ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

Kannadaprabha News   | Asianet News
Published : Dec 24, 2020, 12:50 PM IST
ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಡಿಕೆಶಿ ಪ್ರತಿಕ್ರಿಯೆ

ಸಾರಾಂಶ

ಈ ಬಾರಿಯಿಂದ ಎಲ್ಲ ಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆ ಮೂಲಕ ಸ್ಪರ್ಧೆ| ಪ್ರತಿ ವಾರ್ಡ್‌ ಮಟ್ಟದ ಸಮಿತಿ ರಚನೆಗೆ ಪ್ರತ್ಯೇಕ ಸಮಿತಿ ರಚನೆ| ನಾವು ಚುನಾವಣೆಯಲ್ಲಿ ಗೆಲ್ಲುತ್ತೇವೋ, ಸೋಲುತ್ತೇವೋ ಅದು ನಂತರ. ನಮ್ಮ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸುವುದು ಮುಖ್ಯ: ಡಿಕೆಶಿ| 

ಬೆಂಗಳೂರು(ಡಿ.24): ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸೇರಿದಂತೆ ಇನ್ನು ಮುಂದೆ ಯಾವುದೇ ಪಾಲಿಕೆ ಚುನಾವಣೆಗಳಲ್ಲೂ ನಮ್ಮ ಪಕ್ಷ ಹೊಂದಾಣಿಕೆಗೆ ಹೋಗುವುದಿಲ್ಲ. ನಮ್ಮ ಪಕ್ಷದ ಚಿಹ್ನೆ ನೀಡಿ ಪಕ್ಷದಿಂದ ಅಭ್ಯರ್ಥಿ ಕಣಕ್ಕಿಳಿಸಿ ಚುನಾವಣೆ ಎದುರಿಸಲು ತೀರ್ಮಾನಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನಗಳ ಕಾಲ ಬೆಳಗಾವಿ ಪಾಲಿಕೆಯಯಲ್ಲಿ ಕಾಂಗ್ರೆಸ್‌ ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಂಡು ತನ್ನ ಅಭ್ಯರ್ಥಿ ಹಾಕುತ್ತಿತ್ತು. ಈ ಬಾರಿಯಿಂದ ಎಲ್ಲ ಪಾಲಿಕೆ ಚುನಾವಣೆಗಳಲ್ಲಿ ಪಕ್ಷದ ಚಿಹ್ನೆ ಮೂಲಕ ಸ್ಪರ್ಧಿಸಲಾಗುವುದು. ಪ್ರತಿ ವಾರ್ಡ್‌ ಮಟ್ಟದ ಸಮಿತಿ ರಚನೆಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ. ನಾವು ಚುನಾವಣೆಯಲ್ಲಿ ಗೆಲ್ಲುತ್ತೇವೋ, ಸೋಲುತ್ತೇವೋ ಅದು ನಂತರ. ನಮ್ಮ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸುವುದು ಮುಖ್ಯ ಎಂದರು.

'ಯಡಿಯೂರಪ್ಪ ತಡ ಮಾಡದೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು'

ಕುಮಾರಸ್ವಾಮಿ ಈಗಲೂ ಸ್ನೇಹಿತರೇ:

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ನನ್ನ ಹಳೇ ಗೆಳೆಯ ಅಂತ ಏಕೆ ಹೇಳುತ್ತೀರಿ? ಅವರು ಈ ಹಿಂದೆ ಮಾತ್ರ ನನ್ನ ಸ್ನೇಹಿತರಾಗಿರಲಿಲ್ಲ. ಈಗಲೂ ಅವರು ನನ್ನ ಸ್ನೇಹಿತರೇ. ಮುಂದೆಯೂ ಇರುತ್ತಾರೆ ಎಂದು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ
ಹೈಕಮಾಂಡ್‌ ನಿರ್ಧಾರವೇ ಅಂತಿಮ: ಸಿಎಂ ಬದಲು ವಿಚಾರಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ