ಮಕ್ಕಳಲ್ಲಿ ಜಾತ್ಯತೀತ ಮನೋಭಾವ ಬೆಳೆಸಿ ವಿಶ್ವಮಾನವ ಮಾಡುವುದೇ ಶಿಕ್ಷಣ: ಸಿಎಂ ಸಿದ್ದು

By Kannadaprabha NewsFirst Published Sep 6, 2023, 10:41 AM IST
Highlights

ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳಾಗಿದ್ದಾರೆ. ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ವಿದ್ಯೆ ಕಲಿಸುವುದಷ್ಟೆಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೇ ಶಿಕ್ಷಣದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. 
 

ಬೆಂಗಳೂರು (ಸೆ.06): ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳಾಗಿದ್ದಾರೆ. ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ವಿದ್ಯೆ ಕಲಿಸುವುದಷ್ಟೆಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೇ ಶಿಕ್ಷಣದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯಿಂದ ‘ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌’ ಅವರ ಜನ್ಮ ದಿನದ ಅಂಗವಾಗಿ ಮಂಗಳವಾರ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, 43 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ರೈತರು, ಸೈನಿಕರು, ಶಿಕ್ಷಕರು ಆದರ್ಶ ಸಮಾಜದ ಆಧಾರ ಸ್ತಂಭಗಳಾಗಿದ್ದು ದೇಶದ ಭವಿಷ್ಯ ರೂಪಿಸುವ ಕಾಯಕ ಜೀವಿಗಳೂ ಹೌದು. ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವಯುತವಾದ ಸ್ಥಾನವಿದೆ. ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ಶಿಕ್ಷಕರು ವಿದ್ಯೆ ಕಲಿಸುವುದಕ್ಕೆ ಸೀಮಿತವಾಗದೆ ಮಕ್ಕಳನ್ನು ವಿಶ್ವಮಾನವರನ್ನಾಗಿ ರೂಪಿಸಬೇಕು. ಮಕ್ಕಳಲ್ಲಿ ಜಾತ್ಯತೀತ ಮನೋಭಾವ, ಮೌಢ್ಯವಿರೋಧಿ ಭಾವನೆ ಬೆಳೆಸುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದು ಕರೆ ನೀಡಿದರು.

500 ಕೋಟಿ ಅರಣ್ಯ ನಿಧಿ ನೀಡದ ಕೇಂದ್ರ ಸರ್ಕಾರ: ಸಚಿವ ಈಶ್ವರ ಖಂಡ್ರೆ ಗರಂ

ಎಮ್ಮೆ ಕಾಯುತ್ತಿದ್ದವನು ಶಾಲೆಗೆ ಸೇರಿದೆ: ‘ನಮ್ಮ ತಂದೆ ನನ್ನನ್ನು ಶಾಲೆಗೆ ಕಳುಹಿಸಿರಲಿಲ್ಲ. ಎಮ್ಮೆ ಕಾಯುತ್ತಿದ್ದೆ. ಆಗ ಊರಿನಲ್ಲಿದ್ದ ನಂಜೇಗೌಡರು ವೀರ ಮಕ್ಕಳ ಕುಣಿತಕ್ಕೆ ನನ್ನನ್ನು ಸೇರಿಸಿಕೊಂಡಿದ್ದರು. ಆದರೆ ಊರಿಗೆ ಹೊಸದಾಗಿ ಬಂದ ಸಕಲೇಶಪುರ ಮೂಲದ ರಾಜಪ್ಪ ಎಂಬ ಮುಖ್ಯ ಶಿಕ್ಷಕರಿಂದ ನನ್ನ ಬದುಕೇ ಬದಲಾಯಿತು. ನಮ್ಮ ಅಪ್ಪನಿಗೆ ತಿಳಿಹೇಳಿ ನೇರವಾಗಿ 5 ನೇ ತರಗತಿಗೆ ನನಗೆ ಪ್ರವೇಶ ಕೊಡಿಸಿದರು. ಇಲ್ಲದಿದ್ದರೆ ನಾನು ವಕೀಲನಾಗುತ್ತಿರಲಿಲ್ಲ, ಶಾಸಕನೂ ಆಗುತ್ತಿರಲಿಲ್ಲ, ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ’ ಎಂದು ತಮ್ಮ ಶಿಕ್ಷಕರನ್ನು ಸ್ಮರಿಸಿದರು.

‘ವೈಜ್ಞಾನಿಕ ಮನೋಭಾವ ಬೆಳೆಯದಿದ್ದರೆ ಯಾವ ಡಿಗ್ರಿ, ಡಾಕ್ಟರೇಟ್‌ ಪಡೆದರೂ ಪ್ರಯೋಜನವಿಲ್ಲ. ತಲೆಯೊಳಗೆ ಮೌಢ್ಯ ತುಂಬಿಕೊಂಡವರನ್ನು ಶಿಕ್ಷಕರು ಎನ್ನಲು ಸಾಧ್ಯವಿಲ್ಲ. ಶಿಕ್ಷಕರೂ ಅಪ್‌ಡೇಟ್‌ ಆಗಬೇಕು. ಶಿಕ್ಷಕ ವೃತ್ತಿಗೆ ಬರುವ ಎಲ್ಲರಿಗೂ ಒಂದೇ ರೀತಿಯ ತರಬೇತಿ ನೀಡಲಾಗುತ್ತದೆ. ಆದರೆ ಉಡುಪಿ, ಮಂಗಳೂರಿನ ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶದಲ್ಲಿ ಮುಂದಿರುತ್ತಾರೆ. ಈ ಭಾಗದಲ್ಲಿ ಕ್ರಿಶ್ಚಿಯನ್‌ ಮಿಷನರಿಗಳು ಸ್ವಾತಂತ್ರ್ಯ ಪೂರ್ವದಿಂದಲೂ ಇರುವುದೂ ಇದಕ್ಕೆ ಕಾರಣವಾಗಿರಬಹುದು’ ಎಂದು ವ್ಯಾಖ್ಯಾನಿಸಿದರು.

ಶಿಕ್ಷಣಕ್ಕೆ ಆದ್ಯತೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಾಲೆಗಳಲ್ಲಿ 1 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರಕ್ಕೆ ಒಂದು ದಿನ ನೀಡುತ್ತಿದ್ದ ಮೊಟ್ಟೆಯನ್ನು 10 ನೇ ತರಗತಿಯವರೆಗೂ ವಿಸ್ತರಿಸಿ ವಾರದಲ್ಲಿ ಎರಡಟು ದಿನ ಮೊಟ್ಟೆವಿತರಿಸಲಾಗುತ್ತಿದೆ. ಶಿಕ್ಷಕರನ್ನು ಪಾರದರ್ಶಕವಾಗಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಶಿಕ್ಷಕರ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಮಕ್ಕಳಿಗೆ ಒಟ್ಟು ಮೂರು ಬಾರಿ ವಾರ್ಷಿಕ ಪರೀಕ್ಷೆ ಬರೆಯಲು ಅವಕಾಶ ನೀಡುವ ದಿಟ್ಟನಿರ್ಧಾರ ಕೈಗೊಳ್ಳಲಾಗಿದೆ ಎಂದು ಇಲಾಖೆ ಯೋಜನೆಗಳ ಮಾಹಿತಿ ನೀಡಿದರು. ರಾಜ್ಯಸಭಾ ಸದಸ್ಯ ಲೆಹರ್‌ ಸಿಂಗ್‌, ಶಾಸಕ ರಿಜ್ವಾನ್‌ ಹರ್ಷದ್‌, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ.ಶರವಣ, ಅ.ದೇವೇಗೌಡ, ನಾಗರಾಜ ಯಾದವ್‌ ಮತ್ತಿತರರು ಉಪಸ್ಥಿತರಿದ್ದರು.

ದೇಶಕ್ಕೆ ‘ಭಾರತ’ ಎಂದು ಮರುನಾಮಕರಣ ಅನಗತ್ಯ: ಸಿದ್ದರಾಮಯ್ಯ

ಲ್ಯಾಪ್‌ಟ್ಯಾಪ್‌ ವಿತರಣೆ ಶೀಘ್ರ: ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪರಿಶಿಷ್ಟಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟ್ಯಾಪ್‌ ವಿತರಿಸುವ ಯೋಜನೆಯನ್ನು ಜಾರಿಗೆ ತಂದಿದ್ದರು. ಬಳಿಕ ಬಂದ ಸರ್ಕಾರ ಇದನ್ನು ಸ್ಥಗಿತಗೊಳಿಸಿತ್ತು. ಈಗ ಪುನಃ ಯೋಜನೆ ಜಾರಿಗೊಳಿಸಲು ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ತಿಳಿಸಿದರು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪುನಃ ಲ್ಯಾಪ್‌ಟ್ಯಾಪ್‌ ವಿತರಿಸಲಾಗುವುದು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಬಜೆಟ್‌ನಲ್ಲಿ ಶಿಕ್ಷಣ ಇಲಾಖೆಗೆ ಶೇ.1.71 ರಷ್ಟುಮಾತ್ರ ಅನುದಾನ ನೀಡಿದ್ದು ಮುಂದಿನ ದಿನಗಳಲ್ಲಿ ಇದನ್ನು ಹೆಚ್ಚಿಸುವ ಭರವಸೆಯೂ ಸಿಕ್ಕಿದೆ ಎಂದು ಸ್ಪಷ್ಟಪಡಿಸಿದರು.

click me!