ಬಿಎಸ್‌ವೈ ಸರ್ವಾ​ನು​ಮ​ತದ ಆಯ್ಕೆ, ಬದಲಾವಣೆ ಪ್ರಶ್ನೆಯೇ ಇಲ್ಲ: ರವಿ

Published : Oct 09, 2019, 09:22 AM IST
ಬಿಎಸ್‌ವೈ ಸರ್ವಾ​ನು​ಮ​ತದ ಆಯ್ಕೆ, ಬದಲಾವಣೆ ಪ್ರಶ್ನೆಯೇ ಇಲ್ಲ: ರವಿ

ಸಾರಾಂಶ

ಬಿಎಸ್‌ವೈ ಸರ್ವಾ​ನು​ಮ​ತದ ಆಯ್ಕೆ, ಬದಲಾವಣೆ ಪ್ರಶ್ನೆಯೇ ಇಲ್ಲ: ರವಿ| ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ ಎಳೆದ ಸಚಿವ

ರಾಮನಗರ[ಅ.09]: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ದೇಶದ ಇತಿಹಾಸದಲ್ಲಿ 75 ವರ್ಷ ವಯಸ್ಸು ದಾಟಿರುವವರಿಗೆ ಅಧಿಕಾರ ಕೊಟ್ಟಿರುವುದು ಯಡಿಯೂರಪ್ಪ ಅವರಿಗೆ ಮಾತ್ರ. ಚುನಾವಣೆ ಪೂರ್ವದಲ್ಲೇ ಯಡಿಯೂರಪ್ಪ ನಮ್ಮ ಮು​ಖ್ಯ​ಮಂತ್ರಿ ಎಂದು ಘೋಷಣೆ ಮಾಡಿದ್ದೆವು ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿ​ಗಾ​ರ​ರೊಂದಿಗೆ ಮಾತನಾಡಿ, ಯಡಿ​ಯೂ​ರಪ್ಪ ಅವರನ್ನು ನಾವು ಬಹುಮತದಿಂದ ಆಯ್ಕೆ ಮಾಡಿರಲಿಲ್ಲ, ಸರ್ವಾನುಮತದಿಂದ ಆಯ್ಕೆ ಮಾಡಿದ್ದೇವೆ. ಹೀಗಾಗಿ ಯಾವುದೇ ಕಾರಣಕ್ಕೂ ಮುಖ್ಯ​ಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪನವರೇ ಅವಧಿ ಪೂರ್ಣ​ಗೊ​ಳಿ​ಸ​ಬೇ​ಕೆಂಬ ಅಪೇಕ್ಷೆ ಇದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬದಲಾವಣೆಯ ಗೊಂದಲಗಳಿಗೆ ತೆರೆ ಎಳೆದರು.

‘ಕೈ’ ಒಡೆದ ಮನೆ: ಕಾಂಗ್ರೆಸ್‌ನಲ್ಲಿ ಸರ್ವಾನುಮತವಿಲ್ಲ. ಪ್ರತಿಪಕ್ಷ ಸ್ಥಾನದ ಆಯ್ಕೆಯಲ್ಲಿ ಕಾಂಗ್ರೆಸ್‌ ಒಡೆದ ಮನೆಯಾಗಿದೆ. ಕಾಂಗ್ರೆಸ್ಸಿಗ​ರದು ಹೊಡೆದ ಮನಸ್ಸುಗಳಾಗಿವೆ. ಸಿದ್ದರಾಮಯ್ಯ ಸರ್ವಾನುಮತದ ನಾಯಕರಾಗುವ ಸ್ಥಿತಿಯಲ್ಲಿಲ್ಲ. ಒಂದು ವೇಳೆ ಅವರೇ ವಿಪಕ್ಷ$ನಾಯಕರಾದರೆ, ಒಂದು ಗುಂಪಿನ ನಾಯಕರಾಗುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ