* ಸಿದ್ದು ಮುಗಿಸಲು ಡಿಕೆಶಿ ಪಾದಯಾತ್ರೆ: ಕಟೀಲ್
* ಇನ್ನೂ 10 ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ
* 5 ರಾಜ್ಯ ಚುನಾವಣೆ ಬಳಿಕ ರಾಜ್ಯದ ಅರ್ಧ ಕಾಂಗ್ರೆಸ್ ಖಾಲಿ
ಬೆಂಗಳೂರು(ಮಾ.02): ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹೋರಾಟ ಆರಂಭವಾಗಿವೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಣ್ಣನನ್ನು(Siddaramaiah) ಮುಗಿಸಲು ಈ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ವ್ಯಂಗ್ಯವಾಡಿದ್ದಾರೆ.
ಮಂಗಳವಾರ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್(Congress), ಜೆಡಿಎಸ್(JDS) ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ(Karnataka) ಇನ್ನೂ 10 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವುದಿಲ್ಲ. ಬಳಿಕ ರಾಜ್ಯವು ಕಾಂಗ್ರೆಸ್ ಮುಕ್ತವಾಗಲಿದೆ ಎಂದರು.
Harsha Murder Case : ಹರ್ಷ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
ಮೇಕೆದಾಟು ಪಾದಯಾತ್ರೆ(Mekedatu Padayatra) ಅಧಿಕಾರಕ್ಕಾಗಿ ನಡೆಯುತ್ತಿರುವ ಪಾದಯಾತ್ರೆ. ರಾಜ್ಯ, ರಾಷ್ಟ್ರ ಮತ್ತು ಬಿಬಿಎಂಪಿಯಲ್ಲಿ ಕಾಂಗ್ರೆಸ್ ಸುದೀರ್ಘ ಅವಧಿಯಲ್ಲಿ ಅಧಿಕಾರ ಅನುಭವಿಸಿದೆ. ಆಗ ಮೇಕೆದಾಟು ಯೋಜನೆ ಅನುಷ್ಠಾನ ಮಾಡಿ ಬೆಂಗಳೂರಿಗೆ ನೀರು ಕೊಡಬೇಕೆಂದು ಅವರಿಗೆ ಅನಿಸಲಿಲ್ಲ. ಇವತ್ತು ಪಾದಯಾತ್ರೆಯ ನಾಟಕ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕರಾವಳಿಯಲ್ಲಿ ನಡೆಯುವ ಕಂಬಳಕ್ಕೆ ಜೋಡು ಕೋಣಗಳನ್ನು ಕಟ್ಟಿನೋಡಿಕೊಳ್ಳಲು ಒಬ್ಬರನ್ನು ಬಿಡಲಾಗುತ್ತದೆ. ಅದೇ ಮಾದರಿಯಲ್ಲಿ ಸುರ್ಜೇವಾಲಾರನ್ನು ಬಿಟ್ಟಿದ್ದಾರೆ. ನಮ್ಮವರು ಪ್ರಜಾಪ್ರಭುತ್ವದ(Democracy) ರಕ್ಷಣೆಗಾಗಿ ಜೈಲಿಗೆ ಹೋಗಿದ್ದಾರೆ. ಆದರೆ, ಕಾಂಗ್ರೆಸ್‌ನವರು ಲೂಟಿ ಮಾಡಿ ಜೈಲಿಗೆ ಹೋದವರು. ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದ ಬಳಿಕ ರಾಜ್ಯದ ಅರ್ಧ ಕಾಂಗ್ರೆಸ್ ಖಾಲಿ ಆಗಲಿದೆ ಎಂದು ಭವಿಷ್ಯ ನುಡಿದರು.
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ(BJP) ಸೇರ್ಪಡೆಯಾದ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, ಹಾಲಿನ ಜತೆ ಸಕ್ಕರೆ ಸೇರಿದರೆ ಹಾಲು ಮಾತ್ರ ಕಾಣುತ್ತದೆ. ಸಕ್ಕರೆ ಕಾಣುವುದಿಲ್ಲ. ಆದರೆ, ಆ ಹಾಲು ಸಿಹಿಯಾಗುತ್ತದೆ. ಸಮಾಜ, ಪಕ್ಷ ನಿಮ್ಮನ್ನು ಸ್ವೀಕರಿಸಿ ನೀವು ಇನ್ನಷ್ಟುಎತ್ತರಕ್ಕೆ ಬೆಳೆಯುವಂತಾಗಲಿ. ಹಿಂದೆ ಪರಿವಾರವಾದಿಯಾಗಿದ್ದ ನೀವು ಈಗ ರಾಷ್ಟ್ರೀಯವಾದಿ ಆಗಿದ್ದೀರಿ. ವ್ಯಕ್ತಿಗಿಂತ ಪಕ್ಷ ಶ್ರೇಷ್ಠ. ಪಕ್ಷಕ್ಕಿಂತ ದೇಶ ಶ್ರೇಷ್ಠ ಎಂಬ ಚಿಂತನೆ ನಮ್ಮದು. ಮುಂದಿನ ದಿನಗಳಲ್ಲಿ ಪಕ್ಷಕ್ಕಾಗಿ ದುಡಿಯಿರಿ. ಕರ್ತವ್ಯ ಮತ್ತು ಕಾರ್ಯವನ್ನು ಗಮನಿಸಿ ಅಧಿಕಾರ ಕೊಡಲಾಗುತ್ತದೆ. ಅವಕಾಶವನ್ನು ಬಳಸಿಕೊಂಡು ಬೆಳೆಯಿರಿ ಎಂದು ಸಲಹೆ ನೀಡಿದರು.
Harsha Murder Case: ಅಪರಾಧಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ(CT Ravi) ಮಾತನಾಡಿ, ಕಾಂಗ್ರೆಸ್‌ನವರು ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ. 2014ರಲ್ಲಿ ನರೇಂದ್ರ ಮೋದಿ(Narendra Modi) ಅವರು ಪ್ರಧಾನಿಯಾಗಲು ಸಾಧ್ಯವೇ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಸಿದ್ದರಾಮಯ್ಯನವರೇ, ನಿಮ್ಮಪ್ಪನಾಣೆಗೂ ನೀವು ಅಧಿಕಾರಕ್ಕೆ ಬರುವುದಿಲ್ಲ. ಪಕ್ಷದ ಶಾಸಕನ ಮನೆಗೆ ಬೆಂಕಿ ಹಾಕಿದ ಕಾಂಗ್ರೆಸ್ ಪಕ್ಷದವರಿಗೆ ಯಾರೂ ಮತ ಕೊಡುವುದಿಲ್ಲ ಎಂದರು.
ಹಿಜಾಬ್ ಗಲಭೆಯಿಂದಾದ ನಷ್ಟ ಬಗ್ಗೆ ಕಾಂಗ್ರೆಸ್ಸಿಗೆ ಚಿಂತೆ: ಕಟೀಲ್
ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ತಮ್ಮ ಯೋಜನೆಗಳ ಮೂಲಕ ಜನಮೆಚ್ಚುಗೆ, ಜನರ ವಿಶ್ವಾಸವನ್ನು ಹೆಚ್ಚಿಸಿಕೊಂಡಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಹಿಜಾಬ್ ಒಳಗೆ ಸೇರಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್(Nalin Kumar Kateel) ಲೇವಡಿ ಮಾಡಿದ್ದರು.
ಫೆ.22 ರಂದು ನಗರದ ಮಲ್ಲೇಶ್ವರದ ಬಿಜೆಪಿ(BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್(Hijab) ಗಲಭೆಯನ್ನು ಪ್ರಾರಂಭಿಸಲು ಎರಡೂ ಶಕ್ತಿಗಳು ಒಂದುಗೂಡಿವೆ. ಇದರಲ್ಲಿ ಮಾನಸಿಕ ಮತ್ತು ಬೌದ್ಧಿಕ ಚಿಂತನೆ ಕಾಂಗ್ರೆಸ್(Congress) ಪಕ್ಷದ್ದಾದರೆ, ದೈಹಿಕ ಚಿಂತನೆ ಎಸ್‌ಡಿಪಿಐನದ್ದು(SDPI). ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆಯನ್ನು ಸೃಷ್ಟಿಸಿವೆ. ಕಾಂಗ್ರೆಸ್ಸಿಗೆ ಹಿಜಾಬ್ ವಿಚಾರದಲ್ಲಿ ನಷ್ಟ ಆಗುವ ಅರಿವಾಗಿ ಅದು ಆತಂಕಕ್ಕೆ ಒಳಗಾಗಿದೆ ಎಂದು ವಿಶ್ಲೇಷಿಸಿದ್ದರು.