ. ಇದು ಸರಳ ಆತ್ಮಹತ್ಯೆಯಲ್ಲ, ಸರ್ಕಾರದ ಪ್ರಾಯೋಜಿತ ಕೊಲೆ ಎಂದು ಗಂಭೀರ ಆರೋಪ ಹೊರಿಸಿದರು.

20ಕ್ಕೂ ಹೆಚ್ಚು ಸರ್ಕಾರಿ ನೌಕರರ ಸಾವು

ರವಿ ಅವರ ಪ್ರಕಾರ, ಸರ್ಕಾರಿ ನೌಕರರು ಸಂಬಳ ದೊರೆಯದಿರುವುದು, ಇಲಾಖೆಯ ನಿರ್ಲಕ್ಷ್ಯ, ಆಡಳಿತಾತ್ಮಕ ಅಸಮರ್ಪಕತೆ ಮತ್ತು ಮೇಲಧಿಕಾರಿಗಳ ಒತ್ತಡ ಇತ್ಯಾದಿ ಕಾರಣಗಳಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸಚಿವರು, ಶಾಸಕರು ಮತ್ತು ಅಧಿಕಾರಿಗಳ ಬೇಜವಾಬ್ದಾರಿಯ ವರ್ತನೆಯಿಂದ ನೌಕರರು ನಿರಾಶೆಗೆ ತಳ್ಳಲ್ಪಟ್ಟಿದ್ದಾರೆ. ಸಂಬಳವನ್ನೇ ಸಮಯಕ್ಕೆ ನೀಡದಿರುವ ಕಾರಣ ಹಲವರು ಡೆತ್ ನೋಟ್ ಬರೆದಿಟ್ಟು ಜೀವನ ಕೊನೆಗೊಳಿಸುತ್ತಿದ್ದಾರೆ. ಇದಕ್ಕೆ ಸರ್ಕಾರವೇ ಹೊಣೆಗಾರ ಎಂದು ಅವರು ಹೇಳಿದರು.

ಸಿಎಂ ವಿರುದ್ಧ ತೀವ್ರ ಟೀಕೆ

ಸಿ.ಟಿ. ರವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರದ ವಿರುದ್ಧ ಕಿಡಿ ಉಗಿಯುತ್ತಾ, ಸಿಎಂ ಕಣ್ಣು ಇದ್ದು ಕುರುಡರಂತೆ, ಕಿವಿ ಇದ್ದು ಕಿವುಡರಂತೆ, ಹೃದಯ ಇದ್ದು ಮಾನವೀಯತೆ ಸತ್ತಂತಾಗಿದೆ. ಸರ್ಕಾರಕ್ಕೆ ಹೃದಯ ಇದೆಯೋ ಇಲ್ಲವೋ ಗೊತ್ತಿಲ್ಲ, ಆದರೆ ಮಾನವೀಯತೆ ಸತ್ತಿರುವುದು ಸ್ಪಷ್ಟವಾಗುತ್ತಿದೆ ಎಂದು ಆರೋಪಿಸಿದರು. ಅವರು ಮುಂದುವರಿಸಿ, ಈ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಮಾತ್ರ ಪ್ರಾಯಶ್ಚಿತ್ತ ಸಾಧ್ಯ. ಸರ್ಕಾರ ಹೃದಯಹೀನವಾಗಿ ವರ್ತಿಸುತ್ತಿದೆ. ಸರ್ಕಾರಿ ನೌಕರರ ಜೀವವನ್ನು ಕಾಳಜಿ ಇಲ್ಲದೆ ಬಲಿಯಾಗಿ ಬಳಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಪ್ಪ ಚರ್ಮದ ಸರ್ಕಾರಕ್ಕೆ ರವಿ ತೀವ್ರ ಟೀಕೆ

ರವಿ ಸರ್ಕಾರವನ್ನು ದಪ್ಪ ಚರ್ಮದ ಸರ್ಕಾರ ಎಂದು ವ್ಯಂಗ್ಯವಾಗಿ ಟೀಕಿಸಿದರು. “ದಪ್ಪ ಚರ್ಮಕ್ಕೆ ಕೆಲವೊಮ್ಮೆ ಬಾರ್ಕೋಲಿನ ಚಡಿ ನಾಟುತ್ತೆ, ಕರೆಂಟ್ ಶಾಕ್ ಹೊಡೆದರೆ ಸಹ ನಾಟುತ್ತೆ. ಆದರೆ ಈ ಸರ್ಕಾರಕ್ಕೆ ಯಾವುದೇ ನೋವು ಆಗ್ತಿಲ್ಲ. ಇದು ದಪ್ಪ ಚರ್ಮವೋ ಅಥವಾ ಸತ್ತ ಚರ್ಮವೋ ಎಂಬ ಅನುಮಾನ ಬರುತ್ತಿದೆ. ಕರೆಂಟ್ ಶಾಕ್ ಕೂಡ ಇವರಲ್ಲಿ ಮಾನವೀಯತೆಯನ್ನು ಚಿಗುರಿಸುತ್ತಿಲ್ಲ ಎಂದು ಅವರು ಗರಳಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ