ನಮ್ಮ ಹಳೆಯ ಚಡ್ಡಿಗಳನ್ನು ಕಳಿಸಿಕೊಡುತ್ತೇವೆ: ಕಾಂಗ್ರೆಸ್ ನಾಯಕರ ವಿರುದ್ದ ಸಿ.ಟಿ.ರವಿ ವಾಗ್ದಾಳಿ

Published : Jun 05, 2022, 09:33 PM IST
ನಮ್ಮ ಹಳೆಯ ಚಡ್ಡಿಗಳನ್ನು ಕಳಿಸಿಕೊಡುತ್ತೇವೆ: ಕಾಂಗ್ರೆಸ್ ನಾಯಕರ ವಿರುದ್ದ ಸಿ.ಟಿ.ರವಿ ವಾಗ್ದಾಳಿ

ಸಾರಾಂಶ

ಸಚಿವ ನಾಗೇಶ್ ಮನೆ ಮುಂದೆ ಪಠ್ಯ ಪುಸ್ತಕ ವಿಚಾರವಾಗಿ ನಡೆದಂತಹ ಪ್ರತಿಭಟನೆ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಘಟನೆ ವೇಳೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಚಡ್ಡಿ ಸುಟ್ಟ ಪ್ರಕರಣ, ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗೆ ಸಿ.ಟಿ ರವಿ ಆಕ್ರೋಶವನ್ನು ಹೊರಹಾಕಿದ್ದಾರೆ.

ವರದಿ: ಆಲ್ದೂರು‌ ಕಿರ,ಣ್ ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು (ಜೂ.05): ಸಚಿವ ನಾಗೇಶ್ ಮನೆ ಮುಂದೆ ಪಠ್ಯ ಪುಸ್ತಕ ವಿಚಾರವಾಗಿ ನಡೆದಂತಹ ಪ್ರತಿಭಟನೆ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಘಟನೆ ವೇಳೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಚಡ್ಡಿ ಸುಟ್ಟ ಪ್ರಕರಣ, ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗೆ ಸಿ.ಟಿ ರವಿ ಆಕ್ರೋಶವನ್ನು ಹೊರಹಾಕಿದ್ದಾರೆ.

ನಮ್ಮ ಹಳೆಯ ಚಡ್ಡಿಗಳನ್ನು ಕಳಿಸಿಕೊಡುತ್ತೇವೆ: ಅವರು ಚಡ್ಡಿಯನ್ನು ಸುಟ್ಟುಕೊಂಡು ಇರಲಿ, ಹಳೇ ಚಡ್ಡಿಗಳು ಇವೆ. ಅವನ್ನೂ ಕೊಡುತ್ತೇವೆ ಸುಟ್ಟುಕೊಂಡೇ ಇರಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನ ಬಸವಹನಹಳ್ಳಿಯ ತಮ್ಮ ನಿವಾಸದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಕೋಮು ನಶೆ ಏರಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಡ್ಗೆವಾರ್ ಕಂಡರೆ ಇವರಿಗೆ ಯಾಕೆ ಸಂಕಟ. ಹೆಡ್ಗೆವಾರ್ ಭಾರತ್ ಮಾತಾ ಕಿ ಜೈ ಅನ್ನೋ ಶಿಕ್ಷಣವನ್ನ ಕಲಿಸಿದ್ದರು. ಭಾರತಕ್ಕೆ ಬಾಂಬ್ ಹಾಕುವುದನ್ನಲ್ಲ ಎಂದರು. ಭಾರತಕ್ಕೆ ಬಾಂಬ್ ಹಾಕುವವರು ಸಿದ್ದರಾಮಯ್ಯಗೆ ಬಹಳ ಬೇಕಾದವರು. ಆದರೆ ಭಾರತ್ ಮಾತಾ ಕೀ ಜೈ ಅಂದರೆ ಇವರಿಗೆ ಉರಿ ಹತ್ತುತ್ತೆ ಎಂದು ಪ್ರಶ್ನಿಸಿದ್ದಾರೆ. 

ಪ್ರೀತಿ-ಪ್ರೇಮ..ಪ್ರಣಯ...ಮದ್ವೆಯಾದ ಒಂದೇ ವರ್ಷದಲ್ಲಿ ‌ನವವಿವಾಹಿತೆ ಸಾವು

ಹೆಡ್ಗೆವಾರ್ ಭಾಷಣ ಇರಬೇಕೋ, ಬೇಡ್ವೋ ಅನ್ನೋದನ್ನ ಕೇಳೋಕೆ ಸಿದ್ದರಾಮಯ್ಯ ಯಾರು: ಪಠ್ಯ ಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಇರಬೇಕೋ, ಬೇಡ್ವೋ ಅನ್ನೋದನ್ನ ಕೇಳೋಕೆ ಸಿದ್ದರಾಮಯ್ಯ ಯಾರು. ಪಠ್ಯಪುಸ್ತಕ ಪರಿಷ್ಕರಣ ಸಮಿತಿ ತೀರ್ಮಾನ ಮಾಡಿದೆ. ಸರ್ಕಾರ ಅದನ್ನ ಒಪ್ಪಿದೆ. ಮಧ್ಯದಲ್ಲಿ ನಂದು ಎಲ್ಲಿಡಲಿ ಅಂತ ಕೇಳೋಕೆ ಇವರ್ಯಾರು. ಇವರು ಹೇಳಿದಂತೆಲ್ಲಾ ಕೇಳೋಕೆ ಆಗುತ್ತಾ ಎಂದರು. 

ಅಂಬೇಡ್ಕರ್ ಬಗ್ಗೆ ನಮಗಿರೋ ಅಭಿಮಾನಕ್ಕೆ ಇವರ ಸರ್ಟಿಫಿಕೇಟ್ ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ. ಇದೇ ಚಡ್ಡಿ, ಸಂಘಿ ನರೇಂದ್ರ ಮೋದಿಯವರೇ ಅಂಬೇಡ್ಕರ್ ಹುಟ್ಟೂರನ್ನ ಅಭಿವೃದ್ಧಿ ಮಾಡಿದ್ದು. ಭೀಮ್ ಆಪ್ ತಂದಿದ್ದು. ಒಂದಲ್ಲ ಎರಡು ಬಾರಿ ಅನಕ್ಷರಸ್ಥ ವ್ಯಕ್ತಿಯನ್ನ ಅಂಬೇಡ್ಕರ್ ಎದುರು ನಿಲ್ಲಿಸಿ ಸೋಲಿಸಿದ್ದು ಇದೇ ಕಾಂಗ್ರೆಸ್ ಇಂದು ಅಂಬೇಡ್ಕರ್ ಬಗ್ಗೆ ನಮಗೆ ಹೇಳುತ್ತಾರೆ ಎಂದು ಲೇವಡಿ ಮಾಡಿದ್ದಾರೆ. ಜವಾಹರ್‌ಲಾಲ್ ನೆಹರು ಭಾರತ ರತ್ನವನ್ನ ತಮಗೆ ತಾವೇ ಕೊಟ್ಕೊಂಡ್ರು. ಆದರೆ, ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನ ಕೊಡಲಿಲ್ಲ. 

ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡುವಂತೆ ಶಿಫಾರಸ್ಸು ಮಾಡಿದ್ದು ಅಟಲ್ ಬಿಹಾರಿ ವಾಜಪೇಯಿ. ಸಿದ್ದರಾಮಯ್ಯನೂ ಅಲ್ಲ, ಕಾಂಗ್ರೆಸ್ ಪಾರ್ಟಿಯೂ ಅಲ್ಲ. ಕಾಂಗ್ರೆಸ್ ಹೆಜ್ಜೆ-ಹೆಜ್ಜೆಗೂ ಅಂಬೇಡ್ಕರ್ ಅವರನ್ನು ತುಳಿಯುತ್ತಲೇ ಬಂದಿದೆ. ಇಂಥವರು ನಮಗೆ ಅಂಬೇಡ್ಕರ್ ಬಗ್ಗೆ ಉದ್ದುದ್ದ ಭಾಷಣ ಮಾಡುತ್ತಾರೆ ಎಂದು ಮಾತಿನಲ್ಲೇ ಪಂಚ್ ಕೊಟ್ಟಿದ್ದಾರೆ. ಇನ್ನು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಡಿಪಾಜಿಟ್ ಕಳೆದುಕೊಂಡಿದೆ. ಕರ್ನಾಟಕದಲ್ಲೂ ಹೋಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ. ದುರಂಹಕಾರ ಹಾಗೂ ಓಲೈಕೆ ರಾಜಕಾರಣವನ್ನ ರಾಜ್ಯದ ಜನ ಒಪ್ಪಲ್ಲ, ಕ್ಷಮಿಸಲ್ಲ ಎಂದು ಹೇಳಿದ್ದಾರೆ. 

Chikkamagaluru; ತಾಲೂಕು ಘೋಷಣೆಯಾಗಿ 3ವರ್ಷದ ಬಳಿಕ ತಹಶೀಲ್ದಾರ್ ಅಧಿಕಾರ ಸ್ವೀಕಾರ

ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಬಿದ್ದಾಗ ಡಿಕೆಶಿ-ಸಿದ್ದು ಬಾಯಿ ಬಂದ್ ಆಗಿತ್ತು. ಬೆಂಕಿ ಹಾಕಿದವರೆಲ್ಲಾ 'ದೆ ಆರ್ ಆಲ್ ಸಿದ್ದು ಅಂಡ್ ಡಿಕೆಶಿ ಬ್ರದರ್ಸ್' ಅದಕ್ಕೆ ಬಾಯಿ ಬಂದ್ ಆಗಿತ್ತು ಎಂದು ವ್ಯಂಗ್ಯವಾಡಿದ್ದಾರೆ. ಡಿಜೆಹಳ್ಳಿ-ಕೆಜೆಹಳ್ಳಿಯಲ್ಲಿ ನಡೆಯಿತಲ್ಲಾ ಅದನ್ನ ಇಡೀ ರಾಜ್ಯದಲ್ಲಿ ಮಾಡಲು ಹೊರಟಿದ್ದಾರಾ. ಇವರಿಗೆ ಒಳ್ಳೆದು ಬೇಡ. ಮತಾಂದತೆಯನ್ನ ಬೆಳೆಸೋದು ಇವರ ಗುರಿಯಂತೆ ಕಾಣತ್ತೆ ಎಂದರು. ಮತಾಂದತೆಗೆ ಕುಮ್ಮಕ್ಕು ಕೊಟ್ಟ ಪರಿಣಾಮ ದೇಶ ವಿಭಜನೆ ಆಯ್ತು. ಇವರು ಮತಾಂದತೆಗೆ ಮತ್ತೆ ಕುಮ್ಮಕ್ಕು ಕೊಡ್ತಿದ್ದಾರೆ. ಅವರ ಸರ್ವನಾಶವೂ ಆಗುತ್ತೆ ಎಂದು ಭವಿಷ್ಯ ನುಡಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ